ಬೆಳಗಾವಿ:ದೇಶದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಶಾಸಕರಾಗಿ ಆಯ್ಕೆಯಾಗಿದ್ದ, ಸ್ವಾತಂತ್ರ್ಯ ಹೋರಾಟಗಾರ, ಗಾಂಧಿವಾದಿ ಸದಾಶಿವರಾವ ಬಾಪುಸಾಹೇಬ ಭೋಸಲೆ(101) ವಿಧಿವಶರಾದರು.
ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಸ್ವಗೃಹದ ‘ಗಾಂಧಿ ಮನೆ’ಯಲ್ಲಿ ವಯೋಸಹಜ ಅನಾರೋಗ್ಯದಿಂದ ಬೆಳಗಾವಿ ಜಿಲ್ಲೆಯ ಮೊಲದ ಶಾಸಕ ಬಾಪುಸಾಹೇಬ ಭೋಸಲೆ ನಿಧರಾಗಿದ್ದು, ಸ್ವಗೃಹದಲ್ಲಿಯೇ ಅಂತ್ಯಕ್ರಿಯೆ ನೆರವೇರಿತು. ಇವರಿಗೆ ಓರ್ವ ಪುತ್ರ, ಓರ್ವ ಪುತ್ರಿ, ಮೊಮ್ಮಕ್ಕಳು ಇದ್ದಾರೆ.ಇದನ್ನೂ ಓದಿರಿಇಂದು ನಿಮ್ಮ ಯಶ್ ಏನೇ ಆಗಿರಬಹುದು, ಇದಕ್ಕೂ ಮೊದಲು ನಾನು ಬಸ್​ ಚಾಲಕನ ಪುತ್ರ… ಹೀಗೆಂದು ಪತ್ರ ಬರೆದ ನಟ
ಗಾಂಧೀಜಿ, ವಿನೋಬಾ ಭಾವೆ ಅವರಿಂದ ಪ್ರಭಾವಿತರಾಗಿದ್ದ ಬಾಪುಸಾಹೇಬ ಭೋಸಲೆ ಅವರು 1942ರಲ್ಲಿ ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸಿದ್ದರು. ಅಲ್ಲದೆ 1946-47ನೇ ಅವಧಿಯಲ್ಲಿ ಅವತ್ತಿನ ಬ್ರಿಟಿಷ್ ಸರ್ಕಾರ ನಡೆಸಿದ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ ಮುಂಬೈ ಪ್ರಾಂತ್ಯಕ್ಕೆ ಒಳಪಟ್ಟಿದ್ದ ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. 1952ರಲ್ಲಿ ಹಿರೇಬಾಗೇವಾಡಿ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು. ಬಳಿಕ 1955ರಲ್ಲಿ ತಮ್ಮ ತತ್ವ-ಸಿದ್ಧಾಂತಗಳಿಗೆ ವಿರುದ್ಧವಾಗಿ ಮತ್ತು ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸದೆ ಆಡಳಿತ ನಡೆಸುತ್ತಿದೆ ಎಂದು ಬೇಸತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ದೇಶದ ತುಂಬೆಲ್ಲಾ ನಡೆಯುತ್ತಿದ್ದ ಭೂ ದಾನ ಚಳವಳಿಯಲ್ಲಿ ಭಾಗವಹಿಸಿದ್ದರು. ತಮ್ಮ 25 ಎಕರೆ ಭೂಮಿಯಲ್ಲಿ 24 ಎಕರೆಯನ್ನು ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಬಡ ಜನರಿಗೆ ಹಂಚಿದ್ದು ಇವರಲ್ಲಿದ್ದ ಸಾಮಾಜಿಕ ಮತ್ತು ಮಾನವೀಯ ಕಳಕಳಿಗೆ ಹಿಡಿದ ಕೈಗನ್ನಡಿ.
ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಲ್ಲಿ ಯಾವುದೇ ಸೌಲಭ್ಯ ಇಲ್ಲದೆ ತೀವ್ರ ಬಡತನದಲ್ಲಿ ಬದುಕು ಸಾಗಿಸುತ್ತಿದ್ದ ಬುಡಕಟ್ಟು ಸಮುದಾಯದ ಜನರಿಗಾಗಿಯೇ ಹುಟ್ಟಿದ ಊರನ್ನು ಬಿಟ್ಟು 12 ವರ್ಷ ಅವರಿಗಾಗಿ ಬಾಪುಸಾಹೇಬ ಭೋಸಲೆ ಹೋರಾಟ ನಡೆಸಿದ್ದರು. 1969ರಲ್ಲಿ ದೇಶದಲ್ಲಿ ಘೋಷಣೆಯಾಗಿದ್ದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲಿಗೆ ಹೋಗಿ ಬಂದಿದ್ದರು. ಗಾಂಧಿ ವಿಚಾರಣೆಗಳನ್ನು ಚರ್ಚಿಸಲು, ಅಳವಡಿಸಲು, ಯುವಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದಲೇ ಕಡೋಲಿ ಗ್ರಾಮದ ಹೊರವಲಯದಲ್ಲಿ ‘ಗಾಂಧಿ ಮನೆ’ ನಿರ್ಮಿಸಿದ್ದರು. ಮಹಿಳಾ ಸಬಲೀಕರಣಕ್ಕೆ ನಿರಂತರ ಪ್ರಯತ್ನ ನಡೆಸಿದ್ದರು. 95 ವರ್ಷದವರೆಗೆ ಸೈಕಲ್ ಮೇಲೆಯೇ ಹಳ್ಳಿಗಳಿಗೆ ಭೇಟಿ ನೀಡಿ ಗಾಂಧಿ ವಿಚಾರಧಾರೆಗಳನ್ನು ಚರ್ಚಿಸಿದ್ದರು. ಇತ್ತೀಚಿನ ಎರಡು ವರ್ಷದ ಅವಧಿಯಲ್ಲಿ ಆರೋಗ್ಯ ಕೈಕೊಟ್ಟಿದ್ದರಿಂದ ಮನೆ ಬಿಟ್ಟು ಹೊರಗಡೆ ಬರುತ್ತಿರಲಿಲ್ಲ.
VIDEO| ದಿನಕ್ಕೆರಡು ಬಾರಿ ಕಲ್ಲಿಗೆ ಹಾಲುಣಿಸುತ್ತಿದೆ ಹಸು! ಪುರೋಹಿತರು ಹೇಳಿದ್ದ ಭವಿಷ್ಯ ನಿಜವಾಯ್ತೆ?

ಇಬ್ಬರು ಯುವತಿಯರೊಂದಿಗೆ ಯುವಕನ ಲವ್ವಿಡವ್ವಿ! ಪ್ರಶ್ನಿಸಿದ ಪೋಷಕರಿಗೆ ಶಾಕಿಂಗ್​ ಉತ್ತರ ಕೊಟ್ಟ ಪ್ರಿಯಕರ

ಗಂಡನ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರು ನಿಲ್ಲಿಸಿದ ಪತ್ನಿ! ಮಕ್ಕಳು ಇಲ್ಲದ ವೇಳೆ ಆ ರಾತ್ರಿ ನಡೆಯಿತು ದುರಂತ

ಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ

ಯುಗಾದಿ ಹಬ್ಬಕ್ಕೆ ತವರು ಮನೆಗೆ ಬಂದ ಮಗಳು-ಅಳಿಯನ ಬದುಕಲ್ಲಿ ದುರಂತ! ಗರ್ಭಿಣಿ ಮಗಳನ್ನೇ ಗುಂಡಿಕ್ಕಿ ಕೊಂದ ತಂದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 2 =
Remember me
