ಬೆಂಗಳೂರು:ಮತದಾರರ ಪಟ್ಟಿ ಪರಿಷ್ಕರಣೆಗೆ ಎರಡು ಖಾಸಗಿ ಸಂಸ್ಥೆಗಳಿಗೆ ಅನುಮತಿ ನೀಡುವ ಮೂಲಕ ಗೌಪ್ಯ ಮಾಹಿತಿಗೆ ಕನ್ನ ಹಾಕಲಾಗಿದ್ದು ಈ ಬಗ್ಗೆ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಯಾಗಬೇಕೆಂದು ಕಾಂಗ್ರೆಸ್​ ಒತ್ತಾಯ ಮಾಡಿದೆ. ಪ್ರಕರಣದ ತನಿಖೆ ನಡೆಸುವಂತೆ ಬಿಬಿಎಂಪಿ ಅಯುಕ್ತರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಬೆಂಗಳೂರು ನಗರದ ಉಸ್ತುವಾರಿ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಲೇ ರಾಜೀನಾಮೆ ನೀಡಬೇಕು ಹಾಗೂ ಎ್​ಐಆರ್​ ದಾಖಲಿಸಿ ಆರೋಪಿಗಳನ್ನು ಬಂಧಿಸಬೇಕು. ಜತೆಗೆ, ಈ ಅಕ್ರಮಕ್ಕೆ ಕಾರಣವಾದವರನ್ನು ಸಹ ಬಂಧಿಸಬೇಕೆಂದು ಕಾಂಗ್ರೆಸ್​ ಆಗ್ರಹಿಸಿದೆ.
ಬೆಂಗಳೂರಿನ ಕ್ವೀನ್ಸ್​ ರಸ್ತೆಯಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲ, ಪಿಸಿಸಿ ಅಧ್ಯ ಡಿ.ಕೆ. ಶಿವಕುಮಾರ್​, ವಿಧಾನಸಭೆ ವಿರೋಧ ಪದ ನಾಯಕ ಸಿದ್ದರಾಮಯ್ಯ ಹಾಗೂ ಇತರರು, ಮತದಾರರ ಮಾಹಿತಿ ಕಳವಿನ ಆರೋಪ ಮಾಡಿದರು. ಚಿಲುಮೆ ಎಜುಕೇಶನ್​ ಇನ್​ಸ್ಟಿಟ್ಯೂಟ್​ ಎಂಬ ಖಾಸಗಿ ಸಂಸ್ಥೆ ಮತದಾರರ ಜಾಗೃತಿ ಹಾಗೂ ಮತದಾರರ ಪಟ್ಟಿಯನ್ನು ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದು 2022ರ ಆ.19ಕ್ಕೆ ಸರ್ಕಾರಕ್ಕೆ ಅರ್ಜಿ ಹಾಕಿತ್ತು.
ಕಾಂಗ್ರೆಸ್​ನವರು ತಮ್ಮವಿಚಾರಗಳಲ್ಲಿ ದಿವಾಳಿಯಾಗಿದ್ದಾರೆ. ಚುನಾವಣಾ ಆಯೋಗ ಸ್ವೀಪ್​ ಕಾರ್ಯಕ್ರಮ ಕೈಗೊಳ್ಳಲು ಬಿಬಿಎಂಪಿ ಹಾಗೂ ಸ್ಥಳಿಯ ಸಂಸ್ಥೆಗಳಿಗೆ ವಹಿಸಿರುತ್ತಾರೆ. ಅವರು ಸಮೀಾ ಕೆಲಸವನ್ನು ಎನ್​ಜಿಓಗಳಿಗೆ ನೀಡಿರುತ್ತಾರೆ. ಇದೇನು ಮೊದಲ ಬಾರಿ ನೀಡಿರುವುದಲ್ಲ. 2018ರಲ್ಲಿ ಇದ್ದ ಸರ್ಕಾರದ ಕಾಲದಲ್ಲಿಯೂ ನೀಡಿದ್ದಾರೆ. ಕಾಂಗ್ರೆಸ್​ನವರು ನನ್ನ ರಾಜೀನಾಮೆಗೆ ಒತ್ತಾಯಿಸುವುದು ಹಾಸ್ಯಾಸ್ಪದ. ಸಿದ್ದರಾಮಯ್ಯ ಸರ್ಕಾರ 200 ಕೋಟಿ ರೂ. ಖರ್ಚು ಮಾಡಿ ಜಾತಿ ಸಮೀೆ ಮಾಡಿ ಗೌಪ್ಯವಾಗಿಟ್ಟಿದ್ದು ಏಕೆ?
| ಬಸವರಾಜ ಬೊಮ್ಮಾಯಿ ಸಿಎಂ
ಆಪರೇಷನ್​ ಕಮಲದ ಮುಂದುವರಿದ ಭಾಗವಾದ “ಆಪರೇಷನ್​ ಮತದಾರರ ಪಟ್ಟಿ ಪರಿಷ್ಕರಣೆ’ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಗಂಭೀರ ಅಪರಾಧ ಪ್ರಕರಣ. ಈ ಬಗ್ಗೆ ರಾಜ್ಯ ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳ ಉಸ್ತುವಾರಿಯಲ್ಲಿಯೇ ತನಿಖೆ ಮಾಡಬೇಕು. ಏಕೆಂದರೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿ ಮಾತ್ರವಲ್ಲ ಚುನಾವಣಾ ಆಯೋಗ ಕೂಡ ಈ ಹೀನ ಕೃತ್ಯದಲ್ಲಿ ಭಾಗಿಯಾಗಿರುವ ಗುಮಾನಿಗಳಿವೆ.
| ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕ
https://www.vijayavani.net/mandya-annayya-life-is-tragic-end-in-banglore/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
