ಬೆಂಗಳೂರು:ಬೆಂಗಳೂರಿಗೆ ಹೊಸ ರೂಪ ನೀಡುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸಿದ್ದಾರೆ. ಇದಕ್ಕೆ ಪೂರಕವಾಗಿ ಸದ್ಯದಲ್ಲೇ ಪಾಲಿಕೆ ಬಜೆಟ್ ಮಂಡನೆಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಇದನ್ನೂ ಓದಿ:ಮಾಜಿ ಪ್ರಧಾನಿ ದೇವೇಗೌಡ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಬಿಡುಗಡೆ
ಬೆಂಗಳೂರು ವಿವಿಯ ಜ್ಞಾನಭಾರತಿ ಕ್ಯಾಂಪಸ್​ನಲ್ಲಿ ಭಾನುವಾರ ನಡೆದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಬೆಂಗಳೂರಿನ ಹೊಸ ಯೋಜನೆಗಳಿಗೆ ಸಂಪನ್ಮೂಲ ಕ್ರೋಡೀಕರಿಸಲು ನಮ್ಮದೇ ಆದ ಯೋಜನೆಗಳಿವೆ. ಬೆಂಗಳೂರಿನಲ್ಲಿ ಇನ್ನು ಮುಂದೆ ಮೆಟ್ರೋ ಹೋಗುವ ಮಾರ್ಗದಲ್ಲಿ ಫ್ಲೈಓವರ್ ನಿರ್ಮಾಣಕ್ಕೂ ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದರು.
ಯಶವಂತಪುರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ಮಾಡಲು ಫೀಸಿಬಲ್ ವರದಿ ಸಿದ್ಧಪಡಿಸಲಾಗುತ್ತಿದೆ. ಸುಮ್ಮನಹಳ್ಳಿ, ಗೊರಗೊಂಟೆ ಪಾಳ್ಯ ಸೇರಿದಂತೆ ಇತರ ಕಡೆಗಳಲ್ಲಿ ಈ ಯೋಜನೆ ಮಾಡಲು ಸಿದ್ಧತೆ ಮಾಡುತ್ತಿದ್ದೇವೆ ಎಂದು ಹೇಳಿದರು.
20 ಸಾವಿರ ಅಹವಾಲುಗಳನ್ನು ದಾಖಲು:ಇದುವರೆಗೂ 12 ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ಮಾಡಿದ್ದು, 20 ಸಾವಿರ ಅಹವಾಲುಗಳನ್ನು ದಾಖಲಾಗಿವೆ. ಮುಖ್ಯಮಂತ್ರಿಗಳು ಕೂಡ ಎರಡು ಬಾರಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅವರ ಕಾರ್ಯಕ್ರಮದಲ್ಲೂ ಸಾವಿರಾರು ಮಂದಿ ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ. ಈ ಅರ್ಜಿಗಳ ವಿಲೇವಾರಿಗೆ ಪ್ರತ್ಯೇಕವಾಗಿ ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ.
ಹಂತ ಹಂತವಾಗಿ ಬಗೆಹರಿಸುತ್ತೇವೆ:ನೀವು ನಿಮ್ಮ ಸಮಸ್ಯೆ ತೆಗೆದುಕೊಂಡು ನಮ್ಮ ಮನೆ ಬಾಗಿಲಿಗೆ ಸುತ್ತ ಬಾರದು ಎಂದು ನಾನೇ ನಿಮ್ಮ ಮನೆ ಬಾಗಿಲಿಗೆ ಬಂದು ನಿಮ್ಮ ಸಮಸ್ಯೆ ಆಲಿಸುತ್ತಿದ್ದೇನೆ. ನಮ್ಮ ಸರ್ಕಾರ ಸದಾ ನಿಮ್ಮ ಜತೆ ಇರಲಿದೆ. ನಿಮ್ಮ ಎಲ್ಲಾ ಸಮಸ್ಯೆ ಒಂದೇ ದಿನದಲ್ಲಿ ಬಾಗೆ ಹರಿಸಲು ಆಗುವುದಿಲ್ಲ. ಆದರೆ ಹಂತ ಹಂತವಾಗಿ ಬಗೆಹರಿಸುತ್ತೇವೆ.ನಮ್ಮ ಎಲ್ಲಾ ಗ್ಯಾರಂಟಿ ಯೋಜನೆಗಳು ಶೆ.95ರಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿವೆ. 5-6% ಜನರಿಗೆ ಮಾತ್ರ ತಾಂತ್ರಿಕ ಸಮಸ್ಯೆಗಳಿಂದ ಹಣ ತಲುಪಿಲ್ಲ. ಅವರ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಹೇಳಿದರು.
ಶಾಸಕರಾದ ಸೋಮಶೇಖರ್ ಅವರು ಬಿಡಿಎ ಸಮಸ್ಯೆ, 110 ಹಳ್ಳಿಗಳ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಈ ಎರಡು ಕ್ಷೇತ್ರ ನಮಗೆ ಎರಡು ಕಣ್ಣುಗಳಂತೆ. ಶಾಸಕ ಮುನಿರತ್ನ ಅವರು ಹೇಳಿರುವಂತೆ ಕೊಳವೆ ಬಾವಿಯನ್ನು ಇನ್ನೂ 500 ಅಡಿ ಕೊರೆಸುವ ಬಗ್ಗೆ ಬಿಡಬ್ಲ್ಯೂಎಸ್ಎಸ್ ಬಿ ಅಧಿಕಾರಿಗಳ ಜೊತೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದರು.
ಇನ್ನು ಬೆಂಗಳೂರು ನಗರಕ್ಕೆ 6 ಟಿಎಂಸಿ ನೀರು ಬಳಕೆಗೆ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಜನರಿಗಾಗಿ ನಮ್ಮ ನೀರು ನಮ್ಮ ಹಕ್ಕು ಹೋರಾಟ ಮಾಡಿದೆ. ಮೇ ತಿಂಗಳ ಒಳಗಾಗಿ ಈ ಕಾವೇರಿ ನೀರು ನಿಮಗೆ ತಲುಪುವಂತೆ ಮಾಡುತ್ತೇವೆ.
ನನ್ನ ಸಹೋದರ ಸುರೇಶ್ ಸಂಸದನಾಗಿ ಅಲ್ಲ, ಪಂಚಾಯ್ತಿ ಸದಸ್ಯನಂತೆ ನಿಮ್ಮ ಮನೆ ಬಾಗಿಲಿಗೆ ಬಂದು ಕೆಲಸ ಮಾಡುತ್ತಿದ್ದಾರೆ. ಅವರಂತೆ ಬೀದಿ ಬೀದಿ ಸುತ್ತಿ ಕೆಲಸದ ಮಾಡಿದ ಬೇರೆ ಸಂಸದರನ್ನು ನೋಡಿಲ್ಲ. ಕನಕಪುರದಲ್ಲಿ ನನಗೆ 1.23 ಲಕ್ಷ ಮತಗಳಿಂದ ಗೆಲ್ಲಿಸಿದ್ದರೆ. ಅದಕ್ಕೆ ಡಿ.ಕೆ. ಸುರೇಶ್ ಕಾರಣ.ಚುನಾವಣೆ ಬರುತ್ತಿದೆ. ನೀವು ನಿಮ್ಮ ಸೇವೆ ಮಾಡಿದವರಿಗೆ ಬೆಂಬಲ ನೀಡಬೇಕು. ಬೇರೆಯವರು ಕೆಲವು ಜಾಹೀರಾತಿನಲ್ಲಿ ಪ್ರಚಾರ ಮಾಡುತ್ತಾರೆ. ಆದರೆ ನಾವು ಜನರ ಸೇವೆ ಮಾಡುತ್ತಿದ್ದೇವೆ.
“ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ನೀರಿನ ಮಟ್ಟ ಕುಸಿದಿದೆ. ಕೊಳವೆ ಬಾವಿ ಇನ್ನು ಆಳಕ್ಕೆ ಕೊರೆಯುವ ಬಗ್ಗೆ ಸಲಹೆ ನೀಡಿದ್ದು, ಅಧಿಕಾರಿಗಳ ಜೊತೆ ಚರ್ಚೆ ಮಾಡುತ್ತೇನೆ. ಇನ್ನು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ನಾವು 200 ಕೋಟಿ ಅನುದಾನ ನೀಡಿದ್ದೇವೆ ಎಂದು ಡಿಕೆ ಶಿವಕುಮಾರ್ ಅವರು ತಿಳಿಸಿದರು.
ಆಂಧ್ರದಲ್ಲಿ ಹಕ್ಕಿ ಜ್ವರ: ಸಹಸ್ರಾರು ಕೋಳಿ ಸಾವು, ಮೊಟ್ಟೆ ನಾಶ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + two =
Remember me
