ಉತ್ತರಕನ್ನಡ:ಬ್ಯಾಂಕ್​ನಲ್ಲಿ ಕೋಟ್ಯಂತರ ರೂಪಾಯಿಯನ್ನು ಲಪಟಾಯಿಸಿ ತಲೆಮರೆಸಿಕೊಂಡಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಬಂಧಿಸಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ಈ ಪ್ರಕರಣ ನಡೆದಿತ್ತು. ಅಸಿಸ್ಟೆಂಟ್ ಮ್ಯಾನೇಜರ್ ಆಗಿದ್ದ ಕುಮಾರ್ ಬೋನಾಲ್ ಎಂಬಾತ ಬ್ಯಾಂಕ್​ನಿಂದಲೇ 2.69 ಕೋಟಿ ರೂ. ಲಪಟಾಯಿಸಿದ್ದ.
ಆಂಧ್ರಪ್ರದೇಶ ಮೂಲದ ಈತ ಇನ್ನೊಬ್ಬ ಉದ್ಯೋಗಿಯ ಲಾಗಿನ್​ ದುರ್ಬಳಕೆ ಮಾಡಿಕೊಂಡು 2.69 ಕೋಟಿ ರೂ. ಲಪಟಾಯಿಸಿದ್ದ. ಈ ಕುರಿತು ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಹುಬ್ಬಳ್ಳಿಯಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಕುಮಾರ್ ಬೋನಾಲ್, ತಾನು ಲಪಟಾಯಿಸಿದ್ದ ಹಣವನ್ನು ಆನ್​ಲೈನ್ ಗೇಮ್​​ನಲ್ಲಿ ಕಳೆದುಕೊಂಡಿರುವುದಾಗಿ ಪ್ರಾಥಮಿಕ ತನಿಖೆ ವೇಳೆ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ರಾಜ್ಯಾದ್ಯಂತ ಮಕ್ಕಳ ಕಳ್ಳರು?; ಜನರ ಕೈಗೆ ಸಿಕ್ಕಿಹಾಕಿಕೊಂಡ ಇಬ್ಬರ ಪೈಕಿ ಒಬ್ಬನ ಜೇಬಲ್ಲಿದ್ದವು ಮಕ್ಕಳ ಫೋಟೋಗಳು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
