ಉತ್ತರಕನ್ನಡ:ಕಳೆದ ಬಾರಿ ಬಸವರಾಜ್​ ಬೊಮ್ಮಾಯಿ ಅವರ ಬದಲು ನನ್ನನ್ನು ಮುಖ್ಯಮಂತ್ರಿ ಮಾಡಿದ್ದರೆ ರಾಜ್ಯದಲ್ಲಿ ಬಿಜೆಪಿ 103ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಶಾಸಕ ಬಸನ್​ಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.
ಕುಮಟಾದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದುತ್ವದ ರಾಜಕಾರಣಿಗಳನ್ನು ಎಂದೂ ಮುಗಿಸಲು ಸಾಧ್ಯವಿಲ್ಲ. ಈಶ್ವರಪ್ಪನವರು ಹೇಳುವ ವಿಚಾರವನ್ನು ಹೈಕಮಾಂಡ್ ಗಂಭೀರವಾಗಿ ಪರಿಗಣಿಸಬೇಕು. ನಾನು ವಿರೋಧ ಪಕ್ಷದ ನಾಯಕನಾಗುವ ಎಲ್ಲಾ ಅರ್ಹತೆ ಇತ್ತು. ನನ್ನನ್ನು ಮಾಡಲಿಲ್ಲ, ನನಗೆ ಯಾವುದೇ ಅಸಮಾಧಾನ ಇಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:3 ಮಕ್ಕಳ ತಾಯಿಗೆ 7 ವರ್ಷದಿಂದ ಅಕ್ರಮ ಸಂಬಂಧ; ಪ್ರಿಯಕರ ಜತೆ ಇರಲಿ ಎಂದು ಟ್ರಾನ್ಸ್​ಫಾರ್ಮರ್​ ಏರಿದ ಮಹಿಳೆ
ಜೂನ್​ 04ರಂದು ಬಿಜೆಪಿ ಕುಟುಂಬ ರಾಜಕಾರಣದಿಂದ ಮುಕ್ತವಾಗುತ್ತದೆ. ಈ ಬಗ್ಗೆ ಹೈಕಮಾಂಡ್​ ನನಗೆ ಭರವಸೆ ನೀಡಿದ್ದು, ಹಿಂದೂಪರ ಮಾತನಾಡುವವರಿಗೆ ಯಾವುದೇ ಅನ್ಯಾಯ ಆಗುವುದಿಲ್ಲ ಎಂದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಯಾವಾಗಲೋ ಆಗಬೇಕಿತ್ತು. ಸುಧಾಕರ್ ಹಿಂದೆ ಸಚಿವರಾಗಿದ್ದಾಗ ಶಾಸಕರಿಗೆ ಸ್ಪಂದಿಸುತ್ತಿರಲಿಲ್ಲ. ಹಲವು ಶಾಸಕರು ಕಣ್ಣೀರು ಹಾಕಿದ್ದಾರೆ. ಪಕ್ಷ ಅಂತಹ ತಪ್ಪಿನಿಂದ ಸೋತಿದೆ. ಅವರ ತಪ್ಪಿನಿಂದ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಲಿಲ್ಲ. ಕೆಲವು ನಿರ್ಣಯ ಮಾಡಬೇಕಿತ್ತು, ಮಾಡದ ಕಾರಣ ಪಕ್ಷ ಸೋತಿದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಅಪ್ಪ, ಮಕ್ಕಳು, ಮಾವ, ಅಳಿಯ ಇವರೇ ಕಾಂಗ್ರೆಸ್‍ನಲ್ಲಿ ಅಭ್ಯರ್ಥಿಗಳಾಗಿದ್ದಾರೆ. ನಮ್ಮ ಪಕ್ಷದಲ್ಲೂ ಹಾಗೇ ಆಗಿದೆ. ನಮ್ಮ ಮಗಳಿಗೆ ಕೊಟ್ಟಿಲ್ಲ, ನನ್ನ ಮಗನಿಗೆ ಕೊಟ್ಟಿಲ್ಲ, ನನ್ನ ಮಗ ಸಮರ್ಥನಿದ್ದ ಎಂದು ಎರಡೂ ಪಕ್ಷದಲ್ಲಿ ನಡೆಯುತ್ತಿದೆ. ಈ ಲೋಕಸಭೆ ಚುನಾವಣೆ ಅಪ್ಪ, ಮಕ್ಕಳು, ಅಳಿಯ ಮಗಳು ಎಂದೇ ಆಗಿದೆ. ಲೋಕಸಭೆಗೆ ಕಾಂಗ್ರೆಸ್ ಸಚಿವರು ಒಬ್ಬರೂ ನಿಲ್ಲಲಿಲ್ಲ. ಸೋತರೆ ಮಂತ್ರಿ ಸ್ಥಾನ ಹೋಗುತ್ತದೆ ಎಂದು ಯಾರೂ ಸ್ಪರ್ಧಿಸಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಟೀಕಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × two =
Remember me
