ಯಲ್ಲಾಪುರ:ಉತ್ತರ ಕನ್ನಡದಲ್ಲಿ ಈ ವರ್ಷ ಮಳೆಯ ಆರ್ಭಟ ಹೆಚ್ಚಾಗಿದ್ದು, ಸಾಕಷ್ಟು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಆ ಹಿನ್ನೆಲೆಯಲ್ಲಿ ಗುರುವಾರದಂದು ಜಿಲ್ಲೆಗೆ ಭೇಟಿ ನೀಡಿದ ನೂತನ ಸಿಎಂ ಬಸವರಾಜ ಬೊಮ್ಮಾಯಿ, ಪ್ರವಾಹ ಪೀಡಿತ ಸ್ಥಳಗಳ ಪರಿಶೀಲನೆ ನಡೆಸಿದರು.
ಅತಿವೃಷ್ಟಿಯ ನಿರ್ವಹಣೆಗೆ ಸರ್ಕಾರದಲ್ಲಿ ಎನ್.ಡಿ.ಆರ್.ಎಫ್ ನ ನಿಧಿ ಸಾಕಷ್ಟಿದೆ. ಸದ್ಯ ಪ್ರಕೃತಿ ವಿಕೋಪ ನಿರ್ವಹಣೆಯ ಜತೆಗೆ ನೆರೆ ಸಂತ್ರಸ್ತರಿಗೆ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಬಗೆಗೆ ವಿಶೇಷ ಗಮನ ಹರಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಯಲ್ಲಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಬಳಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಹಲವೆಡೆ ಊರುಗಳೇ ನೆರೆಯ ಹೊಡೆತಕ್ಕೆ ಸಿಲುಕಿವೆ. ಗುಡ್ಡಗಳು ಕುಸಿದು ಮನೆಗಳೇ ನೆಲಸಮವಾಗಿವೆ. ದಾರಿಗಳು ಹಾಳಾಗಿದ್ದು, ನಲುಗಿ ಹೋದ ಸಂತ್ರಸ್ತರಿಗೆ ಮತ್ತೆ ಬದುಕು ಕಟ್ಟಿಕೊಡುವ ಕಾರ್ಯ ಆಗಬೇಕಾಗಿದೆ” ಎಂದು ಹೇಳಿದ್ದಾರೆ.
ಪ್ರವಾಹ ನಿರ್ವಹಣೆಗೆ ವಿಶೇಷ ಅನುದಾನಕ್ಕಾಗಿ ಕೇಂದ್ರದ ಬಳಿ ಆಗ್ರಹಿಸುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಎನ್.ಡಿ.ಆರ್.ಎಫ್ ನಿಧಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗುವುದು. ಪ್ರವಾಹದಿಂದ ಉಂಟಾದ ಹಾನಿಯ ಸಮೀಕ್ಷೆ ನಡೆಸಿ, ನಂತರ ಹೆಚ್ಚಿನ ಅನುದಾನ ಕೇಳಲಾಗುವುದು ಎಂದರು. ಶಾಸಕ ಶಿವರಾಮ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ವಾ.ಕ.ರ.ಸಾ ನಿಗಮದ ಅಧ್ಯಕ್ಷ ವಿ.ಎಸ್.ಪಾಟೀಲ ಇತರರಿದ್ದರು.
ಓಲಾ ಎಲೆಕ್ಟ್ರಿಕ್ ಸ್ಕೂಟರ್ ತಗೊಂಡ್ರೆ ಅದರ ಸರ್ವಿಸ್ ಮಾಡಿಸೋದೆಲ್ಲಿ? ನಿಮ್ಮೆಲ್ಲ ಪ್ರಶ್ನೆಗೆ ಇಲ್ಲಿದೆ ಉತ್ತರ

ನಾವು ಸನ್ಯಾಸಿಗಳಲ್ಲ… ಬೊಮ್ಮಾಯಿ ಆಯ್ಕೆ ಶ್ರೀಕೃಷ್ಣನ ತಂತ್ರಗಾರಿಕೆ: ಈಶ್ವರಪ್ಪ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 20 =
Remember me
