ಬೆಂಗಳೂರು:ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ಹೊಸ ಮುಖ್ಯಮಂತ್ರಿ ವಿಚಾರಕ್ಕೆ ಇದೀಗ ತೆರೆ ಬಿದ್ದಿದೆ. ಕೌತುಕಮಯ ಬೆಳವಣಿಗೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ಆಯ್ಕೆ ಆಗಿದ್ದಾರೆ. ಇವರು ರಾಜ್ಯದ 20ನೇ ಮುಖ್ಯಮಂತ್ರಿ ಆಗಿ ಪದಗ್ರಹಣ ಮಾಡಲಿದ್ದಾರೆ.
ನಿನ್ನೆಯಷ್ಟೇ ಬಿ.ಎಸ್​. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿ ವಿಚಾರವಾಗಿ ಹಲವರು ಹೆಸರುಗಳು ಕೇಳಿಬಂದಿದ್ದವು. ಅಲ್ಲದೆ ಕ್ಷಣಕ್ಷಣಕ್ಕೂಕುತೂಹಲ ಮೂಡಿಸುವಂಥ ಬೆಳವಣಿಗೆಗಳು ನಡೆದಿದ್ದು, ಕರ್ನಾಟಕದ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬುದು ದೊಡ್ಡ ಕೌತುಕ ಮೂಡಿಸಿತ್ತು.
ಕುಮಾರಕೃಪಾ ಗೆಸ್ಟ್​ಹೌಸ್​ನಲ್ಲಿ ಬಿಜೆಪಿ ರಾಜ್ಯ ಪ್ರಭಾರಿ ಅರುಣ್​ ಕುಮಾರ್​, ವೀಕ್ಷಕರ ಧರ್ಮೇಂದ್ರ ಪ್ರಧಾನ್​, ಕಿಶನ್​ ರೆಡ್ಡಿ ಆಗಮನದ ಬಳಿಕ ಮತ್ತಷ್ಟು ಕುತೂಹಲಕಾರಿ ಬೆಳವಣಿಗೆಗಳು ನಡೆದವು. ಅಂತಿಮವಾಗಿ ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ನಡೆದ ಬಿಜೆಪಿ  ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಅವರು ನೂತನ ಮುಖ್ಯಮಂತ್ರಿ ಆಗಿ ಆಯ್ಕೆಯಾದರು.
ಬಿಎಸ್​​ವೈ ಪದಚ್ಯುತಿಯಿಂದ ಬಿಜೆಪಿಗೆ ಭಾರಿ ಪೆಟ್ಟು ಬೀಳುವುದು ಖಚಿತ: ರಂಭಾಪುರಿಶ್ರೀ

ಎರಡೂ ಡೋಸ್ ಲಸಿಕೆ ಪಡೆದವರಿಗಿಂತಲೂ ಇವರಲ್ಲೇ ಹೆಚ್ಚು ರೋಗನಿರೋಧಕ ಶಕ್ತಿ!; ಯಾರಿವರು?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:nineteen − eleven =
Remember me
