ಬೆಂಗಳೂರು:ರಾಜ್ಯ ಸರ್ಕಾರ ಸರ್ವಾಧಿಕಾರಿ ಹಿಟ್ಲರ್ ರೀತಿ ವರ್ತಿಸುತ್ತಿದ್ದು, ಸ್ಪೀಕರ್ ಕುರ್ಚಿಯನ್ನೂ ದುರ್ಬಳಕೆ ಮಾಡಿಕೊಂಡು ಬಿಜೆಪಿ ಸದಸ್ಯರನ್ನು ಅಮಾನತು ಮಾಡಿದ್ದಾರೆ. ಇದೊಂದು ಕರಾಳ ದಿನವಾಗಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಇದನ್ನೂ ಓದಿ:ನಾವು ಅವರನ್ನು ಪುಡಿಪುಕ್ಕ ಅಂದಿದ್ದೆವಾ?: ಪ್ರತಿಪಕ್ಷಗಳ ನಡೆ ಬಗ್ಗೆ ಡಿ.ಕೆ. ಶಿವಕುಮಾರ್ ಆಕ್ರೋಶ
ವಿಧಾನಸಭೆಯಲ್ಲಿ ಧರಣಿ ನಿರತ ಬಿಜೆಪಿ ಶಾಸಕರನ್ನು ಅಮಾನತು ಮಾಡಿರುವುದನ್ನು ಖಂಡಿಸಿ ಸ್ಪೀಕರ್ ಕಚೇರಿ ಹಾಗೂ ವಿಧಾನಸೌಧದ ಪಶ್ಚಿಮ ದ್ವಾರದ ಮೆಟ್ಟಿಲುಗಳ ಮೇಲೆ ಬಿಜೆಪಿ, ಜೆಡಿಎಸ್ ಸದಸ್ಯರೊಂದಿಗೆ ಧರಣಿ ನಡೆಸಿದರು. ಪೊಲೀಸರು ಧರಣಿ ನಿರತರನ್ನು ವಶಕ್ಕೆ ಪಡೆದರು.
ಇದಕ್ಕೂ ಮೊದಲು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜುಲೈ 17,18 ರಂದು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮದಲ್ಲಿ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಗುಮಾಸ್ತರನ್ನಾಗಿ ಮಾಡಿ ಪ್ರೋಟೊಕಾಲ್ ಇಲ್ಲದವರಿಗೂ ಪಿಎ ಥರಾ ಕೆಲಸ ಮಾಡುವಂತೆ ಮಾಡಿದ್ದಾರೆ. ಯಾರು ರಾಜ್ಯದ ಗೆಸ್ಟ್ ಅಂತ ಇರುತ್ತಾರೊ ಅವರಿಗೆ ಗೌರವ ಸಲ್ಲಿಸಲು ಪ್ರೋಟೊಕಾಲ್ ಅಧಿಕಾರಿಗಳು ಇದ್ದಾರೆ. ಅವರ ಬದಲು ಹಿರಿಯ ಐಎಎಸ್ ಅಧಿಕಾರಿಗಳಿಗೆ ರಾಜಕಾರಣಿಗಳನ್ನು ಬಾಗಿಲು ಕಾಯಲು ಹಚ್ಚಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಪ್ರಜಾಪ್ರಭುತ್ವ ಕಗ್ಗೊಲೆಯಾಗಿದೆ.
ಇದನ್ನೂ ಓದಿ:ರೈತರ ಆತ್ಮಹತ್ಯೆ ಕುರಿತು ಅಧ್ಯಯನ ಆಗಲಿ; ಬ್ಯಾಂಕ್, ಫೈನಾನ್ಸ್‌ಗೆ ಕಡಿವಾಣ ಹಾಕಲು ಸರ್ಕಾರಕ್ಕೆ ರೈತ ಸಂಘ ಆಗ್ರಹ
ಸ್ಪೀಕರ್‌ ಸ್ಥಾನ ದುರುಪಯೋಗ ಆಗಿದೆ. ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿದ್ದಾರೆ. ನಾವು ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ನಮ್ಮ ಸದಸ್ಯರಿಗೆ ಊಟಕ್ಕೆ ಬಿಡದೆ ಸದನ ನಡೆಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಹಿಟ್ಲರ್ ಶಾಹಿ ಆಡಳಿತ ನಡೆಸಿದ್ದಾರೆ. ಸ್ಪೀಕರ್ ಕಾಂಗ್ರೆಸ್ ನವರು ಹೇಳಿದಂತೆ ನಡೆದುಕೊಳ್ಳುತ್ತಿದ್ದಾರೆ. ಸ್ಪೀಕರ್ ಕುರ್ಚಿಗೆ ಅವಮಾನವಾಗುವಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.
ಈ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ಪೇಪರ್ ಹರಿದು ಹಾಕಿದ ಉದಾಹರಣೆ ಇದೆ. ಒಬ್ಬ ಸದಸ್ಯರು ಸ್ಪೀಕರ್ ಮುಂದಿನ ಮೈಕ್ ಕಿತ್ತು ಹಾಕಿದ ಉದಾಹರಣೆ ಇದೆ. ಸಿದ್ದರಾಮಯ್ಯ ಸದನದ ಬಾಗಿಲು ಒದ್ದು ಹೊಗಿರುವುದು ನಿದರ್ಶನ ಇದೆ. ಇವರು ಪ್ರತಿಪಕ್ಷದ ಹಕ್ಕನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಇವತ್ತು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಇದು ಕರಾಳ ದಿನ. ಇದರ ವಿರುದ್ದ ನಾವು ಸದನದ ಹೊರಗೂ ಹೋರಾಟ ಮಾಡಿ ಜನರ ಬಳಿಗೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:High Alert Over Suspected Terrors Arrest In Bengaluru | ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನ ಬೆನ್ನಲ್ಲೆ ಎಲ್ಲೆಡೆ ಹೈ ಅಲರ್ಟ್
ಇದೇ ವೇಳೆ ಉಪ ಸಭಾಧ್ಯಕ್ಷರಿಗೆ ಬಿಜೆಪಿ ಅವಮಾನ ಮಾಡಿದೆ ಎಂಬ ಕಾಂಗ್ರೆಸ್​​ನವರ ಆರೋಪದ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್​​ನವರು ಉಪ ಸಭಾಧ್ಯಕ್ಷರಿಗೆ ಅವಮಾನ ಮಾಡಿದ್ದಾರೆ.‌ ಸ್ಪೀಕರ್ ಸದನದ ಪರಿಸ್ಥಿತಿಯನ್ನು ನಿಭಾಯಿಸದೇ ಎದ್ದು ಹೋಗಿದ್ದಾರೆ. ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿಯವರಿಗೆ ಸಚಿವ ಸ್ಥಾನ ನೀಡಬೇಕಿತ್ತು. ಅವರನ್ನು ಉಪಸಭಾಧ್ಯಕ್ಷರನ್ನಾಗಿ ಮಾಡಿದ್ದಾರೆ. ಕಾಂಗ್ರೆಸ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು.
ರಾಜ್ಯದ ಮರ್ಯಾದೆ ಹಾಳು ಮಾಡಿದ ಕಾಂಗ್ರೆಸ್:ಇದಕ್ಕೂ ಮೊದಲು ಸದನದಲ್ಲಿ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ ರಾಜಕೀಯ ಸಮಾವೇಶಗಳು ಇದೇ ಮೊದಲ ಬಾರಿಯಲ್ಲ. ಸಾಕಷ್ಟು ಬಾರಿ ಸಮಾವೇಶಗಳು ನಡೆದಿವೆ. ಈ ಸಭೆಗೆ ಬಂದವರು ಅನೇಕರು ಎಂಎಲ್​​ಎ, ಎಂಪಿ ಅಲ್ಲಾ, ಪ್ರಧಾನ‌ ಕಾರ್ಯದರ್ಶಿಗಳು ಏರ್​​ಪೊರ್ಟ್ ಬಳಿ ನಿಂತು ಅವರನ್ನು ಸ್ವಾಗತ ಮಾಡಿದ್ದಾರೆ‌ ಎಂದು ಆರೋಪಿಸಿದರು.
ಇದನ್ನೂ ಓದಿ:Karnataka Assembly Session: Marshals Evicts Suspended BJP MLAs | ಅಮಾನತ್ತುಗೊಂಡ ಬಿಜೆಪಿ‌ ಶಾಸಕರನ್ನು ಹೊರ ಹಾಕುತ್ತಿರುವ ಮಾರ್ಷಲ್
ನೀವು ಅಧಿಕಾರದಲ್ಲಿರುವವರಿಗೆ ನಿಯಮದ ಪ್ರಕಾರ ಗೌರವ ಕೊಡಿ, ಪುಡಿ ಪಾರ್ಟಿಗಳ ಮುಖಂಡರು‌ ಅವರಿಗೆ ಯಾವುದೇ ಅಧಿಕಾರ ಇಲ್ಲ. ಅವರಿಗೆ ಅವರ ರಾಜ್ಯದಲ್ಲಿಯೇ ಮರ್ಯಾದೆ ಇಲ್ಲ. ಜೋಸೆಫ್ ಕರ್ನಾಟಕ ಲೆಜಿಸ್ಲೆಟಿವ್ ಅಂತ ಹಾಕಿದ್ದಾರೆ. ಅವರು ರಾಜ್ಯದ ಶಾಸಕರೆ, ಇವರು ಕರ್ನಾಟಕದ ಮಾನವನ್ನು ರಾಜಕೀಯ ಲಾಭಕ್ಕೆ ಹರಾಜು ಹಾಕುತ್ತಿದ್ದಾರೆ.
ಅಧಿಕಾರಿಗಳು ಯಾಕೆ ಅಲ್ಲಿ ಅಟೆಂಡ್ ಆಗಿದ್ದಾರೆ, ಅವರಿಗೆ ನೋಟಿಸ್ ಕೊಡಬೇಕು ಎರಡು ದಿನದ ಸಂಬಳ ಕಡಿತ ಮಾಡಬೇಕು. ಸಿಎಸ್ ಅವರು ಏನು ಮಾಡುತ್ತಿದ್ದರು. ಅವರು ಅನುಮತಿ ನೀಡಿದ್ದಾರ ಎಂದು ಪ್ರಶ್ನಿಸಿದರು. ಇಲ್ಲಿ ಬರಗಾಲ ಬಿದ್ದು ಸಾಕಷ್ಟು ಕೆಲಸಗಳಿವೆ ಸರ್ಕಾರದ ಕೆಲಸ ಬಿಟ್ಟು ಅಧಿಕಾರಿಗಳು ಅಲ್ಲಿಗೆ ಹೋಗಿ ತಮ್ಮ ಜವಾಬ್ದಾರಿ ಮರೆತಿದ್ದಾರೆ. ಸರ್ಕಾರ ರಾಜ್ಯದ ಮರ್ಯಾದೆ ಹರಾಜು ಹಾಕುತ್ತಿದೆ. ಇದು ಜನರ ತೆರಿಗೆ ಹಣ ನಿಮ್ಮ ಹಣವಲ್ಲ. ರಾಜ್ಯ ಸರ್ಕಾರ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ಜಾನ್ವಿ ಕಪೂರ್ ಕಿವಿ ಕಚ್ಚಿದ ವರುಣ್ ಧವನ್; ತರಾಟೆಗೆ ತೆಗೆದುಕೊಂಡ ನೆಟ್ಟಿಗರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 16 =
Remember me
