ಬೆಂಗಳೂರು:‘ಬಿಜೆಪಿಯ ಕೆಲ ಮಹಾನ್ ನಾಯಕರು ಹಾಗೂ ಕಾಂಗ್ರೆಸ್ ನಡುವೆ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ’ ಎಂದು ಸಂಸದ ಪ್ರತಾಪ್ ಸಿಂಹ ಮಾಡಿರುವ ಆರೋಪದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ‘ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ನನಗೆ ಹೊಂದಾಣಿಕೆ ರಾಜಕಾರಣದ ಅವಶ್ಯಕತೆಯೂ‌ ಇಲ್ಲ’ ಎಂದು ಸ್ಪಷ್ಟೀಕರಣ ನೀಡಿದರು.
ಸುದ್ದಿಗೋಷ್ಟಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡುತ್ತಾ, ಬೇರೆ ಪಕ್ಷಗಳ ನಾಯಕರನ್ನು ರಾಜಕೀಯದಲ್ಲಿ ಭೇಟಿ ಮಾಡುವುದು ಸರ್ವೇ ಸಾಮಾನ್ಯ. ಎಲ್ಲ ಪಕ್ಷಗಳಲ್ಲೂ, ಎಲ್ಲರಿಗೂ ಸ್ನೇಹಿತರಿದ್ದಾರೆ. ಪ್ರತಾಪ್ ಸಿಂಹ ಅವರು ದಾಖಲೆಗಳನ್ನು ನೋಡಿ ಮಾತಾಡಬೇಕು. ಸಿದ್ದರಾಮಯ್ಯ ವಿರುದ್ಧ ಐದು ಪ್ರಕರಣಗಳನ್ನು ಫೈಲ್​ ಮಾಡಿ ದೂರು ದಾಖಲಿಸಿದ್ದೇವೆ. ಈ ಐದೂ ಪ್ರಕರಣಗಳಲ್ಲೂ ಅವರೇ ಆರೋಪಿ. ಅಲ್ಲದೆ 60 ಪ್ರಕರಣಗಳನ್ನು ಎಸಿಬಿಯಿಂದ ಲೋಕಾಯುಕ್ತಕ್ಕೆ ವರ್ಗಾಯಿಸಿದ್ದೆವು ಎಂದರು. ಈ ಮೂಲಕ ಸಿದ್ದರಾಮಯ್ಯ ವಿರುದ್ಧ ಯಾವುದೇ ಪ್ರಕರಣದಲ್ಲಿ ತನಿಖೆ ಮಾಡಿಲ್ಲ ಎಂಬ ಪ್ರತಾಪ್ ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು ನೀಡಿದರು.
ಇದನ್ನೂ ಓದಿ:ಕಾಂಗ್ರೆಸ್-ಬಿಜೆಪಿ ನಾಯಕರ ಹೊಂದಾಣಿಕೆ! ಪ್ರತಾಪ್ ಸಿಂಹ ಆರೋಪಕ್ಕೆ ತಿರುಗೇಟು ಕೊಟ್ಟ ಸಿಎಂ
‘ಬಿಜೆಪಿಯ ಕೆಲ ಮಹಾನ್ ನಾಯಕರು ಹಾಗೂ ಕಾಂಗ್ರೆಸ್ ನಡುವೆ ಹೊಂದಾಣಿಕೆ ರಾಜಕಾರಣ ನಡೆಯುತ್ತಿದೆ. ಹಾಗಾಗಿ ಹಗರಣಗಳ ತನಿಖೆ ನಡೆಸುವ ಗೋಜಿಗೆ ಯಾರೂ ಹೋಗುತ್ತಿಲ್ಲ. ಸಿದ್ದರಾಮಯ್ಯ ವಿರುದ್ಧ ರೀಡೂ, ಅರ್ಕಾವತಿ ಡಿನೋಟಿಫೀಕೇಷನ್, ಕೆಂಪಣ್ಣ ಆಯೋಗ ವರದಿ ಇದೆ ಎಂದು ನಮ್ಮ ಹಿರಿಯ ನಾಯಕರು ಅಬ್ಬರಿಸುತ್ತಿದ್ದರು. ಆದರೆ ಈ ಬಗ್ಗೆ ವಿಧಾನಸಭೆ ಹೊರಗೂ-ಒಳಗೂ ಸಮರ್ಥವಾಗಿ ಮಂಡನೆ ಮಾಡಲಿಲ್ಲ’ ಎಂದು ಸ್ವಪಕ್ಷದ ವಿರುದ್ಧವೇ ಮೈಸೂರಿನಲ್ಲಿ ಪ್ರತಾಪ್ ಸಿಂಹ ಅಸಮಾಧಾನ ವ್ಯಕ್ತಪಡಿಸಿದ್ದರು.
ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂಬ ಸಂಸದ ಪ್ರತಾಪ್ ಸಿಂಹ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಯಾರು ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಹೇಳಬೇಕು. ಯಾರು ಎಂದು ಅವರಿಗೆ ಗೊತ್ತಿರಬೇಕಲ್ಲ, ಮಾಹಿತಿ ಇದ್ದರೆ ಹೇಳಲಿ. ರಾಜ್ಯಪಾಲರಿಗೆ ದೂರು ಕೊಡುವುದಾದರೆ ಕೊಡಲಿ. ತನಿಖೆಯನ್ನು ಯಾವಾಗ, ಯಾರಿಂದ ಎಷ್ಟು ಹೊತ್ತಿಗೆ ಮಾಡಿಸಬೇಕು ಎನ್ನುವುದು ನಮಗೆ ಸೇರಿದ್ದು. ಪ್ರತಾಪ್ ಸಿಂಹ ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅವರಿಗೆ ರಾಜಕೀಯ ಪ್ರಬುದ್ಧತೆ ಇಲ್ಲ ಎಂದು ಕಿಡಿಕಾರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − five =
Remember me
