ಬೆಂಗಳೂರು:ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಏಕವಚನದಲ್ಲಿ ಗುಡುಗಿದ ಸಚಿವ ಮುರುಗೇಶ್ ನಿರಾಣಿ, ಭಾವೋದ್ರಿಕ್ತರಾಗಿ ಪ್ರತಿಕ್ರಿಯಿಸುವಾಗ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.
ಸಿಎಂ ಅಧಿಕೃತ ನಿವಾಸ ರೇಸ್ ವ್ಯೂ ಬಳಿ ಸುದ್ದಿಗಾರರಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ವಿಜಯಪುರದವರು ಒಬ್ಬರಿದ್ದಾರೆ. ಎಲುಬಿಲ್ಲದ ನಾಲಿಗೆ ಇಲ್ಲದೆ ಮಾತನಾಡುತ್ತಿದ್ದಾರೆ. ನನ್ನನ್ನು ಪಿಂಪ್ ಎಂದು ಕರೆದಿದ್ದಾರೆ. ಅಪ್ಪನಿಗೆ ಹುಟ್ಟಿದವರು ಈ ರೀತಿ ಮಾತನಾಡಲ್ಲ. ಆ ಸಂಸ್ಕೃತಿಯಲ್ಲಿ ಇದ್ದವರೆ ಆ ರೀತಿ ಮಾತನಾಡುತ್ತಾರೆ. ಒಳ್ಳೆಯ ಮನೆತನವಿದ್ದವರೂ ಈ ರೀತಿ ಮಾತನಾಡಲ್ಲ. ನಾಲಿಗೆ ಹರಿಬಿಟ್ಟು ಮಾತನಾಡಿದರೆ ನಾಲಿಗೆ ಕತ್ತರಿಸುವ ಕೆಲಸವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಗೆ ಬಂದಮೇಲೆ ಮುಸ್ಲಿಮರು, ಹಿಂದುತ್ವದ ಬಗ್ಗೆ ಮಾತನಾಡುವ ಮೂಲಕ ಎಡಬಿಡಂಗಿತನ ಪ್ರದರ್ಶಿಸುತ್ತಿದ್ದಾರೆ. ಬಾಯಿ ಮುಚ್ಚಿಕೊಂಡು ಇರಬೇಕು ಎಂದು ಸಿಎಂ ಸೂಚನೆ ನೀಡಿದ್ದಾರೆ. ಪಕ್ಷದಲ್ಲಿ ಇರೋಕೆ ಆಗಲ್ಲವೆಂದರೆ ರಾಜೀನಾಮೆ ಕೊಟ್ಡು ಹೊರಗೆಹೋಗಿ ಪ್ರತಿಭಟನೆ ಮಾಡಬೇಕು ಎಂದು ಸವಾಲೆಸೆದರು. ಇಂತಹ ಆಟಕ್ಕೆ ವಿಜಯಪುರದ ಜನ ಉತ್ತರ ಕೊಡುತ್ತಾರೆ ಎಂದು ಯತ್ನಾಳ್ ಹೆಸರೆತ್ತದೆ‌ ನಿರಾಣಿ ಕಿಡಿಕಾರಿದರು.
ಇಂದು ವೈವಾಹಿಕ ಜೀವನಕ್ಕೆ ಕಾಲಿಡಬೇಕಿದ್ದ ಯುವತಿ ದುರಂತ ಸಾವು: ಮುಗಿಲು ಮುಟ್ಟಿದ ಪಾಲಕರ ಆಕ್ರಂದನ

ನರೇಶ್​-ಪವಿತ್ರಾ ಲೋಕೇಶ್​ ಮದುವೆ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಟಾಲಿವುಡ್​ನ ಹಿರಿಯ ನಿರ್ಮಾಪಕ!

ನರೇಶ್​-ಪವಿತ್ರಾ ಲೋಕೇಶ್​ ಮದುವೆ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಟಾಲಿವುಡ್​ನ ಹಿರಿಯ ನಿರ್ಮಾಪಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 1 =
Remember me
