ಬೆಂಗಳೂರು:ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಬಗ್ಗೆ ಗೆದ್ದವರು ಹಾಗೂ ಪರಾಜಿತರು, ನಂತರ ಕ್ಷೇತ್ರಾವಾರು ಹೀಗೆ ಎರಡು ಹಂತದಲ್ಲಿ ಆತ್ಮಾವಲೋಕನ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ, ಪದಾಧಿಕಾರಿಗಳು ಹಾಗೂ ಶಾಸಕರ ಜತೆಗೆ ಭಾನುವಾರ ಸಭೆ ನಡೆಸಿದ ನಂತರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.
ಇದನ್ನೂ ಓದಿ:ಸ್ವಂತ ಹೆಂಡತಿಯ ಬಾತ್​ರೂಮ್ ಹಾಗೂ ಬೆಡ್​ರೂಮ್​ಗೆ ಸಿಸಿಟಿವಿ ಅಳವಡಿಸಿದ ಭೂಪ!
ನಮ್ಮಲ್ಲಿ ಪಕ್ಷ ಸಂಘಟನೆಗೆ ವಿಶ್ರಾಂತಿ ಇರುವುದಿಲ್ಲ. ಚುನಾವಣೆ ನಂತರವೂ ನಮ್ಮ ಕಾರ್ಯಕ್ರಮ ನಡೆಯುತ್ತದೆ. ನಮ್ಮ ಕಾರ್ಯಕ್ರಮ ಜನರ ಬಳಿ ತೆಗೆದುಕೊಂಡು ಹೋಗುತ್ತೇವೆ. ಸೋಲು ಬಹಳ ವಿನಯದಿಂದ ಸ್ವೀಕಾರ ಮಾಡಿದ್ದೇವೆ. ಹಾಗೆಯೇ ಸವಾಲಾಗಿ ಸ್ವೀಕರಿಸಿ ಮುಂದಡಿಯಿಡುತ್ತೇವೆ ಎಂದರು.
ಸೋಲಿಗೆ ಪರಾಮರ್ಶೆ ಸಮಾಲೋಚನೆ ಮಾಡಲು ನಿರ್ಧರಿಸಿದ್ದು, ಪಕ್ಷದ ರಾಜ್ಯಾಧ್ಯಕ್ಷರ ರಾಜೀನಾಮೆ ಬಗ್ಗೆ ಚರ್ಚೆ ನಮ್ಮ ಮುಂದಿಲ್ಲ. ವಿಪಕ್ಷ ನಾಯಕನ ಸ್ಥಾನದ ಬಗ್ಗೆ ಇದುವರೆಗೂ ಚರ್ಚೆಯಾಗಿಲ್ಲ. ಫಲಿತಾಂಶದ ಬಗ್ಗೆ ಪಕ್ಷದ ವರಿಷ್ಠರು ಕರೆ ಮಾಡಿ ಧೈರ್ಯ ಹೇಳಿದ್ದಾರೆ ಎಂದು ಬೊಮ್ಮಾಯಿ‌ ತಿಳಿಸಿದರು.
ಎರಡಕ್ಕಿಂತ ಹೆಚ್ಚು ಮಕ್ಕಳಿರುವ ಸರ್ಕಾರಿ ನೌಕರರಿಗೆ ಅಧಿಕ ಸಂಬಳ!

ತಾಳ್ಮೆ, ಸಹಬಾಳ್ವೆಯ ಸಂಕೇತವಾಗಿದ್ದ ಜಗತ್ತಿನ ಅತ್ಯಂತ ಮುದಿ ಸಿಂಹ ಹತ್ಯೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
