ವಿಜಯಪುರ:ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸಚಿವ ಮುರುಗೇಶ್ ನಿರಾಣಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ವಾಕ್ಸಮರ ತಾರಕಕ್ಕೇರಿತ್ತು. ಇಬ್ಬರು ನಾಯಕರ ನಡುವೆ ಸಾಕಷ್ಟು ಟೀಕೆ, ಆರೋಪ-ಪ್ರತ್ಯಾರೋಪಗಳಿಗೆ ಕಾರಣವಾಗಿತ್ತು. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರವನ್ನೂ ತಂದಿತ್ತು.
ಮುರುಗೇಶ್ ನಿರಾಣಿ ಸೇರಿದಂತೆ ಮುಖ್ಯಮಂತ್ರಿ, ಸಚಿವರು ಸೇರಿದಂತೆ ಪಕ್ಷದ ಹಿರಿಯ ನಾಯಕರ ವಿರುದ್ಧ ಸಾರ್ವಜನಿಕವಾಗಿ ಮುಜುಗರ ತರುವಂತಹ ಟೀಕೆ ಮಾಡುತ್ತಾ ಬಂದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಕೇಂದ್ರ ಶಿಸ್ತು ಸಮಿತಿ ಕಾರಣ ಕೇಳಿ ನೋಟಿಸ್ ನೀಡಿದೆ. ಹೀಗಾಗಿ ಬಸನಗೌಡ ಪಾಟೀಲ್ ಅವರಲ್ಲಿ ಕಾರಣ ಕೇಳಿ, ನೋಟಿಸ್ ಕಳುಹಿಸಲಾಗಿದೆ ಎನ್ನಲಾಗಿತ್ತು.
ಇದೀಗ ಯತ್ನಾಳ್ ವಿಜಯಪುರದಲ್ಲಿ ಮಾತನಾಡುತ್ತಾ, ನನಗೆ ಕೇಂದ್ರದಿಂದ ಯಾವುದೇ ನೋಟಿಸ್ ಬಂದಿಲ್ಲ. ಪದೇ ಪದೇ ಯತ್ನಾಳ್​ಗೆ ನೋಟಿಸ್ ಕಳುಹಿಸಲಾಗಿದೆ ಎಂದು ಊಹಾಪೋಹಗಳು ಯಾಕೆ ಕೇಳಿ ಬರುತ್ತಿವೆಯೋ ಗೊತ್ತಿಲ್ಲ. ಒಂದು ವೇಳೆ ನೋಟಿಸ್ ಇದ್ದಲ್ಲಿ ಮಾಧ್ಯಮದಲ್ಲಿ ಪ್ರಸಾರ ಮಾಡಿ ಎಂದು ಹೇಳಿದ್ದಾರೆ.
ಶಾಸಕರಿಗೆ ನೋಟಿಸ್ ಕೊಡಲು ರಾಜ್ಯ ಸಮೀತಿಗೆ ಅಧಿಕಾರ ಇಲ್ಲ. ನನಗೆ ಆಕ್ಷನ್ ಆಗಬೇಕು ಅಂದ್ರೆ ಅದು ಕೇಂದ್ರ ಸಮಿತಿಯಿಂದ ಆಗಬೇಕು. ಹಾಗಾಗಿ ಅಲ್ಲಿಂದ ನನಗೆ ಇದುವರೆಗೆ ಯಾವುದೇ ರೀತಿಯ ನೋಟಿಸ್ ಬಂದಿಲ್ಲ. ಪಕ್ಷದಲ್ಲಿ ನನ್ನ ಬಗ್ಗೆ ಬಹಳಷ್ಟು ಪ್ರೀತಿ, ಗೌರವ ಇದೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + 13 =
Remember me
