ಬೆಂಗಳೂರು:ಬಿಬಿಎಂಪಿ ಪ್ರಯೋಗಾಲಯದಲ್ಲಿ ಬೆಂಕಿ ಹೊತ್ತಿಕೊಂಡು 9 ಮಂದಿ ಗಾಯಗೊಂಡ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪಾಲಿಕೆ ಮುಖ್ಯ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇಂದು ಪಾಲಿಕೆ ಕಚೇರಿಯಲ್ಲಿ ರುಟೀನ್ ಮೀಟಿಂಗ್ ಇತ್ತು, ಈ ಸಂದರ್ಭದಲ್ಲಿ ಪ್ರಯೋಗಾಲಯದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿ ಐಸಿಯುಗೆ ಶಿಫ್ಟ್ ಮಾಡಲಾಗಿದೆ. ಗಾಯಾಳುಗಳನ್ನು 48 ಗಂಟೆ ನಿಗಾ ಇಟ್ಟು ನೋಡಬೇಕಿದೆ ಎಂದು ವೈದ್ಯರು ತಿಳಿಸಿದ್ದಾರೆ ಎಂದರು.
ಇದನ್ನೂ ಓದಿ:ಡಾ.ರಾಜ್ ಕುಟುಂಬದಲ್ಲಿ ಒಬ್ಬರ ಹಿಂದೊಬ್ಬರ ಸಾವು; ಕಾರಣ ತಿಳಿಯಲು ಸದ್ಯದಲ್ಲೇ ಅಷ್ಟಮಂಗಲ ಪ್ರಶ್ನೆ!
ಗಾಯಾಳುಗಳ ಮುಖ ಮತ್ತು ಕೈ ಸುಟ್ಟು ಹೋಗಿದ್ದು, ಕಣ್ಣುಗಳಿಗೆ ಅಪಾಯವಾಗಿಲ್ಲ. ಎಲ್ಲರಿಗೂ ಅತ್ಯುತ್ತಮ ಚಿಕಿತ್ಸೆ ನೀಡಲು ನಿರ್ದೇಶನ ನೀಡಿದ್ದೇವೆ. ಯಾಕಾಯಿತು, ಹೇಗಾಯಿತು ಎನ್ನುವ ಕುರಿತು ತನಿಖೆ ನಡೆಸುವಂತೆ ಬಿಬಿಎಂಪಿ ಕಮಿಷನರ್​ಗೆ ಹೇಳಿದ್ದೇವೆ ಎಂದರು. ಪ್ರಕರಣದ ತನಿಖೆ ನಡೆಯುತ್ತದೆ, ಗಾಯಾಳುಗಳೆಲ್ಲರೂ ಗುಣಮುಖರಾಗಲಿ ಎಂದು ಆಶಿಸುತ್ತೇನೆ ಎಂದೂ ಹೇಳಿದರು.
ಸದ್ಯ ನಮಗೆ ಗಾಯಾಳುಗಳ ಚಿಕಿತ್ಸೆ, ಅವರ ಆರೋಗ್ಯ ಅತಿಮುಖ್ಯ. ಸರ್ಕಾರದ ಕಡೆಯಿಂದ ಅತ್ಯುತ್ತಮ ಚಿಕಿತ್ಸೆ ನೀಡಲಾಗುವುದು. ಅವರ ಚಿಕಿತ್ಸೆ ಕಡೆ ನಾವೆಲ್ಲರೂ ಗಮನ ಹರಿಸಬೇಕಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಲೆಫ್ಟಿಗಳಿಗೆಂದೇ ವಿಶೇಷ ಹೆಲ್ಮೆಟ್​: ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಪ್ರಚಾರಕ್ಕೆ ಸಿಕ್ತು ‘ವೇಗ’

ಮದುವೆ ಫೋಟೋಗ್ರಫಿಗೆ ಹೋದವಳು ವರನೊಂದಿಗೇ ಅಫೇರ್ ಇಟ್ಟುಕೊಂಡಳು​; ಹಣ ವಾಪಸ್ ಕೊಡುವಂತೆ ಒತ್ತಾಯಿಸಿದ ವಧು

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:4 × four =
Remember me
