ಬೆಂಗಳೂರು:ರೌಡಿಗಳ ಸಹವಾಸವಿಲ್ಲ, ಪ್ರೋತ್ಸಾಹಿಸುವುದೂ ಇಲ್ಲ ಮತ್ತು ಪಕ್ಷ ಸೇರ್ಪಡೆಗಂತೂ‌ ಅವಕಾಶ ಇಲ್ಲವೇ ಇಲ್ಲ. ಇದು, ಬಿಜೆಪಿ ಸ್ಪಷ್ಟ ನಿಲುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿ ನಿಮಿತ್ತ ವಿಧಾನಸೌಧ ಆವರಣದಲ್ಲಿ ಅವರ ಪ್ರತಿಮೆಗೆ ಗುರುವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಯಾವ ರೌಡಿಯೊಂದಿಗೆ ಯಾವ ನಾಯಕರು ಸಹವಾಸ ಮಾಡಿದ್ದಾರೋ ಗೊತ್ತಿಲ್ಲ, ಈ ಬಗ್ಗೆ ಹೆಚ್ಚು ಮಾತನಾಡಲು ಬಯಸುವುದಿಲ್ಲ ಎಂದು ಎಲ್ಲ ಪ್ರಶ್ನೆಗಳನ್ನು ತಳ್ಳಿಹಾಕಿದರು.
ಮಹಾರಾಷ್ಟ್ರ ಎತ್ತಿರುವ ಗಡಿ ತಕರಾರು, ಸುಪ್ರೀಂ ಕೋರ್ಟ್​ಗೆ ಸಲ್ಲಿಸಿರುವ ಅರ್ಜಿ ಮೆಂಟೇನಿಬಿಲಿಟಿ ಇಲ್ಲವೆಂಬ ಕರ್ನಾಟಕದ ನಿರ್ಧಾರ ಅಚಲ. ಈ ವಿಷಯದಲ್ಲಿ ಕಾನೂನು ಹೋರಾಟಕ್ಕೆ ನಮ್ಮ ರಾಜ್ಯದ ಕಾನೂನು ತಂಡ ಸಜ್ಜಾಗಿದೆ ಎಂದು ಸಿಎಂ ಬೊಮ್ಮಾಯಿ‌ ಪುನರುಚ್ಚರಿಸಿದರು.
ಚರ್ಚಿಸಿಲ್ಲಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ನಿರ್ಮಾಣಕ್ಕೆ ಸಂಬಂಧಿಸಿ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಈ ಕುರಿತು ಯಾವುದೇ ಆದೇಶ ಹೊರಡಿಸಿಲ್ಲ. ವಕ್ಫ್ ಬೋರ್ಡ್ ಅಧ್ಯಕ್ಷರ‌ ಜತೆಗೂ ಮಾತನಾಡುವೆ ಎಂದು ಸಿಎಂ ಬೊಮ್ಮಾಯಿ‌ ಹೇಳಿದರು.
ಲೈವ್​ ಸ್ಟ್ರೀಮಿಂಗ್​ ವೇಳೆ ಕೊರಿಯಾ ಯುವತಿಗೆ ಕಿರುಕುಳ: ವಿಡಿಯೋ ವೈರಲ್​, ಯುವಕರಿಬ್ಬರ ಬಂಧನ

ಮುಸ್ಲಿಂ ಕಾಲೇಜು ವಿವಾದ ಬೆನ್ನಲ್ಲೇ ಮತ್ತೊಂದು ವಿವಾದ: ಕೇಸರಿ ಕಾಲೇಜು ಬೇಕೆಂದು ಹಿಂದು ಸಂಘಟನೆಗಳ ಪಟ್ಟು

ಕರ್ತವ್ಯ ನಿರತ ಪೊಲೀಸ್​ ಪೇದೆ ಹೃದಯಾಘಾತದಿಂದ ಠಾಣೆಯಲ್ಲೆ ಸಾವು: ಕೋಲಾರದಲ್ಲಿ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
