ಉತ್ತರಕನ್ನಡ:ರಾಷ್ಟ್ರೀಕೃತ ಬ್ಯಾಂಕ್​ವೊಂದರ ಮ್ಯಾನೇಜರ್​ ಒಂದೂವರೆ ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿದ್ದಲ್ಲದೆ, ಪರಾರಿಯಾಗಿ ತಲೆಮರೆಸಿಕೊಂಡಿರುವ ಪ್ರಕರಣವೊಂದು ವರದಿಯಾಗಿದೆ.
ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಈ ಮಹಾಮೋಸ ನಡೆದಿದ್ದು, ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ. ಭಟ್ಕಳದ ಬಜಾರ್​ನಲ್ಲಿನ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದ ಶಾಖೆಯ ಮ್ಯಾನೇಜರ್ ಅನೂಪ್​ ಪೈ ಆರೋಪಿ.
ಮೂಲತಃ ಮಂಗಳೂರಿನ ಬೋಳಪು ಗುಡ್ಡೆ ಕಾವೂರು ನಿವಾಸಿಯಾಗಿರುವ ಅನೂಪ್​ ಪೈ, ಬ್ಯಾಂಕ್​ನ ಸಿಸ್ಟಮ್ ಸಸ್ಪೆನ್ಸ್ ಖಾತೆಗೆ ಖರ್ಚು ಹಾಕಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಎದುರಿಸುತ್ತಿದ್ದಾರೆ.
ದೂರಿನ ಮೇರೆಗೆ ಭಟ್ಕಳ ನಗರ ಠಾಣೆಯ ಪೊಲೀಸರು ಅನೂಪ್​ ವಾಸವಿದ್ದ ಭಟ್ಕಳ ರೈಲ್ವೆ ಸ್ಟೇಷನ್ ರಸ್ತೆ ಸಮೀಪದ ಬಾಡಿಗೆ ಮನೆಗೆ ಭೇಟಿ ನೀಡಿದ್ದು, ಈ ವೇಳೆ ಅನೂಪ್​ ಪರಾರಿಯಾಗಿ ತಲೆಮರೆಸಿಕೊಂಡಿರುವುದು ಗಮನಕ್ಕೆ ಬಂದಿದೆ.

ಪೆಟ್ರೋಲ್ ಟ್ಯಾಂಕ್​ ಮೇಲೆ ಪ್ರೇಯಸಿ, ಬೈಕ್ ಚಲಾಯಿಸುತ್ತಲೇ ರೊಮ್ಯಾನ್ಸ್​: ಪ್ರೇಮಿ ಮೇಲೆ 3 ಕೇಸ್​…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
