ಬಾಳೆಹೊನ್ನೂರು:ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಶ್ರೀ ಜಗದ್ಗುರು ರೇಣುಕಾಚಾರ್ಯ ಪ್ರಶಸ್ತಿಗೆ ಬೆಳಗಾವಿ ಜಿಲ್ಲೆ ಅಥಣಿಯ ಬಸವರಾಜ ಶಂಕರ ಉಮರಾಣಿ ಭಾಜನರಾಗಿದ್ದಾರೆ.
ಶ್ರೀ ರಂಭಾಪುರಿ ಪೀಠದಲ್ಲಿ ಮಾರ್ಚ್ 7 ರಂದು ಜರುಗಲಿರುವ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ಶ್ರೀ ವೀರಭದ್ರಸ್ವಾಮಿ ಮಹಾರಥೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಯೊಂದಿಗೆ ಒಂದು ಲಕ್ಷ ನಗದು, ಸ್ಮರಣಿಕೆ, ಗೌರವ ಪತ್ರ ನೀಡಲಾಗುವುದು ಎಂದು ಬಾಳೇಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳು ತಿಳಿಸಿದ್ದಾರೆ.
ಅಥಣಿ ಬಸವರಾಜ ಉಮರಾಣಿ ಗಣಿತದಲ್ಲಿ ವಿಶೇಷ ಜ್ಞಾನ ಹೊಂದಿದ್ದಾರೆ. ಅಪೂರ್ವ ಸಾಧನೆ ಮಾಡಿ ರಾಷ್ಟ್ರ ಪ್ರಶಸ್ತಿಗೂ ಭಾಜನರಾಗಿದ್ದಾರೆ. ಅವರು ಹುಟ್ಟು ಕುರುಡರಾದರೂ ಸಾಧನೆಯಿಂದ ಮುಂದಿರುವುದು ಭಗವಂತನ ಕೃಪೆಯಿಂದ. ಅಥಣಿಯ ಶಿವಯೋಗಿ ಮುರುಘೕಂದ್ರ ಮಹಾವಿದ್ಯಾಲಯ ದಲ್ಲಿ ವಿದ್ಯಾಭ್ಯಾಸ ಮಾಡಿ ಕೆಲವು ಆಶ್ಚರ್ಯಕರ ಗುಣಗಳನ್ನು ಹೊಂದಿದ್ದಾರೆ. ಅವರ ಬುದ್ಧಿಶಕ್ತಿ ಮತ್ತು ಸ್ಮರಣಶಕ್ತಿ ಅಪಾರ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
