ಬೆಂಗಳೂರು:ಗಾಂಧೀಜಿಯವ ಸ್ಮರಣೆ ಮಾಡಿಕೊಂಡು ಮೌನಚಾರಣೆ ಮಾಡಿದ್ದೇವೆ. ಗಾಂಧೀಜಿಯವರ ಜೀವನವೇ ಒಂದು ಸಂದೇಶದಂತಿದ್ದು, ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನೇ ಪ್ರತಿಪಾದಿಸಿದವರು. ಅಹಿಂಸೆಯಲ್ಲಿ ದೇಶಕ್ಕೆ ಸ್ವಾತಂತ್ರ ಕೊಡಿಸಿದವರು.ಗಾಂಧೀಜಿ ತತ್ವ ಆದರ್ಶ ಮೇಲೆ ಸಾರ್ವಜನಿಕ ಜೀವನದಲ್ಲಿ ನೈತಿಕತೆ ಬರಬೇಕು. ಸ್ವಾತಂತ್ರ್ಯಕ್ಕಾಗಿ ಸುಭಾಶ್ ಚಂದ್ರ ಬೋಸ್ ಸೇರಿದಂತೆ ಅನೇಕ ಮಹನೀಯರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದ ಸ್ಮರಣಾರ್ಥವಾಗಿ ಸಿಎಂ ಬೊಮ್ಮಾಯಿ ವಿಧಾನಸೌಧದ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಸಚಿವ ಡಾ.ಕೆ ಸುಧಾಕರ್, ಸಿ.ಟಿ ರವಿ, ಸುರೇಶ್ ಕುಮಾರ್, ಕುಡುಚಿ ಶಾಸಕ ಪಿ. ರಾಜೀವ್, ಸಿದ್ದು ಸವದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದೇ ವೇಳೆ ಬಜೆಟ್ ವಿಚಾರವಾಗಿ ಮಾತನಾಡುತ್ತಾ, ಈ ಜನರಪರವಾದ ಬಜೆಟ್ ಆಗುತ್ತದೆ. ರೈತರು, ದೀನದಲಿತರು ಹಾಗೂ ದುಡಿಯುವ ವರ್ಗಕ್ಕೆ ಆರ್ಥಿಕವಾಗಿ ಹೆಚ್ಚು ಗಮನ ನೀಡಲಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಚಿವ ಸಂಪುಟ ವಿಸ್ತರಣೆ ವಿಚಾರ ಎದುರಾಗುತ್ತಿದ್ದಂತೆ, ಸಂಪುಟ ವಿಸ್ತರಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ನಡೆಯುತ್ತಲೇ ಇದೆ. ದೆಹಲಿಗೆ ಹೋಗಿ ಏನೂ ಹೇಳಬೇಕೋ ಅದನ್ನು ಹೇಳಿದ್ದೇವೆ. ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 1 =
Remember me
