ಮಂಗಳೂರು:ರಸ್ತೆ ಅಪಘಾತದಲ್ಲಿ ಮದುವೆಯಾದ 2ನೇ ದಿನಗಳಲ್ಲಿ ನವವಿವಾಹಿತೆ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ತಲಪಾಡಿಯಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ ನವವಿವಾಹಿತೆ ಸ್ಥಳದಲ್ಲೇ ಪ್ರಾಣ ಮೃತಪಟ್ಟಿದ್ದು, ಕಾರಿನಲ್ಲಿದ್ದ ಪತಿಯ ಸ್ಥಿತಿ ಚಿಂತಾಜನಕವಾಗಿದೆ.
ಇದನ್ನೂ ಓದಿ:ಕೋಲ್ಕತಾ ಟ್ರೈನಿ ವೈದ್ಯೆ ಅತ್ಯಾಚಾರ ಆರೋಪಿ ರಾಯ್‌ಗೆ ಜಾಮೀನು ನೀಡಬೇಕೇ? ಕೋರ್ಟ್ ಪ್ರಶ್ನೆ
ಕಳೆದ ಸೆಪ್ಟೆಂಬರ್ 5ರಂದು ಪೆರ್ನೆ ಸಮೀಪದ ಒಡ್ಯದಗಯ ನಿವಾಸಿ ಅನಿಶ್ ಕೃಷ್ಣ, ಮಾನಸ ಜೋಡಿ ವಿವಾಹವಾಗಿದ್ದರು. ಗಾಯಗೊಂಡಿರುವ ಅನಿಶ್ ಕೃಷ್ಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನವದಂಪತಿ ಬಿ.ಸಿ. ರೋಡ್ ಕಡೆಯಿಂದ ‌ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಆಲ್ಟೋ ಕಾರು ನಿಯಂತ್ರಣ ಕಳೆದುಕೊಂಡು ಡಿವೈಡರ್ ಹಾರಿ ಕೆಎಸ್​ಆರ್​ಟಿಸಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಕೂಡಲೇ ಕಾರಿನ ಬಳಿ ಓಡೋಡಿ ಬಂದ ಸ್ಥಳೀಯರು ನವದಂಪತಿ ನಜ್ಜುಗುಜ್ಜಾಗಿರೋದನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.
ದಂಪತಿ ಇಬ್ಬರೂ ಮಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಸ್ಥಳಕ್ಕೆ ಮೆಲ್ಕಾರ್ ‌ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೋಲ್ಕತಾ ಟ್ರೈನಿ ವೈದ್ಯೆ ರೇಪ್‌, ಕೊಲೆ: ಪಾಲಿಗ್ರಾಫ್ ಪರೀಕ್ಷೆ ವೇಳೆ ಅಪರಾಧದಲ್ಲಿ ಭಾಗಿಯಾಗಿಲ್ಲ ಎಂದ ಆರೋಪಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 + 5 =
Remember me
