ಬೆಂಗಳೂರು:ಭಾರೀ ಮಳೆ ಸುರಿದಾಗ ನಗರದ ಕೆಲವು ಅಂಡರ್​ಪಾಸ್​ಗಳು ಮೃತ್ಯುಕೂಪಗಳಾಗುತ್ತಿವೆ. ಭಾನುವಾರ (ಮೇ 21) ಕೆ.ಆರ್​.ವೃತ್ತದ ಅಂಡರ್​ಪಾಸ್​ನ ನೀರಿನಲ್ಲಿ ಕಾರು ಸಿಲುಕಿಕೊಂಡು ಅದರಲ್ಲಿದ್ದ ಮಹಿಳಾ ಟೆಕ್ಕಿ ಭಾನುರೇಖಾ ಮೃತಪಟ್ಟಿದ್ದರು. ಅದೃಷ್ಟವಶಾತ್​ ಇನ್ನುಳಿದ ಅವರ ಕುಟುಂಬದ ಸದಸ್ಯರ ಪಾರಾಗಿದ್ದರು. ಇದೀಗ ಈ ಅವಘಡದಿಂದ ಬಿಬಿಎಂಪಿ ಎಚ್ಚೆತ್ತುಕೊಂಡಿರುವಂತೆ ಕಾಣುತ್ತಿದೆ.
ಬೆಂಗಳೂರಿನ ಎಲ್ಲ ಅಂಡರ್​ಪಾಸ್ ಗಳ ಸದ್ಯದ ಪರಿಸ್ಥಿತಿಯ ಬಗ್ಗೆ ಬಿಬಿಎಂಪಿ ಸಂಪೂರ್ಣ ಮಾಹಿತಿ ಕಲೆಹಾಕಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಅಂಡರ್​ಪಾಸ್​ಗಳಿವೆ. ಅದರಲ್ಲಿ 18 ರೈಲ್ವೇ ಬ್ರಿಡ್ಜ್ ಅಂಡರ್​ಪಾಸ್ ಹಾಗೂ 35 ರಸ್ತೆ ಅಂಡರ್​ಪಾಸ್​ಗಳಾಗಿವೆ. ಇದೀಗ ಎಲ್ಲ ಅಂಡರ್​ಪಾಸ್​ಗಳ ದುರಸ್ತಿ ಕಾರ್ಯಕ್ಕೆ ಬಿಬಿಎಂಪಿ ಮುಂದಾಗಿದೆ. ಮಳೆ ನೀರು ಸರಾಗವಾಗಿ ಹರಿಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ.
ಇದನ್ನೂ ಓದಿ:ನೋಟು ಬದಲಾವಣೆ ಚಿಂತೆ ಬೇಡ; ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅಭಯ | ಇಂದಿನಿಂದ ವಿನಿಮಯ
ಅಂಡರ್‌ಪಾಸ್‌ಗಳಲ್ಲಿ ಬಿಬಿಎಂಪಿ ತೆಗೆದುಕೊಳ್ಳಲು ಉದ್ದೇಶಿಸಲಾಗಿರುವ ಪ್ರಮುಖ ಕ್ರಮಗಳು ಈ ಕೆಳಕಂಡಂತಿವೆ1 . ರಸ್ತೆಯ ಅಕ್ಕ ಪಕ್ಕದಲ್ಲಿ ಬೀಳುವ ಎಲ್ಲಾ ಮಳೆ ನೀರು ಕೆಳಸೇತುವೆಗೆ ಹೋಗದಂತೆ ಕೆಳಸೇತುವೆಯ ಏರುವ ಮತ್ತು ಇಳಿಯುವ ರಾಂಪ್ ಮುಂಭಾಗದಲ್ಲಿ ಪ್ರತ್ಯೇಕ ಚರಂಡಿಯನ್ನು ನಿರ್ಮಿಸಿ ನೇರವಾಗಿ ರಾಜಕಾಲುವೆಗೆ ಸಂಪರ್ಕ ಕಲ್ಪಿಸುವುದು.2. ರಸ್ತೆಯ ಮೇಲಿನ ಮಳೆ ನೀರು ಕೆಳಸೇತುವೆಗೆ ಹೋಗದಂತೆ ರಾಂಪ್ ಮುಂಭಾಗದಲ್ಲಿ ಪ್ರತ್ಯೇಕವಾಗಿ ಚರಂಡಿಯನ್ನು ನಿರ್ಮಿಸುವ ಜೊತೆಗೆ ಒಂದು ರಸ್ತೆ ಉಬ್ಬರವನ್ನು ಸಹ ನಿರ್ಮಿಸುವುದು.3. ಕೆಳಸೇತುವೆಯ ಕೆಳಭಾಗದಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಗಳನ್ನು ಅಳವಡಿಸುವುದು.4. Vertical Clearance Gauge Beam ಅನ್ನು ಆಳವಡಿಸಿ ಅತೀ ಪ್ರವಾಹ ಉಂಟಾದ ತುರ್ತು ಸಂಧರ್ಭಗಳಲ್ಲಿ ಒಂದು ಬೂಮ್​ ಬ್ಯಾರಿಯರ್​ ಅನ್ನು ಸಹ ನಿರ್ಮಿಸುವುದು ಮತ್ತು ಅಗತ್ಯ ಸಂದರ್ಭದಲ್ಲಿ ಬಳಸುವುದು.5. ಕೆಳಸೇತುವೆಯ ವಾಹನ ನಿರ್ಬಂಧ ಪಡಿಸುವ ಕ್ರಮವನ್ನು ಸಂಚಾರ ಪೋಲಿಸ್ ಇಲಾಖೆಯ ಸಹಯೋಗದಿಂದ ನಿರ್ವಹಣೆ ಮಾಡುವುದು.
ಇದನ್ನೂ ಓದಿ:ಸಕಾಲಕ್ಕೆ ಸಿಗದ ಆ್ಯಂಬುಲೆನ್ಸ್​; ಆಟೋದಲ್ಲಿ ಪ್ರಯಾಣಿಸಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಗರ್ಭಿಣಿ
15 ದಿನಗಳಲ್ಲಿ ಈ ಎಲ್ಲ ಕ್ರಮಗಳನ್ನು ಪೂರ್ಣಗೊಳಿಸಲು ಬಿಬಿಎಂಪಿ ಆದೇಶಿಸಿದೆ.(ದಿಗ್ವಿಜಯ ನ್ಯೂಸ್​)
RRR​ ಚಿತ್ರದ ಖಳನಟ ರೇ ಸ್ಟೀವನ್ಸನ್ ಇನ್ನಿಲ್ಲ: ಮೇ 25ರಂದು 59ನೇ ಹುಟ್ಟುಹಬ್ಬಕ್ಕೂ ಮುನ್ನವೇ ಕಣ್ಮರೆ

ದೇವರಿಗೆ ಚಿನ್ನದ ಸೀರೆ ಉಡುಗೊರೆ ಕೊಟ್ಟ ಭಕ್ತರು: ಬೆಲೆ ಕೇಳಿದ್ರೆ ಬೆರಗಾಗೋದು ಖಚಿತ!

ನೋಟು ಬದಲಾವಣೆ ಚಿಂತೆ ಬೇಡ; ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅಭಯ | ಇಂದಿನಿಂದ ವಿನಿಮಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + fifteen =
Remember me
