ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಪ್ರತ್ಯೇಕವಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.
ದೆಹಲಿಯ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ಸೋಮವಾರ ಮತ್ತು ಮಂಗಳವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸುವರು.
ಧಾರವಾಡ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಬೊಮ್ಮಾಯಿ‌ ಹುಬ್ಬಳ್ಳಿಯಿಂದ, ಮಾಜಿ ಸಿಎಂ ಬಿಎಸ್​ವೈ ಬೆಂಗಳೂರಿನಿಂದ ಸೋಮವಾರ ದೆಹಲಿಗೆ ತೆರಳುವರು. ಎರಡು ದಿನಗಳ ಸಭೆಯಲ್ಲಿ ಪಾಲ್ಗೊಂಡ ನಂತರ ಇಬ್ಬರೂ ಪ್ರತ್ಯೇಕವಾಗಿ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ.
ಈ ವರ್ಷ ಕರ್ನಾಟಕ ಸೇರಿ ಒಂಭತ್ತು ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೊದಲಿಗೆ ಕರ್ನಾಟಕದ ಸರತಿ ಶುರುವಾಗಲಿರುವ ಹಿನ್ನೆಲೆಯಲ್ಲಿ ಎರಡು ದಿನಗಳ ಈ ಸಭೆ ಹೆಚ್ಚಿನ‌ ಮಹತ್ವ ಪಡೆದುಕೊಂಡಿದೆ‌.
ರಣತಂತ್ರದ ಭಾಗವಾಗಿ ರಾಜ್ಯದಲ್ಲಿ ಕೈಗೆತ್ತಿಕೊಂಡಿರುವ ಸರ್ಕಾರದ ಸಾಧನೆ ತಿಳಿಸುವ ಜನಸಂಕಲ್ಪ ಯಾತ್ರೆ ಸಾಧನೆ, ಫಲ, ಡಬಲ್ ಇಂಜಿನ್ ಸರ್ಕಾರದ ಪ್ರಯೋಜನಗಳ ಬಗ್ಗೆ ಪರಿಣಾಮಕಾರಿಯಾಗಿ ಬಿಂಬಿಸಲು ಮಾಡಿದ ಪ್ರಯತ್ನ, ಸಂಘಟನೆ ಬಲವರ್ಧನೆ ಚಟುವಟಿಕೆಗಳ ಪ್ರಗತಿ ಪರಾಮರ್ಶೆಯಾಗಲಿದೆ. ರಾಜ್ಯಕ್ಕೆ ಪ್ರತ್ಯೇಕವಾಗಿ ಹೆಣೆಯಬೇಕಾದ ಚುನಾವಣಾ ತಂತ್ರಗಾರಿಕೆ ಕುರಿತು ಚರ್ಚೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕದವರೇ ಆದ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಪಕ್ಷದ ರಾಜ್ಯಾಧ್ಯಕ್ಷ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಈ ಸಭೆಯಲ್ಲಿ ಪಾಲ್ಗೊಳ್ಳುವರು.
ಇದೇ ಸಂದರ್ಭದಲ್ಲಿ ಸಚಿವ ಸಂದರ್ಭದಲ್ಲಿ ಸಚಿವ ಸಂಪುಟದಲ್ಲಿ ಖಾಲಿಯಿರುವ ಆರು ಸ್ಥಾನಗಳ ಭರ್ತಿ, ಅವಧಿ ಮುಗಿದ ನಿಗಮ-ಮಂಡಳಿಗಳಿಗೆ ಹೊಸಬರ ನೇಮಕದ ಬಗ್ಗೆ ವರಿಷ್ಠರ ಬಳಿ ಸಿಎಂ ಬೊಮ್ಮಾಯಿ‌ ಪ್ರಸ್ತಾಪಿಸುವ ಸಾಧ್ಯತೆಗಳಿದ್ದು, ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಎರಡು ದಿನಗಳ ಸಭೆ ಸ್ಥೂಲವಾಗಿ ಪರಾಮರ್ಶೆ ಮಾಡಲಿದೆ ಎಂದು ತಿಳಿದಿದೆ.
ಭಾರತೀಯರು ಸೇರಿ ಒಟ್ಟು 72 ಮಂದಿ ಪ್ರಯಾಣಿಸುತ್ತಿದ್ದ ವಿಮಾನ ನೇಪಾಳದಲ್ಲಿ ಪತನ: 36ಕ್ಕೇರಿದ ಸಾವಿನ ಸಂಖ್ಯೆ

ಊಟದ ವಿಚಾರಕ್ಕೆ ಜಗಳ: ರಾಮನಗರದಲ್ಲಿ ತಾಯಿ-ಮಗ ದುರಂತ ಅಂತ್ಯ

ಮಟಮಟ ಮಧ್ಯಾಹ್ನ ಮಲಗಿದ ಸ್ಥಿತಿಯಲ್ಲೇ ಹೆಣವಾದ ಕೊಪ್ಪಳದ ಪ್ರೇಮಿಗಳು! ಬೆಚ್ಚಿಬಿದ್ದ ಸ್ಥಳೀಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − eleven =
Remember me
