ಬೆಂಗಳೂರು:ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾಳ ಹತ್ಯೆಯ ನೆರಳು ಸರಿಯುವ ಮುನ್ನವೇ ಕೊಡಗಿನಲ್ಲಿ ಮತ್ತೊಂದು ಪೈಶಾಚಿಕ ಘಟನೆ ವರದಿಯಾಗಿದೆ. ಮೀನಾ ಎಂಬ ವಿದ್ಯಾರ್ಥಿನಿ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣಳಾಗಿದ್ದ ಸಂಭ್ರಮದ ಕ್ಷಣ ಅನುಭವಿಸುತ್ತಾ ಶಾಲೆಯಿಂದ ಮನೆಗೆ ಹಿಂದಿರುಗುವಾಗ ಕ್ರೂರವಾಗಿ ಕೊಲೆಯಾಗಿರುವುದು ಅಘಾತಕಾರಿ ಸಂಗತಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಈ ಕುರಿತು ಸಂದೇಶ ಹಂಚಿಕೊಂಡಿದ್ದು, ಕಾನೂನು ಸುವ್ಯವಸ್ಥೆ ಹತೋಟಿಯಲ್ಲಿಟ್ಟುಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿರುವ ಸರ್ಕಾರದಿಂದ ಕೊಲೆಗಡುಕರಿಗೆ, ದುಷ್ಟರಿಗೆ ಭಯವೇ ಇಲ್ಲದಂತಾಗಿದೆ. ರಾಜ್ಯದಲ್ಲಿ ಹೆಣ್ಣುಮಕ್ಕಳು ಭಯದಿಂದ ಬದುಕಬೇಕಾದ ದುಸ್ಥಿತಿ ತಂದೊಡ್ಡಿರುವ ಕಾಂಗ್ರೆಸ್ ಸರ್ಕಾರ ಜನರ ಪಾಲಿಗೆ ಕಂಟಕ ಪ್ರಾಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹದಗೆಟ್ಟ ಕಾನೂನು ಸುವ್ಯವಸ್ಥೆ ನಿಯಂತ್ರಿಸಲಾಗದ ಕಾಂಗ್ರೆಸ್ ಸರ್ಕಾರ ತನ್ನ ಜಾಣ ನಿದ್ದೆಯಿಂದ ಎಚ್ಚರಗೊಂಡು ಹೆಣ್ಣುಮಕ್ಕಳ ರಕ್ಷಣೆಗೆ ಮುಂದಾಗಲಿ, ಇಲ್ಲವಾದರೆ ಸರಣೀ ಘಟನೆಗಳ ಹೊಣೆ ಹೊತ್ತು ರಾಜಿನಾಮೆ ನೀಡಿ ಹೊರಗೆ ಹೋಗಲಿ ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
