ಬೆಂಗಳೂರು:ಭ್ರಷ್ಟಾಚಾರದ ಬಗ್ಗೆ ಮಾತನಾಡುವ, ಪ್ರತಿಭಟಿಸುವ ನೈತಿಕತೆಯೇ ಕಾಂಗ್ರೆಸ್ ಗೆ ಇಲ್ಲ. ಈ ವಿಷಯ ಮುಂದಿಟ್ಟುಕೊಂಡು ಹೋರಾಟ ನಡೆಸಿರುವುದು‌ ಹಾಸ್ಯಾಸ್ಪದ. ಕಾಂಗ್ರೆಸ್ ತಟ್ಟೆಯಲ್ಲಿ ಕತ್ತೆ ಸತ್ತು ಬಿದ್ದಿದೆ. ಮೊದಲು ಅದನ್ನು ನೋಡಿಕೊಳ್ಳಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ವಾಗ್ದಾಳಿ ನಡೆಸಿದರು.
ವಿಧಾನಸೌಧದಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸೋಮವಾರ ಪಾಲ್ಗೊಂಡ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಭ್ರಷ್ಟಾಚಾರ ಕಾಂಗ್ರೆಸ್ ಆಡಳಿತದ ಒಂದು ಭಾಗ ಆಗಿತ್ತು. ಅವರ ಪಾಪ ಮುಚ್ಚಿಕೊಳ್ಳಲು ಪ್ರತಿಭಟನೆ ಮಾಡುತ್ತಿದ್ದಾರೆ. ಜನ ಇದ್ಯಾವುದನ್ನೂ ಒಪ್ಪಿಕೊಳ್ಳಲ್ಲ, ಕಾಂಗ್ರೆಸ್‌ನವರು ಭ್ರಷ್ಟಾಚಾರದ ಬಗ್ಗೆ ಮಾತಾಡೋದು ಅಂದರೆ ಹಾಸ್ಯಾಸ್ಪದ. ತಮ್ಮ ಕೈಗೆ ಮಸಿ ಅಂಟಿದೆ, ಅದನ್ನು ಅವರು ನೋಡಿಕೊಳ್ಳಲಿ ಎಂದು ಕಿಡಿಕಾರಿದರು.
ಕಾಂಗ್ರೆಸ್‌ನವರು ಲೋಕಾಯುಕ್ತ ಮುಚ್ಚಿದ ಪುಣ್ಯಾತ್ಮರು. ಲೋಕಾಯುಕ್ತ ಮುಚ್ಚಿ ನಮಗೆ ಪಾಠ ಹೇಳ್ತಿದಾರಾ ಇವತ್ತು? ಸಿದ್ದರಾಮಯ್ಯ ಸೇರಿ ಇವರೆಲ್ಲರ ವಿರುದ್ಧ 59 ಕೇಸ್​​ಗಳು‌ ಲೋಕಾಯುಕ್ತದಲ್ಲಿ ದಾಖಲಾಗಿದ್ದವು. ಹಾಗಾಗಿ ಲೋಕಾಯುಕ್ತ ಮುಚ್ಚಿ ಎಸಿಬಿ ಮಾಡಿದ್ದರು. ಎಸಿಬಿಯಲ್ಲಿ ಇವರ ವಿರುದ್ಧದ ಎಲ್ಲ ಕೇಸ್ ಮುಚ್ಚಿ ಹಾಕಲು ಬಿ ರಿಪೋರ್ಟ್ ಹಾಕಿದ್ದರು, ಯಾವುದೇ ಕ್ರಮ ಕೈಗೊಳ್ಳದೇ ಕೇಸ್ ಮುಚ್ಚಿ ಹಾಕಿದ್ದರು. ಎಸಿಬಿಯಲ್ಲಿ ಅವರು ಬಿ ರಿಪೋರ್ಟ್ ಹಾಕಿದ ಕೇಸ್​ಗಳನ್ನು ನಾವು ಲೋಕಾಯುಕ್ತಕ್ಕೆ ಕೊಡುತ್ತಿದ್ದೇವೆ. ಲೋಕಾಯುಕ್ತ ಮುಚ್ಚಿ, ಭ್ರಷ್ಟಾಚಾರದ ಜತೆ ಸೇರಿ ಸರ್ಕಾರ ನಡೆಸಿದವರು ಇವರೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಯಾರ ಭ್ರಷ್ಟಾಚಾರ ನಿಲ್ಲಿಸಿ ಅಂತ ಇವರು ಪ್ರತಿಭಟನೆ ಮಾಡುತ್ತಿದಾರೆ? ಭ್ರಷ್ಟಾಚಾರದ ಗಂಗೋತ್ರಿಯೇ ಕಾಂಗ್ರೆಸ್ ಬಿಬಿಎಂಪಿಯಲ್ಲಿ, 40%-60% ಪ್ರೀಮಿಯಂ ಕೊಟ್ಟಿರುವ ದಾಖಲೆ ಸಿದ್ದರಾಮಯ್ಯ ಅವರ ಸರ್ಕಾರದ್ದು. ಬೆಂಗಳೂರಿನ 800 ಕೋಟಿಯ 40%-60% ಪ್ರೀಮಿಯಂ ಕೊಟ್ಟ ಶೂರರು. ಇಷ್ಟು ಓಪನ್ ಆಗಿ ಪ್ರೀಮಿಯಂ ಕೊಟ್ಟು ಇವತ್ತು ಭ್ರಷ್ಟಾಚಾರ ಬಗ್ಗೆ ಮಾತಾಡುತ್ತಿದಾರೆ. ಇದು ಕಾಂಗ್ರೆಸ್​ನವರ ಸೋಗಲಾಡಿತನ. ತಾವು ಭ್ರಷ್ಟಾಚಾರ ಮಾಡಿ ಅದನ್ನು ಮುಚ್ಚಿಕೊಳ್ಳುವ ಸಲುವಾಗಿ ಪ್ರತಿಭಟನೆ ಮಾಡುತ್ತಿದಾರೆ. ನಮ್ಮ ವಿರುದ್ಧ ಆರೋಪಕ್ಕೆ ದಾಖಲೆ ಇದ್ದರೆ ಲೋಕಾಯುಕ್ತಕ್ಕೆ ಕೊಡಲಿ, ತನಿಖೆ ಆಗಲಿ ಎಂದು ಸವಾಲೆಸೆದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seventeen =
Remember me
