ಬೆಂಗಳೂರು:ಕಡೆಗೂ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಅದಕ್ಕೆ ಕಾರಣ, ಅದಕ್ಕೂ ಮುನ್ನ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ..! ಇಂದು ಬೆಳಿಗ್ಗೆ ಬೊಮ್ಮಾಯಿ ಎಚ್ಚರಿಕೆ ಕೊಟ್ಟಿದ್ದರ ಪರಿಣಾಮ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಬಿಬಿಎಂಪಿ ಮುಚ್ಚತೊಡಗಿದೆ.
ನಿನ್ನೆ ಕೂಡ ರಸ್ತೆ ಗುಂಡಿಯಲ್ಲಿ ವಾಹನ ಸ್ಕಿಡ್ ಆಗಿ ಒಬ್ಬರು ಮೃತಪಟ್ಟಿದ್ದರು. ಈ ಹಿಂದೆ ಕೂಡ ಹಲವು ಬಾರಿ ಬಿದ್ದು ಗಾಯಗೊಂಡಿರುವ ವಾಹನ ಸವಾರರು, ಮೃತಪಟ್ಟವರ ಸಂಖ್ಯೆ ಕಡಿಮೆಯೇನಿಲ್ಲ. ಆದರೂ, ಪಾಲಿಕೆ ಮಾತ್ರ ರಸ್ತೆ ಗುಂಡಿ ಮುಚ್ಚಲು ಮಳೆಯ ನೆಪ ಹೇಳುತ್ತಿತ್ತು. ಇಂದು ಸಿಎಂ, ಮಧ್ಯಾಹ್ನದೊಳಗೆ ಎಲ್ಲ ಗುಂಡಿಗಳನ್ನು ಮುಚ್ಚುವಂತೆ ಎಚ್ಚರಿಸಿದ್ದರು. ಅದರಂತೆ, ಬಿಬಿಎಂಪಿ ಗುಂಡಿ ಮುಚ್ಚುವ ಕಾರ್ಯಕ್ಕೆ ಇಳಿದಿದೆ. ಈಗಲಾದರೂ ಗುಂಡಿ ಮುಚ್ಚುತ್ತಿದ್ದಾರೆಂದು ಜನ ನಿಟ್ಟುಸಿರು ಬಿಟ್ಟಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 19 =
Remember me
