ಕೋಲಾರ:ಸಾಲ ಮರುಪಾವತಿ ಮಾಡುವಂತೆ ಬ್ಯಾಂಕ್​ ಸಿಬ್ಬಂದಿ ಧರಣಿ ಕುಳಿತ ಘಟನೆ ಕೋಲಾರದ‌ ಮಿಲ್ಲತ್ ನಗರದಲ್ಲಿ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಆಡಿದ ಮಾತು ಇದೀಗ ಬ್ಯಾಂಕ್​ ಸಿಬ್ಬಂದಿಗೆ ಮುಳುವಾಗುತ್ತಿದೆ.
ಸಿದ್ದರಾಮಯ್ಯ ಅವರು ಚುನಾವಣೆಗೂ ಮುನ್ನ ಪ್ರಚಾರದ ವೇಳೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯರು ಸಾಲ ಮರುಪಾವತಿ ಮಾಡಲು ಒಪ್ಪುತ್ತಿಲ್ಲ. ಕೇಳಲು ಹೋದರೆ ಸಿದ್ದರಾಮಯ್ಯ ಅವರು ಸಾಲ ಮನ್ನಾ ಮಾಡುವುದಾಗಿ ಹೇಳಿದ್ದಾರೆ ಎಂಬ ಸಬೂಬು ನೀಡುತ್ತಿದ್ದಾರೆ.
ಇದನ್ನೂ ಓದಿ:ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮಗ ಜಸ್ಟ್​ ಪಾಸ್: ಸಂಭ್ರಮಿಸಿದ ಪಾಲಕರು, ನೆಟ್ಟಿಗರ ಪ್ರತಿಕ್ರಿಯೆ ವೈರಲ್​
ಇತ್ತ ಸಾಲ ವಸೂಲಿಯಾಗದೇ ಬ್ಯಾಂಕ್​ ಸಿಬ್ಬಂದಿ ಕಂಗಾಲಾಗಿದ್ದು, ಹಣ ವಸೂಲಿಗೆ ಪರದಾಡುತ್ತಿದ್ದಾರೆ. ಸಾಲ ಮರುಪಾವತಿ ಮಾಡುವಂತೆ ಒತ್ತಾಯಿಸಿ ಧರಣಿಗೂ ಕುಳಿತಿದ್ದಾರೆ. ಇತ್ತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆ ಸಾಲ ಮನ್ನಾ ಮಾಡುವಂತೆ ಮಹಿಳೆಯರ ಆಗ್ರಹಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಬಿಜೆಪಿ ಭೂ ಹಂಚಿಕೆ ಕೈ ತನಿಖೆ: ಆರು ತಿಂಗಳ ಹಿಂದಿನ ಭೂಮಿ ಮಂಜೂರು ಪ್ರಕರಣಗಳ ಪರಾಮರ್ಶೆ

ದೇಶದಲ್ಲಿ 101 ದಶಲಕ್ಷ ಮಂದಿಗೆ ಮಧುಮೇಹ: ಐಸಿಎಂಆರ್ ಮಾಹಿತಿ, ಚಿಕಿತ್ಸಾ ವೆಚ್ಚದಿಂದ ದೇಶ ದುರ್ಬಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
