ಹುಬ್ಬಳ್ಳಿ:ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಬಂದ ಮೇಲೆ ರಾಜ್ಯ ಸಂಪೂರ್ಣ ಬಿಜೆಪಿಮಯ ಆಗುವುದರಲ್ಲಿ ಸಂಶಯವಿಲ್ಲ. ಜನರ ಉತ್ಸಾಹ ನೋಡಿದರೆ ರಾಜ್ಯದ ತುಂಬಾ ಬಿಜೆಪಿ ಅಲೆ ಇರುವುದಕ್ಕೆ ಸಾಕ್ಷಿಯಾಗಿದೆ. ರಾಜ್ಯಕ್ಕೆ ಬಂದಿರುವ ಅಮಿತ್ ಷಾ ಚುನಾವಣೆಯ ದೃಷ್ಟಿಯಿಂದ ಕೆಲವು ಮಹತ್ವದ ಸೂಚನೆಗಳನ್ನು ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇದನ್ನೂ ಓದಿ:ನಾಮಪತ್ರ ಹಿಂಪಡೆದ ಶಿವಶಂಕರ ಶಿವಾಚಾರ್ಯ ಸ್ವಾಮೀಜಿ; ಬಿಜೆಪಿ ಅಭ್ಯರ್ಥಿ ನಿರಾಳ!
ಲಿಂಗಾಯತ ಮುಖ್ಯಮಂತ್ರಿಗಳೆಲ್ಲ ಭ್ರಷ್ಟರು ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರು ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರಿಗೆ ಚಾಲೆಂಜ್ ಮಾಡಿದ್ದೇನೆ, ಆರೋಪ ಮಾಡಿ, ಅದನ್ನು ಸಾಬೀತು ಮಾಡಲಿ. ನನ್ನ ಮೇಲೆ ಸುಮ್ಮನೆ ಆರೋಪ ಮಾಡುತ್ತಿರುವುದು ಜನರಿಗೆ ಗೊತ್ತಿದೆ ಎಂದು ಸಿಎಂ ಬೊಮ್ಮಾಯಿ ಕಿಡಿಕಾರಿದರು.
ಸಿದ್ದರಾಮಯ್ಯ ಅವರ ಮೇಲೆ ಸಾಕಷ್ಟು ಪ್ರಕರಣಗಳಿದ್ದು, ಲೋಖಾಯುಕ್ತ ತನಿಖೆ ನಡೆಸುತ್ತಿದೆ. ನನ್ನ ಮೇಲೆ‌ ಮಾಡಿರುವ ಆರೋಪದ ಕುರಿತು ಸಿದ್ಧರಾಮಯ್ಯ ಸಾಬೀತು ಮಾಡಲಿ. ಕಾಂಗ್ರೆಸ್ ಅಂದರೆ ಭ್ರಷ್ಟಾಚಾರ, ಭ್ರಷ್ಟಾಚಾರ ಅಂದರೆ ಕಾಂಗ್ರೆಸ್. ಭ್ರಷ್ಟಾಚಾರದ ಅವಿಭಾಜ್ಯ ಅಂಗ ಕಾಂಗ್ರೆಸ್. ಹೀಗಿರುವಾಗ ಸಿದ್ದರಾಮಯ್ಯ ಅವರ ಆರೋಪ ಹಾಸ್ಯಾಸ್ಪದವಾಗಿ ಕಾಣಿಸುತ್ತದೆ. ಅವರ ಎಷ್ಟು ಜನ ನಾಯಕರು ಜೈಲಿಗೆ ಹೋಗಿದ್ದಾರೆ, ಬೇಲ್​​ನಲ್ಲಿ ಬಂದಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಕಿಡಿಕಾರಿದರು.
ಇದನ್ನೂ ಓದಿ:ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
