ಬೆಂಗಳೂರು: ಲಾಕ್​ಡೌನ್​ನಿಂದಾಗಿ ತೊಂದರೆ ಅನುಭವಿಸುತ್ತಿರುವ ವಲಸೆ, ಕಟ್ಟಡ ಕೂಲಿ ಕಾರ್ವಿುಕರು ಮತ್ತು ಅಗತ್ಯವಿರುವ ಫಲಾನುಭವಿಗಳಿಗೆ ಸರ್ಕಾರದ ಆದೇಶದ ಮೇರೆಗೆ ಭಾನುವಾರದ ಸಂಜೆ ವೇಳೆಗೆ 31,400 ಆಹಾರ ಪದಾರ್ಥಗಳ ಕಿಟ್ ವಿತರಣೆ ಕಾರ್ಯವನ್ನು ಬಿಬಿಎಂಪಿ ಪೂರ್ಣಗೊಳಿಸಿದೆ.
ಇಂದಿರಾ ಕ್ಯಾಂಟೀನ್​ನಲ್ಲಿ ಉಚಿತವಾಗಿ ವಿತರಣೆ ಮಾಡುತ್ತಿದ್ದ ಆಹಾರ ರದ್ದುಗೊಳಿಸಿ, ಕಾರ್ವಿುಕ ಕುಟುಂಬಗಳಿಗೆ ದಿನಸಿ ಕಿಟ್ ನೀಡುವಂತೆ ಸರ್ಕಾರ ಸೂಚಿಸಿತ್ತು. ಅದರಂತೆ, ಪಾಲಿಕೆ 8 ವಲಯಗಳಲ್ಲಿ ಒಟ್ಟು 58,532 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಇಲ್ಲೆಲ್ಲ ಎರಡು ದಿನಗಳಿಂದ ಹಂಚಿಕೆ ಮಾಡಲಾಗುತ್ತಿದೆ.ವಿಶೇಷ ಆಯುಕ್ತ ಡಿ. ರಂದೀಪ್ ನೇತೃತ್ವದಲ್ಲಿ ಅಕ್ಕಿ, ಬೇಳೆ, ಎಣ್ಣೆ, ಉಪು್ಪ ಸೇರಿ 750 ರೂ. ಮೊತ್ತದ ಸಾಮಗ್ರಿಗಳನ್ನು ಪ್ರತಿಯೊಂದು ಕುಟುಂಬಕ್ಕೂ ನೀಡಲಾಗುತ್ತಿದೆ. ಉಳಿದ 27,132 ಆಹಾರ ಪದಾರ್ಥಗಳ ಕಿಟ್​ಗಳನ್ನು ಸೋಮವಾರ ಹಂಚಲಾಗುವುದು ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ವ್ಯಾಪಾರಿ ಸಂಘದಿಂದ ದಿನಸಿ ಕಿಟ್ ವಿತರಣೆ:ಕರ್ನಾಟಕ ರಾಜ್ಯ ಬೀದಿಬದಿ ವ್ಯಾಪಾರಿಗಳ ಸಂಘದ ವತಿಯಿಂದಲೂ 500 ದಿನಸಿ ಕಿಟ್​ಗಳ ವಿತರಣೆ ಕಾರ್ಯ ನಡೆಯಿತು. ಹೆಗ್ಗನಹಳ್ಳಿ, ರಾಜಗೋಪಾಲನಗರ ಮತ್ತು ಮಾರುತಿನಗರದಲ್ಲಿ ಸಂಕಷ್ಟದಲ್ಲಿರುವ ಬೀದಿಬದಿ ವ್ಯಾಪಾರಿಗಳಿಗೆ ದಿನಸಿ ಕಿಟ್​ಗಳನ್ನು ವಿತರಣೆ ಮಾಡಲಾಯಿತು. ಸಂಘದ ರಾಜ್ಯಾಧ್ಯಕ್ಷ ರಂಗಸ್ವಾಮಿ, ಸದಸ್ಯರಾದ ದೊಡ್ಡಣ್ಣ, ಇಂಥಾಜು ಪಾಷಾ, ಪುಟ್ಟಸ್ವಾಮಿ, ಸಾಧಿಕ್, ಪ್ರೇಮಮ್ಮ ಮತ್ತಿತರರು ಉಪಸ್ಥಿತರಿದ್ದರು.
ಆರ್​ಎಸ್​ಎಸ್​ನಿಂದ 27 ಸಾವಿರ ಕಿಟ್​ವಿತರಣೆ:ಒಂದು ವಾರದಿಂದ ಆರ್​ಎಸ್​ಎಸ್ ಕಾರ್ಯಕರ್ತರು ಆಹಾರ ಸಾಮಗ್ರಿಗಳನ್ನು ಒಳಗೊಂಡ 27,600 ದಿನಸಿ ಕಿಟ್​ಗಳನ್ನು ವಿತರಣೆ ಮಾಡಿದ್ದಾರೆ. ಭಾನುವಾರ ಜೆ.ಸಿ. ನಗರದಲ್ಲಿ 140 ದಿನಸಿ ಕಿಟ್​ಗಳು ಸೇರಿ ನಗರದ 14 ವಿಭಾಗಗಳಲ್ಲಿ ಕಿಟ್​ಗಳನ್ನು ವಿತರಣೆ ಮಾಡಲಾಯಿತು ಎಂದು ಆರ್​ಎಸ್​ಎಸ್ ಕಾರ್ಯಕರ್ತ ಪ್ರವೀಣ್ ಪಟವರ್ಧನ್ ವಿಜಯವಾಣಿಗೆ ತಿಳಿಸಿದ್ದಾರೆ.
ವೈದ್ಯರಿಗೆ ಮನೆಗೆ ಹೋಗುವುದಕ್ಕೆ ಭಯ: ಪ್ರತ್ಯೇಕವಾಗಿ ವಸತಿ ವ್ಯವಸ್ಥೆ ಕಲ್ಪಿಸಲು ಸರ್ಕಾರದ ಸಿದ್ಧತೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen − one =
Remember me
