ಬೆಂಗಳೂರು:ಗ್ರಾಮೀಣ ಪ್ರದೇಶದ ಶೌಚ ಗೃಹ ನಿರ್ಮಾಣ, ಮಹಿಳಾ ಸಬಲೀಕರಣ, ಕೂಸಿನ ಮನೆ, ಗ್ರಂಥಾಲಯಗಳಲ್ಲಿ ಅರಿವು ಕೇಂದ್ರ ಮತ್ತಿತರ ಸಾಮಾಜಿಕ ಬದ್ಧತಾ ಕಾರ್ಯಕ್ರಮಗಳಿಗೆ ಬ್ಯಾಂಕ್‌ಗಳು ತಮ್ಮ ಸಾಮಾಜಿಕ ಜವಾಬ್ದಾರಿಯಡಿ ಪ್ರಾಯೋಕತ್ವ ನೀಡಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸಲಹೆ ನೀಡಿದರು.
ವಿವಿಧ ಬ್ಯಾಂಕ್‌ಗಳ ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿದ ಅವರು, ಗ್ರಾಮೀಣಾಭಿವೃದ್ಧಿ ಇಲಾಖೆಯ ಹಣಕಾಸು ವ್ಯವಹಾರ ಬ್ಯಾಂಕುಗಳ ಮೂಲಕ ನಡೆಯುತ್ತಿವೆ. ಹಾಗೆಯೇ ಗ್ರಾಮೀಣ ಜನರ ಅಭಿವೃದ್ಧಿಯಲ್ಲಿ ಬ್ಯಾಂಕುಗಳು ತಮ್ಮ ಬದ್ಧತೆಯನ್ನು ತೋರಬೇಕು ಎಂದರು.
ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶಯಗಳಂತೆ ಸಮಾಜದ ಎಲ್ಲ ಸ್ತರದ ಜನರಿಗೆ ಶಿಕ್ಷಣ ದೊರಕಿಸಬೇಕಿರುವುದು ಸರ್ಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಬ್ಯಾಂಕ್‌ಗಳ ನೆರವಿನಿಂದ ಇನ್ನಷ್ಟು ಸದೃಢವಾಗಲಿವೆ ಎಂದು ಹೇಳಿದರು.
ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಉಪಯುಕ್ತ ಪುಸ್ತಕಗಳನ್ನು ಈ ಗ್ರಂಥಾಲಯಗಳಲ್ಲಿ ಸೇರಿಸಲಾಗುತ್ತಿದೆ. ಹಲವಾರು ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಇಂತಹ ಪುಸ್ತಕಗಳನ್ನು ಗ್ರಂಥಾಲಯಗಳಿಗೆ ಕೊಡುಗೆ ನೀಡಲು ಮುಂದೆ ಬಂದಿವೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದರು.
ಸಭೆಯಲ್ಲಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್, ಆಯುಕ್ತ ಅಂಜುಮ್ ಪರ್ವೇಜ್, ಪ್ರಿಯಾಂಕಾ ಫ್ರಾನ್ಸಿಸ್, ಎಸ್‌ಬಿಐ, ಕೆನರಾ, ಆಕ್ಸಿಸ್, ಯೂನಿಯನ್, ಬ್ಯಾಂಕ್ ಆ್ ಬರೋಡ ಮತ್ತಿತರ ಬ್ಯಾಂಕ್‌ಗಳು ಅಧಿಕಾರಿಗಳು ಇದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + 16 =
Remember me
