ಬೆಂಗಳೂರು:ವಲಸಿಗರು ಹಾಗೂ ಕಾರ್ಮಿಕರನ್ನು ಬಾಡಿಗೆ ಮನೆಗಳಿಂದ ಹೊರ ಹಾಕಿದರೆ ವಿಪತ್ತು ನಿರ್ವಹಣೆ ಕಾಯ್ದೆಯಡಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಕರೊನಾ ವೈರಸ್ ಸಾಮೂಹಿಕವಾಗಿ ಹರಡುವುದನ್ನು ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅವಶ್ಯಕವಾಗಿದೆ. ಹೀಗಾಗಿ ಆಕ್‌ಡೌನ್ ಮಾಡಲಾಗಿದೆ. ಈ ವೇಲೆ ನಗರದಲ್ಲಿರುವ ವಲಸಿಗರನ್ನು ಕಾನೂನುಬಾಹಿರವಾಗಿ ಹೊರಹಾಕದಂತೆ ಕ್ರಮ ತೆಗೆದುಕೊಳ್ಳಲು ನಿರ್ದೇಶನವಿದೆ. ಹೀಗಾಗಿ ಯಾರಾದರೂ ವಲಸಿಗರನ್ನು ಮನೆಯಿಂದ ಹೊರ ಹಾಕಿದರೆ, ವಿಪತ್ತು ನಿರ್ವಹಣಾ ಕಾಯ್ದೆ-2005ರ ಪ್ರಕಾರ ಕಠಿಣ ಕಾನೂನು ಕ್ರಮ ಜರುಸಿಸಲಾಗುವುದು. ಎಂದು ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಪರಿಹಾರ ಕೇಂದ್ರಗಳ ಗುರುತು: ಕೆಲವು ಕೂಲಿ ಕಾರ್ಮಿಕರು, ನಿರ್ಗತಿಕರು, ಲಾಕ್‌ಡೌನ್‌ನಿಂದ ಪ್ರಯಾಣ ಮಾಡಲು ಸಾದ್ಯವಾಗದವರಿಗೆ ಬೆಂಗಳೂರು ನಗರ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯ ಸಮುದಾಯ ಭವನ, ಕಲ್ಯಾಣ ಮಂಟಪ, ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳನ್ನು ಪರಿಹಾರ ಕೇಂದ್ರಗಳನ್ನಾಗಿ ಪರಿವರ್ತಿಸಿ ಆದೇಶ ಹೊರಡಿಸಲಾಗಿದೆ. ಒಟ್ಟು 8,332 ಜನರಿಗೆ ವಸತಿ ಕಲ್ಪಿಸಲು ಸ್ಥಳಾವಕಾಶ ಒದಗಿಸಿದೆ.
ನಿಖಿಲ್-ರೇವತಿ ಮದುವೆಗಾಗಿ ಕೇತಿಗಾನಹಳ್ಳಿಯ ತೋಟದ ಮನೆಯಲ್ಲಿ ನಡೆದಿದೆ ಭರದ ಸಿದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + four =
Remember me
