ಬೆಂಗಳೂರು:ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿದ ವಿಚಾರಕ್ಕೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ, ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ ಎಂದು ಹೇಳಿದ್ದಾರೆ.
ಇದನ್ನೂ ಓದಿ:Eshwarappa Applauds BSY For The Success Of Shivamogga Airport | ಶಿವಮೊಗ್ಗ ವಿಮಾನ ಸಂಚಾರ ಪ್ರಾರಂಭ; BSYಗೆ ಕ್ರೆಡಿಟ್ ಕೊಟ್ಟ ಈಶ್ವರಪ್ಪ
ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ ಆದರೂ ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ.1/3
— Basavaraj S Bommai (@BSBommai)August 31, 2023

“ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್​ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ. ಆದ್ರೂ ಅದರ ವಿರುದ್ದ ಯಾವುದೇ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ” ಎಂದು ಆರೋಪಿಸಿದರು.
ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ‌ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ.3/3
— Basavaraj S Bommai (@BSBommai)August 31, 2023

“ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಡಿ.ಕೆ. ಶಿವಕುಮಾರ್​ ಅವರು ಕಾನೂನು ತಜ್ಞರೊಟ್ಟಿಗೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥವಿದೆ. ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು, ಅದು ಕೂಡ ಮಾಡಿಲ್ಲ” ಎಂದು ಹೇಳಿದರು.
ಇದನ್ನೂ ಓದಿ:ಆನ್‌ಲೈನ್ ಗೇಮಿಂಗ್‌ ಜಾಹೀರಾತಿನಲ್ಲಿ ಸಚಿನ್ ತೆಂಡೂಲ್ಕರ್; ಕ್ರಿಕೆಟ್​​ ದಿಗ್ಗಜನ ಮನೆ ಮುಂದೆ ಪ್ರತಿಭಟನೆ
“ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಯಾವುದೇ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ‌ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ” ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪ್ರಭಾಸ್​ ನಟನೆಯ ‘ಕಲ್ಕಿ 2898 AD’ ಚಿತ್ರತಂಡದಿಂದ ಹೊರಬಿತ್ತು ಕುತೂಹಲಕಾರಿ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + nineteen =
Remember me
