ವಿಜಯಪುರ:ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಕೇಂದ್ರ ಶಿಸ್ತು ಸಮಿತಿ ನೋಟಿಸ್ ನೀಡಿದೆ ಎಂದು ವರದಿಯಾಗಿತ್ತು. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಯತ್ನಾಳ್, ನನಗೆ ಯಾವುದೇ ನೋಟಿಸ್ ಬಂದಿಲ್ಲ. ಶಿಸ್ತು ಸಮಿತಿ ನೋಟಿಸ್ ಕಳುಹಿಸುವಂತಹ ಯಾವುದೇ ಪಕ್ಷ ವಿರೋಧಿ ಹೇಳಿಕೆ ನೀಡಲ್ಲ. ಸುಮ್ಮನೆ ಊಹಾಪೋಹ ಹರಡಿಸಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಭ್ರಷ್ಟರು ಹಾಗೂ ವಂಶಪಾರಂಪರ್ಯವಾಗಿ ರಾಜಕೀಯ ಮುಂದುವರೆಸುವ ಬಗ್ಗೆ ನಾನು ಮಾತನಾಡಿದ್ದೇನೆ. ಹೀಗಿದ್ದೂ ನೋಟಿಸ್ ನೀಡಿದ್ದರೆ ಈಗಾಗಲೇ ನನ್ನ ಕೈಸೇರುತ್ತಿತ್ತು. ಯತ್ನಾಳ್ ಇಷ್ಟೆಲ್ಲ ಮಾತನಾಡಿದ್ದಾನೆ. ಹೀಗಿದ್ದರೂ ಶಿಸ್ತು ಕ್ರಮದ ನೋಟಿಸ್ ಯಾಕೆ ನೀಡಿಲ್ಲ ಎಂದು ಕೆಲವರಿಗೆ ಕಾಡುತ್ತಿದೆ. ಹೀಗಾಗಿ ಇಂತಹ ಊಹಾಪೋಹ ಹರಡುತ್ತಿದ್ದಾರೆ. ಹಿಂದೆ ವಾಜಪೇಯಿ ಅವರು ಇದ್ದಾಗಲು ನನಗೆ ನೋಟಿಸ್ ನೀಡಿದ್ದರು. ಆದರೆ ನೊಟೀಸ್ ನೀಡಿದ ಬಳಿಕ ನಾನು ಮೂರು ತಿಂಗಳಲ್ಲಿ ಕೇಂದ್ರ ಮಂತ್ರಿ ಆದೆ. ಇದೆಲ್ಲ ರಾಜಕೀಯ ವಿರೋಧಿಗಳ ಷಡ್ಯಂತ್ರ ಅಷ್ಟೆ ಎಂದು ಹೇಳಿದರು.
ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರ ನಡುವೆ ಸಾಕಷ್ಟು ಟೀಕೆ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು. ಯತ್ನಾಳ್ ಸ್ವಪಕ್ಷ ನಾಯಕರ ವಿರುದ್ಧವೇ ಸಾರ್ವಜನಿಕವಾಗಿ ನೀಡಿರುವ ಹೇಳಿಕೆ ವಿಪಕ್ಷಗಳ ಟೀಕೆಗೂ ಕಾರಣವಾಗಿತ್ತು. ಯತ್ನಾಳ್ ನಡೆ ಬಿಜೆಪಿ ಹೈಕಮಾಂಡ್​​ಗೂ ಮುಜುಗರ ತಂದಿತ್ತು ಎನ್ನಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
