ವಿಜಯಪುರ:ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪ್ರಸ್ತಾಪಿಸಿ ಸ್ವಪಕ್ಷೀಯರಿಂದಲೇ ತೀವ್ರ ಟೀಕೆಗೆ ಗುರಿಯಾಗಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಇದೀಗ ಟ್ವೀಟ್​ ಮೂಲಕ ಮತ್ತೊಮ್ಮೆ ಗುಡುಗಿದ್ದಾರೆ.
ಮಂಗಳವಾರ ರಾತ್ರಿ 11.30ಕ್ಕೆ ಟ್ವೀಟ್ ಮಾಡಿರುವ ಪಾಟೀಲ್​, ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ, ಆತ್ಮಸಾಕ್ಷಿಯಾಗಿ, ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೇನೆ ಹೊರತು, ಸಚಿವನಾಗುವುದಕ್ಕೆ ಯಾರದೋ ಕಾಲು ಹಿಡಿದು, ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನವೂ ಅಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ:Web Exclusive|ಆರೋಗ್ಯ ಇಲಾಖೆಗೆ ಕೈಕೊಟ್ಟ 937 ಅಧಿಕಾರಿ, ನೌಕರರು
ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೆನೆ ಹೊರತು ಸಚಿವನಾಗುವದಕ್ಕೆ ಯಾರದೋ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ ಅದು ನನ್ನ ಜಾಯಮಾನ ಅಲ್ಲ
— Basanagouda R Patil (Yatnal) (@BasanagoudaBJP)October 20, 2020

ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿ ಬಹಳ ದಿನ ಉಳಿಯಲ್ಲವೆಂದು ನಿನ್ನೆಯಷ್ಟೇ ಯತ್ನಾಳ್​ ಹೇಳಿಕೆ ನೀಡಿದ್ದರು. ಈ ವಿಚಾರ ಬಿಜೆಪಿಯಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸಿಎಂ ಬಿಎಸ್​ವೈಗೂ ಇರಿಸು-ಮುರಿಸು ತಂದಿತ್ತು. ಯತ್ನಾಳ್​ ಅವರನ್ನ ಕರೆಸಿ ಮಾತಾಡ್ತಿನಿ ಎಂದು ಸಿಎಂ ಬಿಎಸ್​ವೈ ಹೇಳಿದ್ದರು. ನಿನ್ನೆ ಸಿಎಂ ರಾಜಕೀಯ ಕಾರ್ಯದರ್ಶಿ ಯತ್ನಾಳರನ್ನು ಭೇಟಿ ಮಾಡಿ ಮಾತನಾಡಿದ್ದರು.
ಜಡ್ಜ್​ಗೆ ಬೆದರಿಕೆ ಪತ್ರ: ಷಡ್ಡಕನ ಸಿಕ್ಕಿಸಲು ಹೋಗಿ ಸಿಕ್ಕಿಬಿದ್ದ, ಆಸ್ತಿಗಾಗಿ ನಾದಿನಿ ಮೇಲೆ ಕಣ್ಣು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen − eight =
Remember me
