ಬೆಂಗಳೂರು: ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಆರೋಗ್ಯಕ್ಕೆ ಹಾನಿ ಉಂಟು ಮಾಡುವ ಕೆಮಿಕಲ್​ ಇದೆ ಎನ್ನುವ ಕಾರಣಕ್ಕಾಗಿ ಈಗಾಗಲೇ ಹೊರರಾಜ್ಯಗಳಲ್ಲಿ ಬ್ಯಾನ್​​ ಮಾಡಲಾಗಿದೆ. ಆದರೆ ಈಗ ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇರೋದು ಪತ್ತೆಯಾಗಿದೆ. ಈ ವರದಿ ಆರೋಗ್ಯ ಇಲಾಖೆ ಕೈ ಸೇರಿದ್ದು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮುಂದಾಗಿದ್ದಾರೆ.
ರಾಜ್ಯದಲ್ಲಿ ಅಪಾಯಕಾರಿಯಾದ ಕಾಟನ್ ಕ್ಯಾಂಡಿ ಬ್ಯಾನ್ ಮಾಡಲಾಗಿದೆ. ಇನ್ನು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಸುತ್ತೋಲೆ ಹೊರಡಿಸಲಾಗುತ್ತದೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೇ ಮತ್ತು ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿದ್ದಾರೆ.
ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಆರೋಗ್ಯ ಸಚಿವರು, ಕಾಟನ್‌ ಕ್ಯಾಂಡಿಯಲ್ಲಿ ಹಾನಿಕಾರಕ ‘ರೋಡಮೈನ್‌-ಬಿ’ ಹಾಗೂ ಗೋಬಿ ಮಂಚೂರಿಯಲ್ಲಿ’ಸನ್‌ಸೆಟ್‌ ಯೆಲ್ಲೊ’ ಬಣ್ಣ ಮತ್ತು ‘ಟಾಟ್ರ್ರಾಜಿನ್‌’ ರಾಸಾಯನಿಕ ಅಂಶ ಪತ್ತೆಯಾಗಿದೆ. ಕಲರ್​ ಕಾಟನ್​ ಕ್ಯಾಂಡಿ ಮಾರಾಟ ಮಾಡುವಂತೆ ಇಲ್ಲ.  ಗೋಬಿ ಮಂಚೂರಿಯ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ನಾಳೆಯಿಂದ ಬಣ್ಣ ಬರಲು ಕೆಮಿಕಲ್​ ಬಳಸಿ ಗೋಬಿ ಮಾಡುವಂತೆ ಇಲ್ಲ. ಕಲರ್​ ಬಳಸಿ ಮಾಡುವ ಗೋಬಿ ಬ್ಯಾನ್​ ಮಾಡಲಾಗುತ್ತದೆ. ಕೃತಕವಾದ ಬಣ್ಣವನ್ನು ಮಾರಾಟ ಹಾಗೂ ಬಳಕೆ ಮಾಡಿದ್ದಲ್ಲಿ ಕಾನೂನು ಕ್ರಮ ಕೈ ಗೊಳ್ಳಲಾಗುತ್ತದೆ ಎಂದಿದ್ದಾರೆ.
ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ಹಾಗೂ ಸಾಂಕ್ರಾಮಿಕ ಖಾಯಿಲೆ ಏರಿಕೆಯಾಗುತ್ತಿದೆ. ಸರಿಯಾದ ಆಹಾರ ತಯಾರು ಮಾಡದಿರುವುದು ಸಮಸ್ಯೆಗೆ ಕಾರಣವಾಗಿದೆ. ಹೆಚ್ಚು ಕೊಬ್ಬುಕಾರಕ, ಉಪ್ಪು ಹಾಗೂ ಸಕ್ಕರೆಯ ಆಹಾರ ಬಳಕೆಯಾಗುತ್ತಿದೆ. ಹೀಗಾಗಿ 171 ತರಹದ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ. ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡು ಬಂದಿದೆ. 64 ಸುರಕ್ಷಿತವಾದ ಮಾದರಿಗಳು ಕಂಡು ಬಂದಿದೆ. ಟಾರ್ಟ್ರಾಜಿನ್, ಸನ್​ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್​ನಂತ ಕೃತಕ ಬಣ್ಣಗಳನ್ನು ಬಳಸಲಾಗಿದೆ ಇವು ಆರೋಗ್ಯಕ್ಕೆ ತುಂಬಾ ಅಪಾಯಕಾರಿ ಎಂದು ತಿಳಿಸಿದರು.
ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಗಳಲ್ಲಿ ಕೃತಕ ಬಣ್ಣ ಬಳಕೆಯನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ನಿಷೇಧ ಉಲ್ಲಂಘಿಸಿದಲ್ಲಿ 7 ವರ್ಷಗಳವರೆಗೆ ಜೈಲು ಹಾಗು 10 ಲಕ್ಷದವರೆಗೆ ದಂಡ ವಿಧಿಸಲಾಗುವುದು.
ಈ ಕೃತಕ ಬಣ್ಣಗಳನ್ನು ಬಳಸುವ ತಿಂಡಿ ತಿನಿಸುಗಳನ್ನು ಸೇವಿಸುವುದರಿಂದ ದೀರ್ಘಾವಧಿಯಲ್ಲಿ ಕಾನ್ಸರ್’ಗೆ ತುತ್ತಾಗುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಈ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕರೂ ಸಹ ಇಂತಹವುಗಳ ಬಗ್ಗೆ ಎಚ್ಚರ ವಹಿಸಬೇಕಿದೆ.
ರಾಜ್ಯದಲ್ಲಿ ಕಾಟನ್​ ಕ್ಯಾಂಡಿ ಬ್ಯಾನ್​​: ದಿನೇಶ್ ಗುಂಡೂರಾವ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + two =
Remember me
