ದಾವಣಗೆರೆ:ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಸಮಾರಂಭವೊಂದರಲ್ಲಿ ಭಾಗಿಯಾಗಿ ಮರಳುತ್ತಿದ್ದಾಗ ಅಸ್ವಸ್ಥರಾಗಿ ಕುಸಿದು ಬಿದ್ದ ಪ್ರಕರಣ ನಡೆದಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಅವರು ಚೇತರಿಸಿಕೊಂಡಿದ್ದಾರೆ.
ಹರಿಹರದ ಗುರು ಭವನದಲ್ಲಿ ಭಾನುವಾರ ನಡೆದ ಆಧುನಿಕ ಕನ್ನಡ ಸಾಹಿತ್ಯ ಸಂವೇದನೆಯ ಬಹುರೂಪಿಗಳು ವಿಷಯದ ಕುರಿತು ವಿಚಾರ ಸಂಕಿರಣದಲ್ಲಿ ಭಾಗಿಯಾಗಿದ್ದ ಬರಗೂರು, ಕಾರ್ಯಕ್ರಮ ಮುಗಿಸಿಕೊಂಡು ಹೊರ ಬಂದಾಗ ಕುಸಿದು ಬಿದ್ದರು. ತಕ್ಷಣ ಅವರನ್ನು ಹರಿಹರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ನಂತರ ಚೇತರಿಸಿಕೊಂಡ ಅವರು ದಾವಣಗೆರೆಯತ್ತ ಪ್ರಯಾಣ ಬೆಳೆಸಿದರು.
ವಿಜಯವಾಣಿಯೊಂದಿಗೆ ಮಾತನಾಡಿದ ಬರಗೂರು ರಾಮಚಂದ್ರಪ್ಪ, ಇತ್ತೀಚೆಗೆ ಸುತ್ತಾಟ ಜಾಸ್ತಿ ಆಗಿದ್ದರಿಂದ ಹೀಗೆ ಆಗಿರಬಹುದು. ವೈದ್ಯರು ಎಲ್ಲ ತಪಾಸಣೆ ಮಾಡಿದ್ದು ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ಹೇಳಿದ್ದಾರೆ ಎಂಬುದಾಗಿ ತಿಳಿಸಿದರು.
ಶಾಲೆಯಲ್ಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಹದಿಹರೆಯದ ವಿದ್ಯಾರ್ಥಿನಿ!
ನಮ್ಮಲ್ಲೇ ಮೊದಲು: ಸಂಪೂರ್ಣವಾಗಿ ಕೃತಕ ಬುದ್ಧಿಮತ್ತೆ-ತಂತ್ರಜ್ಞಾನ ಬಳಸಿ ಬರೆದ ಸುದ್ದಿ; ಇದು ಸಮಸ್ತ ಹಿರಿಯ ನಾಗರಿಕರಿಗೆ ಅರ್ಪಣೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − six =
Remember me
