ಬೆಂಗಳೂರು:ಬಸವಕಲ್ಯಾಣದಲ್ಲಿ ಮಹಿಳಾ ಅಸ್ತ್ರ ಪ್ರಯೋಗಿಸಲು ಕಾಂಗ್ರೆಸ್​ಗೆ ಹಿರಿಯ ನಾಯಕರು ಸಲಹೆ ನೀಡಿದ್ದಾರೆ.
ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್​ನಿಂದ ದಿ.ನಾರಾಯಣ ರಾವ್ ಪತ್ನಿ ಮಲ್ಲಮ್ಮ ಹಾಗೂ ವಿಧಾನ ಪರಿಷತ್ ಸದಸ್ಯ ವಿಜಯ್ ಸಿಂಗ್ ಅವರ ಹೆಸರನ್ನ ಹೈಕಮಾಂಡ್​ಗೆ ಕಳುಹಿಸಿ ಕೊಡಲು ಶನಿವಾರ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾಪ ಆಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ನಾರಾಯಣರಾವ್ ಅವರ ಪತ್ನಿಗೆ ಟಿಕೆಟ್ ಕೊಡುವುದು ಉಚಿತ. ಬಸವಕಲ್ಯಾಣಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಅವರನ್ನ ಕಣಕ್ಕಿಳಿಸುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬರುತ್ತಿದೆ. ವಿಜಯೇಂದ್ರನ ವಿರುದ್ಧ ಮಹಿಳಾ ಅಭ್ಯರ್ಥಿಯನ್ನ ಕಣಕ್ಕಿಳಿಸುವುದು ಉತ್ತಮ ಎಂದರು.ಇದನ್ನೂ ಓದಿರಿ3 ಸಾವಿರ ಹಣ ಕೊಟ್ಟು ನನ್ನ ಕಾರಿಗೆ ಡೀಸೆಲ್ ಹಾಕಿಸದಷ್ಟು ದುರ್ಗತಿ ಬಂದಿಲ್ಲ… ಎನ್ನುತ್ತಲೇ ಸಿಡಿಮಿಡಿಗೊಂಡ ಸವದಿ
ಅಲ್ಲದೆ ನಾರಾಯಣರಾವ್ ಸಜ್ಜನ ರಾಜಕಾರಣಿ ಆಗಿದ್ದರು. ಅದರ ಉಪಯೋಗ ಪಡೆದುಕೊಳ್ಳಬಹುದು. ಕಳೆದ ಬಾರಿ ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಮಹದೇವ್​ಪ್ರಸಾದ್​ರ ಪತ್ನಿ ಗೀತಾ ಮಹಾದೇವ್​ಪ್ರಸಾದ್ ಅವರನ್ನು ಕಣಕ್ಕಿಳಿಸಿ ಸಕ್ಸಸ್ ಆಗಿದ್ವಿ. ಗುಂಡ್ಲುಪೇಟೆ ಮಾದರಿಯನ್ನೇ ಬಸವಕಲ್ಯಾಣದಲ್ಲಿ ಅನುಸರಿಸುವುದು ಉತ್ತಮ ಎಂದು ಸಿದ್ದರಾಮಯ್ಯ ಸಲಹೆ ನೀಡಿದರು.
ಸಿದ್ದರಾಮಯ್ಯರ ಮಾತಿಗೆ ಈಶ್ವರ್ ಖಂಡ್ರೆ ಕೂಡ ಧ್ವನಿಗೂಡಿಸಿದರು. ಆದರೆ, ವಿಜಯ್ ಸಿಂಗ್ ಸೂಕ್ತ ಎಂದು ಡಿ.ಕೆ.ಶಿವಕುಮಾರ್​ ಹೇಳಿದರು. ಚುನಾವಣಾ ಆರ್ಥಿಕ ವಿಚಾರಗಳನ್ನ ನೋಡುವ ಜತೆಗೆ ಧರ್ಮಸಿಂಗ್ ಹೆಸರು ಇರೋದ್ರಿಂದ ವಿಜಯ್​ ಸಿಂಗ್​ ಆಯ್ಕೆ ಉಚಿತ ಎಂದರು. ಕೆಪಿಸಿಸಿ ಅಧ್ಯಕ್ಷರು ಮತ್ತು ವಿಪಕ್ಷ ನಾಯಕರಿಂದ ಪ್ರತ್ಯೇಕ ಹೆಸರು ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಆ ಎರಡೂ ಹೆಸರನ್ನು ಹೈಕಮಾಂಡ್​ಗೆ ಶಿಫಾರಸು ಮಾಡಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ತಿಳಿದು ಬಂದಿದೆ.
ಸೆಕ್ಸ್​ ಮಾಡುವಾಗ ಉಸಿರುಗಟ್ಟಿ ಸತ್ತೇ ಹೋದಳು… ಬ್ಯಾಚಲರ್​ ಮನೆಯಲ್ಲಿ ವಿವಾಹಿತೆ ಸಾವು!

ತಾಯಿ-ತಂಗಿ ಮೇಲೆ ಟ್ರ್ಯಾಕ್ಟರ್​ ಹರಿಸಿ ಕೊಂದುಬಿಟ್ಟ! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

ಬೆಳ್ಳಂಬೆಳಗ್ಗೆ ಮದುವೆ ಮನೆಯಲ್ಲಿ ವಧುವಿನ ಕೋಣೆಯತ್ತ ಗುಂಡಿನ ದಾಳಿ! ಬೆಚ್ಚಿಬಿದ್ದ ಕುಟುಂಬಸ್ಥರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − sixteen =
Remember me
