ಬೆಂಗಳೂರು:ಇನ್ನೊಂದು ಗಂಟೆಯಲ್ಲಿ ಖಾತೆ ಹಂಚಿಕೆ ಪ್ರಕಟಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಆರ್ ಟಿ ನಗರದಲ್ಲಿರುವ ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಬೆಂಗಳೂರು ಶಾಖೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ವರಿಷ್ಠರು ಖಾತೆ ಹಂಚಿಕೆ ಪಟ್ಟಿಯನ್ನು ಫೈನಲ್ ಮಾಡಿದ್ದಾರೆ. ಇನ್ನೊಂದು ಗಂಟೆಯಲ್ಲಿ ರಾಜಭವನದಿಂದ ಅಧಿಕೃತವಾಗಿ ಪಟ್ಟಿ ಪ್ರಕಟವಾಗಲಿದೆ. ಯಾವೊಬ್ಬ ಸಚಿವರು ಕೂಡ ಇಂಥದ್ದೇ ಖಾತೆ ಬೇಕು ಎಂದು ಪಟ್ಟು ಹಿಡಿದಿಲ್ಲ. ಖಾತೆ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ. ರಾತ್ರಿ ಪ್ರಕಟಣೆ ಬೇಡ ಎಂಬ ಸಲಹೆ ಬಂದ ಹಿನ್ನೆಲೆಯಲ್ಲಿ ಇನ್ನೂಂದು ಗಂಟೆಯಲ್ಲಿ ಪ್ರಕಟವಾಗಲಿದೆ ಎಂದು ಹೇಳಿದರು.
ಕೋವಿಡ್ ಸಂಬಂಧ ನಿನ್ನೆ ಸಭೆ ಮಾಡಿದ್ದೇವೆ. ಮಾರ್ಗಸೂಚಿ ಪ್ರಕಟ ಮಾಡಿದ್ದೇವೆ. ಮಾರ್ಗಸೂಚಿಗಳ ಪಾಲನೆಗೆ ಕ್ರಮ ವಹಿಸಲಾಗಿದೆ ಎಂದು ಇದೇ ಸಂದರ್ಭದಲ್ಲಿ ಸಿಎಂ ಬೊಮ್ಮಾಯಿ ಅವರು ತಿಳಿಸಿದರು.
ಸಿಎಂ ಬೆನ್ನುಬಿಡದ ಎಂಟಿಬಿ ನಾಗರಾಜ್ನಿನ್ನೆ ಇಂದಲೂ ಸಿಎಂ ಸುತ್ತಮುತ್ತ ಸುತ್ತಾಡುತ್ತಿರುವ ಎಂಟಿಬಿ ನಾಗರಾಜ್, ಅಬಕಾರಿ ಹಾಗೂ ಪೌರಾಡಳಿತ ಖಾತೆ ಬೇಡ ಎಂದು ಒತ್ತಾಯ ಮಾಡುತ್ತಿದ್ದಾರೆಂಬ ಮಾಹಿತಿ ಬಂದಿದೆ. ಅಬಕಾರಿಯಲ್ಲಿ ಹೆಸರು ಮಾಡಲು ಆಗಲ್ಲ. ಬೇರೆ ಖಾತೆಯ ಜವಾಬ್ದಾರಿ ಕೊಡಿ ಎಂದು ಸಿಎಂ ಬೊಮ್ಮಾಯಿ ದುಂಬಾಲು ಬಿದ್ದಿದ್ದಾರೆನ್ನಲಾಗಿದೆ.
ಮೊದಲ ಚೆಂಡಿನಲ್ಲೇ ಬೌಂಡರಿ ಬಾರಿಸಿದ ಸಿಎಂ ಬೊಮ್ಮಾಯಿ: ಸಂಪುಟ ರಚನೆಯ ಇನ್​ಸೈಡ್​ ಸ್ಟೋರಿ ಇದು..!

ವಿಸ್ಮಯ ದುರಂತ ಸಾವು ಪ್ರಕರಣ: ಸರ್ಕಾರಿ ಕೆಲಸ ಕಳೆದುಕೊಂಡ ಹಣದಾಹಿ ಗಂಡ..!

ಜೈಲುಹಕ್ಕಿಗಳಿಗೆ ಕಾಡುತ್ತಿದೆ ಕರೊನಾ ಖಿನ್ನತೆ!; ಜೈಲಿನಲ್ಲಿ ಮಾನಸಿಕ ವೇದನೆ, ನಿಮ್ಹಾನ್ಸ್​ನಿಂದ ಸರಳ ಸೂತ್ರದ ಕೈಪಿಡಿ ಸಿದ್ಧ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 + 1 =
Remember me
