ವಿಜಯಪುರ:ರಾಜ್ಯ ಸಂಪುಟಕ್ಕೆ ಏಳು ಹೊಸ ಸಚಿವರ ಪಟ್ಟಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಬಿಡುಗಡೆ ಮಾಡಿದ್ದಾರೆ. ಅದೇ ಬೆನ್ನಲ್ಲಿ ಪಕ್ಷದಲ್ಲಿ ಅಸಮಾಧಾನಗಳ ಬುಗ್ಗೆ ಎದ್ದಿದೆ. ಮುಖ್ಯಮಂತ್ರಿಗಳನ್ನು ಖುರ್ಚಿಯಿಂದ ಇಳಿಸುವ ಬ್ಲಾಕ್​ಮೇಲ್​ ಮಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ನೂತನ ಸಚಿವರ ಹೆಸರು ಪ್ರಕಟವಾದ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ
ಬ್ಲಾಕ್ ಮೇಲ್ ಮಾಡುವವರಿಗೆ, ಹಣ ನೀಡಿದವರಿಗೆ ಸಚಿವ ಸ್ಥಾನ ಕೊಡಲಾಗಿದೆ. ಬ್ಲಾಕ್​ಮೇಲ್​ ಮಾಡಿ ಮೂವರು ಸ್ಥಾನ‌ ಪಡೆದಿದ್ದಾರೆ. ಆ ಮೂವರು ಈ ಹಿಂದೆ ನನ್ನ ಭೇಟಿಯಾಗಿದ್ದರು. ನಾವೆಲ್ಲರೂ ಕೂಡಿ ಸಿಎಂ ಯಡಿಯೂರಪ್ಪರನ್ನ ಕೆಳಗಿಳಿಸೋಣವೆಂದು ಬೆಂಬಲ ಕೋರಿದ್ದರು. ಅವರ ಮಾತು ಕೇಳಿ ನನಗೆ ಆಶ್ಚರ್ಯವಾಗಿತ್ತು. ಕೆಲವರು ಸಿಡಿ ತೋರಿಸಿ ಯಡಿಯೂರಪ್ಪರನ್ನ ಹೆದರಿಸಿ ಸಚಿವರಾಗಿದ್ದಾರೆ. ಇನ್ನು ಕೆಲವರು ಅಪಾರ ಪ್ರಮಾಣದ ಹಣ ನೀಡಿ ಸಚಿವರಾಗಿದ್ದಾರೆ ಎಂದು ಅವರು ದೂರಿದ್ದಾರೆ.
ಇದನ್ನೂ ಓದಿ:ಸಚಿವ ಸ್ಥಾನಕ್ಕೆ ಎಚ್. ನಾಗೇಶ್​ ರಾಜೀನಾಮೆ
ಸಮಸ್ತ ಲಿಂಗಾಯತ ವೀರಶೈವ ಸಮಾಜದ ಮರ್ಯಾದೆಯನ್ನ ಸಿಎಂ ಯಡಿಯೂರಪ್ಪ ತೆಗೆದಿದ್ದಾರೆ. ಸಿಎಂ ಅವರಿಗೆ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಹೊರಬರಲಿ ಎಂದು ಸವಾಲು. ವೀರಶೈವ ಲಿಂಗಾಯತ ಮಠಗಳಿಗೆ ಹಣ ನೀಡಿ ನನ್ನ ಕೆಳಗಿಳಿಸಿದರೆ ಕೇಂದ್ರದ ವಿರುದ್ಧ ಬಂಡೇಳುವಂತೆ ಯಡಿಯೂರಪ್ಪ ಯೋಜನೆ ಮಾಡಿದ್ದಾರೆ. ಸಂಕ್ರಮಣದ ಉತ್ತರಾಯಣದ ಮೂಲಕ ಸಿಎಂ ಯಡಿಯೂರಪ್ಪ ಅದಃ ಪತನ ಆರಂಭವಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)
ಎಂಗೇಜ್ಮೆಂಟ್​ ಆದ್ಮೇಲೆ ಸೆಕ್ಸ್​ ಮಾಡಿ ನೀ ಬೇಡ ಎಂದ; ಪೊಲೀಸರ ಮೊರೆ ಹೋದ ಯುವತಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 15 =
Remember me
