ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಆರೋಪಿಸಿದ್ದು, ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ‘ಕ್ಯಾಶ್​ ಆ್ಯಂಡ್​ ಕ್ಯಾರಿ’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಸ್ಯಾಂಡಲ್‍ವುಡ್‍ನಲ್ಲಿ ಸರಣಿ ಸಾವಿಗೆ ಹೃದಯಾಘಾತವೂ ಕಾರಣ; ದೊಡ್ಮನೆಯಲ್ಲೇ ಇಬ್ಬರ ಬಲಿ ಪಡೆದ ಹಾರ್ಟ್ ಅಟ್ಯಾಕ್‍…
ಈ ಕುರಿತು ಟ್ವೀಟ್​ ಮಾಡಿರುವ ಬಸನಗೌಡ ಪಾಟೀಲ್ ಯತ್ನಾಳ್, “ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ ಕ್ಯಾಶ್​ ಆ್ಯಂಡ್​ ಕ್ಯಾರಿ. ಅಧಿಕಾರಿಗಳಿಗೆ ಹಣಕ್ಕಾಗಿ ಎಷ್ಟು ಕಾಡಿರಬೇಕು ಇವರು? ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ದ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಸಹಾಯಕ ಕೃಷಿ ನಿರ್ದೇಶಕರು. ಒಬ್ಬಬ್ಬರಿಗೂ 6-8 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದಾರೆ, ನಾವು ಆತ್ಮಹತ್ಯೆ ಮಾಡಿಕೊಳ್ಳದೆ ದಾರಿಯಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸರ್ಕಾರದಲ್ಲಿ ವರ್ಗಾವಣೆ ದಂಧೆ ಹೊರತುಪಡಿಸಿ ಇನೇನು ನಡೆಯುತ್ತಿಲ್ಲ” ಎಂದು ಟ್ವೀಟ್​ ಮಾಡಿದ್ದಾರೆ.
ಸಿದ್ದರಾಮಯ್ಯನವರ 80% ಸರ್ಕಾರದಲ್ಲಿ ಎಲ್ಲಾ Cash & Carry
ಅಧಿಕಾರಿಗಳಿಗೆ ಹಣಕ್ಕಾಗಿ ಎಷ್ಟು ಕಾಡಿರಬೇಕು ಇವರು?
ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ದ ಲಂಚದ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಸಹಾಯಕ ಕೃಷಿ ನಿರ್ದೇಶಕರು.
ಒಬ್ಬಬ್ಬರಿಗೂ 6-8 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದಾರೆ, ನಾವು ಆತ್ಮಹತ್ಯೆ ಮಾಡಿಕೊಳ್ಳದೆ…
— Basanagouda R Patil (Yatnal) (@BasanagoudaBJP)August 7, 2023

ಮತ್ತೊಂದು ಟ್ವೀಟ್​ನಲ್ಲಿ, “ಸಿದ್ದರಾಮಯ್ಯನವರ ಸರ್ಕಾರದಲ್ಲಿ ವರ್ಗಾವಣೆಗಳು ಬಹಳ ಸುಲಭವಾಗಿದೆ ಕ್ಯಾಶ್​ ಆ್ಯಂಡ್ ಕ್ಯಾರಿ, ಈಗ ಪೊಲೀಸ್ ಇಲಾಖೆಯಲ್ಲಂತೂ ವರ್ಗಾವಣೆಯ ಸುಗ್ಗಿ ನಡೆಯುತ್ತಿದೆ. ಸರ್ವರಿಗೂ ಸಮಪಾಲು ಪಾಲಿಸಿರುವ ಮಾನ್ಯ ಮುಖ್ಯಮಂತ್ರಿಗಳು”,
ಇದನ್ನೂ ಓದಿ:ಮಿಷನ್ ಇಂದ್ರ ಧನುಷ್ ಲಸಿಕೆ ಅಭಿಯಾನಕ್ಕೆ ಡಿಸಿ ಫೌಜಿಯಾ ತರನ್ನುಮ್, ಸಿಇಒ ಮೀನಾ ಚಾಲನೆ
೧. ಪೊಲೀಸ್ ಇನ್ಸ್ಪೆಕ್ಟರ್​ವರೆಗೂ ಶಾಸಕರ ಶಿಫಾರಸ್ಸುಗಳು ಮಾತ್ರ ಪರಿಗಣಿಸುವುದು!೨. ಡಿವೈಎಸ್ಪಿ ವರ್ಗಾವಣೆಗಳು ಮಾನ್ಯ ಗೃಹ ಮಂತ್ರಿಗಳು ಹಾಗು ಮುಖ್ಯಮಂತ್ರಿಗಳದ್ದೇ ಮೇಲುಗೈ!ಕೆಎಸ್ಆರ್ಪಿ ಗೆಸ್ಟ್ ಹೌಸ್​ನಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಯಷ್ಟೇ ಪವರ್ ಫುಲ್ ವ್ಯಕ್ತಿಯೊಬ್ಬರಿದ್ದರಂತೆ. ಬೆಂಗಳೂರಿನ ಕೆಲವು ಎಸಿಪಿ ವರ್ಗಾವಣೆಯಲ್ಲಿ ಅವರದ್ದೇ ಮೇಲುಗೈ! ಪೊಲೀಸ್ ಎಸ್ಟಾಬ್ಲಿಶ್​​ಮೆಂಟ್ ​ಬೋರ್ಡ್​​ ಈಗ ಪಿಎಸ್​ವೈ ಬೋರ್ಡ್ ಆಗಿದೆ.
ಸಿದ್ದರಾಮಯ್ಯನವರ ಸರ್ಕಾರದಲ್ಲಿ ವರ್ಗಾವಣೆಗಳು ಬಹಳ ಸುಲಭವಾಗಿದೆ Cash & Carry, ಈಗ ಪೊಲೀಸ್ ಇಲಾಖೆಯಲ್ಲಂತೂ ವರ್ಗಾವಣೆಯ ಸುಗ್ಗಿ ನಡೆಯುತ್ತಿದೆ!
ಸರ್ವರಿಗೂ ಸಮಪಾಲು ಪಾಲಿಸಿರುವ ಮಾನ್ಯ ಮುಖ್ಯಮಂತ್ರಿಗಳು೧. ಪೊಲೀಸ್ ಇನ್ಸ್ಪೆಕ್ಟರ್ ವರೆಗೂ ಶಾಸಕರ ಶಿಫಾರಸ್ಸುಗಳು ಮಾತ್ರ ಪರಿಗಣಿಸುವುದು!೨. ಡಿ.ವೈ.ಸ್.ಪಿ ವರ್ಗಾವಣೆಗಳು ಮಾನ್ಯ ಗೃಹ…pic.twitter.com/Zpkxqlh3p0
— Basanagouda R Patil (Yatnal) (@BasanagoudaBJP)August 7, 2023

“ವರ್ಗಾವಣೆಗಳಲ್ಲಿ 2 ವಿಧ, ಮಾನ್ಯ ಮುಖ್ಯಮಂತ್ರಿಗಳ ಕಚೇರಿಯಿಂದ ಬರುವ ಟಿಪ್ಪಣಿಯಲ್ಲಿ ವರ್ಗಾಯಿಸಲು ಕೋರಿದೆ ಎಂದು ಬರೆದಿದ್ದರೆ ಅದು ಬೋರ್ಡ್ನಲ್ಲಿ ಪಾಸ್ ಆಗುವುದಿಲ್ಲ, ವರ್ಗಾಯಿಸಲು ಸೂಚಿಸಲಾಗಿದೆ ಎಂದು ಬರೆದಿದ್ದರೆ ಅದು ಮಾಜಿ ಶಾಸಕರೊಬ್ಬರು ಮುಖ್ಯಮಂತ್ರಿಗಳ ಕಾರ್ಯಾಲಯದಲ್ಲಿ ಅನುಮೋದನೆ ನೀಡಿದ್ದಾರೆ ಎಂದು ಅರ್ಥ” ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಟ್ವೀಟ್​ ಮಾಡಿ ಆರೋಪಿಸಿದ್ದಾರೆ.
ಈ 10 ರಾಜ್ಯಗಳಿಗೆ ಭಾರೀ ಮಳೆಯ ಮುನ್ಸೂಚನೆ ಕೊಟ್ಟ ಭಾರತೀಯ ಹವಾಮಾನ ಇಲಾಖೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + twenty =
Remember me
