ಬೀದರ್:ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆಗೆ ಲಾರಿಗಳಿಗೆ ಅನುಮತಿ ನೀಡಲು 25 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​​ರನ್ನು ಲೋಕಾಯುಕ್ತ ಪೊಲೀಸರು ರೆಡ್​ಹ್ಯಾಂಡ್​ ಆಗಿ ಬಲೆಗೆ ಕೆಡವಿದ್ದಾರೆ.
ಬಸವಕಲ್ಯಾಣ ತಾಲೂಕಿನ ಮಂಠಾಳ ಠಾಣೆಯ ಪಿಎಸ್ಐ ಶೀಲಾ ನ್ಯಾಮನ್ ಹಾಗು ಕಾನ್​ಸ್ಟೆಬಲ್ ಪರಶುರಾಮರೆಡ್ಡಿ ಲೋಕಾಯುಕ್ತ ಬಲೆಗೆ ಬಿದ್ದವರು. ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ದೂರುದಾರ ಇರ್ಷಾದ್​ ಪಟೇಲ್‌ನಿಂದ 21 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಇದನ್ನೂ ಓದಿ:ಹೋಗುವಾಗ ಜಂಟಿ ಬರುವಾಗ ಒಂಟಿ: 10 ವರ್ಷಗಳ ಅನೈತಿಕ ಸಂಬಂಧ ದುರಂತದಲ್ಲಿ ಅಂತ್ಯ
ಸಾಗಾಣಿಕೆಗೆ ಅನುಮತಿ‌ ಪಡೆದಿದ್ದ ಇರ್ಷಾದ್​ ಮೂರು ಲಾರಿ ಮುಖಾಂತರ ಮರಳು ಸಾಗಾಣಿಕೆ ನಡೆಸುತ್ತಿದ್ದ. ಪ್ರತಿ ಲಾರಿಗೆ ಪ್ರತಿ ತಿಂಗಳು 7 ಸಾವಿರ ರೂ. ನೀಡುವಂತೆ ಪೊಲೀಸರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಮರಳು ಲಾರಿಯ ಮಾಲೀಕ ಇರ್ಷಾದ ಪಟೇಲ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ದೂರಿನ ಅನ್ವಯ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಲಂಚ ಸ್ವೀಕರಿಸುವಾಗಲೇ ದಾಳಿ ಮಾಡಿ, ಪಿಎಸ್​ಐ ಮತ್ತು ಕಾನ್​ಸ್ಟೆಬಲ್​ನನ್ನು ಬಂಧಿಸಿದ್ದಾರೆ. ಇಬ್ಬರ ವಿರುದ್ಧವು ಪ್ರಕರಣವನ್ನು ದಾಖಲಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಬ್ರಿಟನ್​ನ ಪಾಕಿಗಳು ಗ್ರೂಮಿಂಗ್​ ಗ್ಯಾಂಗ್ಸ್​ ಭಾಗವಾಗಿದ್ದಾರೆ: ಯುಕೆ ಸಚಿವೆ ಹೇಳಿಕೆಯಿಂದ ಪಾಕ್​ಗೆ ಮುಖಭಂಗ

ಸುದೀಪ್​ ಹೇಳಿಕೆಯಿಂದ ಆಘಾತ ಹಾಗೂ ನೋವಾಗಿದೆ: ನಟ ಪ್ರಕಾಶ್​ ರಾಜ್​

ಬೇಕಿರುವುದು ಬರೀ ಪದವಿಯಲ್ಲ ಪ್ರಜ್ಞಾವಂತಿಕೆ, ಪ್ರಬುದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + 17 =
Remember me
