ಹುಬ್ಬಳ್ಳಿ:ಬಂಜಾರ ಸಮುದಾಯವನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದು, ಗೃಹ ಸಚಿವರು ಇದನ್ನು ತಡೆಯಬೇಕು ಎಂದು ಬಂಜಾರ ಕಾಲೋನಿ ನಿವಾಸಿಗಳು ಮನವಿ ಮಾಡಿದ್ದಾರೆ.
ಹಣದ ಆಸೆ ತೋರಿಸಿ ಮುಗ್ಧರನ್ನು ಮತಾಂತರ ಮಾಡುತ್ತಿದ್ದಾರೆ. ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕು ಎಂದು ನಿವಾಸಿಗಳು, ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.
ಬಂಜಾರ ಕಾಲೋನಿಯಲ್ಲಿ ಹಲವು ವರ್ಷಗಳಿಂದ ಲಂಬಾಣಿ ಜನಾಂಗದವರು ವಾಸವಾಗಿದ್ದಾರೆ. ಕಾಲೋನಿಗೆ ಆಗಮಿಸುವ ಕೆಲವರು ಮುಗ್ಧರಿಗೆ ಹಣ ಸೇರಿದಂತೆ ಹಲವು ಆಮಿಷಗಳನ್ನು ಒಡ್ಡಿ ಮತಾಂತರ ಮಾಡಲು ಮುಂದಾಗಿದ್ದಾರೆ. ಇದರಿಂದ ಕಾಲೋನಿಯ ನಿವಾಸಿಗಳು ಭಯಗೊಂಡಿದ್ದಾರೆ. ಕೂಡಲೇ ಸಚಿವರು ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು.
ನಿವಾಸಿಗಳು ಸಲ್ಲಿಸಿದ್ದ ಮನವಿಯನ್ನು ಗೃಹ ಸಚಿವರು ಪೊಲೀಸ್​ ಆಯುಕ್ತ ಆರ್.ದಿಲೀಪ್​ ಅವರಿಗೆ ನೀಡಿ, ತನಿಖೆ ನಡೆಸಿ ಕೃತ್ಯದಲ್ಲಿ ಭಾಗಿಯಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × 4 =
Remember me
