ಹಾವೇರಿ:ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್​ ರಾಜ್​ ಸಚಿವ ಕೆ.ಎಸ್​.ಈಶ್ವರಪ್ಪ ಅವರಿಗೆ ಅನಾಮಧೇಯ ವ್ಯಕ್ತಿಯೋರ್ವ ಕರೆ ಮಾಡಿ ಬೆದರಿಕೆ ಹಾಕಿದ್ದ. ಇನ್ನು 48 ತಾಸುಗಳಲ್ಲಿ ಹತ್ಯೆ ಮಾಡುವುದಾಗಿ ಹೇಳಿದ್ದ.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಅಪರಿಚಿತ ನಂಬರ್​ನಿಂದ ಕರೆ ಬಂದಿದ್ದು ತಮಿಳುನಾಡಿನಿಂದ ಎಂಬುದು ಗೊತ್ತಾಗಿದೆ. ಆ ನಂಬರ್​ನ್ನು ಪರಿಶೀಲನೆ ಮಾಡಲಾಗಿದೆ ಎಂದಿದ್ದಾರೆ.
ಬೆದರಿಕೆ ಕರೆ ಬಗ್ಗೆ ಎಲ್ಲ ರೀತಿಯ ತನಿಖೆ, ಕ್ರಮ ಕೈಗೊಳ್ಳಲು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅವರಿಗೆ ಭದ್ರತೆ, ಸುರಕ್ಷತೆ ಒದಗಿಸಲು ಹೇಳಿದ್ದೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನೆರೆ ಪರಿಹಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಬಂದರೂ ತುಟಿ ಬಿಚ್ಚಲಿಲ್ಲ ಎಂದು ವಿಪಕ್ಷದವರು ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ ಅವರು, ಬರ ಬಂದಾಗ ಅತಿ ಹೆಚ್ಚು ಮುಂಗಾರು, ಹಿಂಗಾರು ಅನುದಾನ ಕೊಟ್ಟಿದ್ದಾರೆ. ವಿರೋಧ ಪಕ್ಷದವರು ಈಗ ಆರೋಪ ಮಾಡುತ್ತಾರೆ. ತಮ್ಮ ಕಾಲದಲ್ಲಿ ಬರ ಹಾಗೂ ವಿಪತ್ತು ಪರಿಹಾರ ಕರ್ನಾಟಕಕ್ಕೆ ಎಷ್ಟು ಬಂದಿದೆ ಎಂದು ಹೇಳಲಿ ಎಂದು ಹೇಳಿದರು.
ಈ ಐದು ವರ್ಷದಲ್ಲಿ ಎಷ್ಟು ಹಣ ಬಂದಿದೆ ಎಂಬುದನ್ನು ನೋಡಬೇಕು. ಬಾಯಿಗೆ ಬಂದಂತೆ ಮಾತನಾಡಬಾರದು. ಇದಕ್ಕೆಲ್ಲ ಸದನದಲ್ಲೇ ಉತ್ತರ ಕೊಡುತ್ತೇವೆ ಎಂದು ಬೊಮ್ಮಾಯಿ ತಿಳಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
