ಬೆಂಗಳೂರು:ಸ್ಯಾಂಡಲ್​​ವುಡ್​ನ ಸ್ಠಾರ್​ ನಿರ್ಮಾಪಕ ಹಾಗೂ ನಟ  ರಾಕ್​ಲೈನ್​ ವೆಂಕಟೇಶ್​ ಅವರ ಒಡೆತನದಲ್ಲಿರುವ  ರಾಕ್​ಲೈನ್​ ಮಾಲ್​ಗೆ ಬಿಬಿಎಂಪಿ ಅಧಿಕಾರಿಗಳು ತೆರಿಗೆ ಪಾವತಿ ಬಾಕಿ ಹಿನ್ನಲೆಯಲ್ಲಿ ಬೀಗ ಹಾಕಿದ್ದಾರೆ.
ಬೆಂಗಳೂರಿನ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿರುವ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರ ರಾಕ್‌ಲೈನ್ ಮಾಲ್ ಬಾಕಿ ತೆರಿಗೆ ಪಾವತಿಸದ ಕಾರಣ ಇಂದು ಪಾಲಿಕೆ ಕಂದಾಯ ಅಧಿಕಾರಿಗಳು ಈಗ ಮಾಲ್ ಸೀಜ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ರಾಕ್ ಲೈನ್  ಅವರು 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆಯನ್ನು ಪಾಲಿಕೆಗೆ ಪಾವತಿಸಬೇಕಿದೆ. ಬಾಕಿ ತೆರಿಗೆ ಪಾವತಿಸಲು ಈಗಾಗಲೇ ಡಿಮಾಂಡ್ ನೋಟೀಸ್ ನೀಡಿದ್ದರು ಈ ವರೆಗೂ ತೆರಿಗೆಯನ್ನು ಪಾವತಿಸಿಲ್ಲ. ಇಂದು ದಾಸರಹಳ್ಳಿ ವಲಯ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ರಾಕ್ ಲೈನ್ ಮಾಲ್ ಅನ್ನು ಸೀಜ್ ಮಾಡಲಾಗಿದೆ.
ಸ್ಥಳದಲ್ಲಿ ವಲಯ ಆಯುಕ್ತರಾದ ಶ್ರೀಮತಿ ಪ್ರೀತಿ ಗೆಹ್ಲೋಟ್, ವಲಯ ಜಂಟಿ ಆಯುಕ್ತರಾದ ಬಾಲಶೇಖರ್ ದಾಸರಹಳ್ಳಿ ವಲಯ ಅಧಿಕಾರಿಗಳು, ಕಂದಯಾ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಮಾರ್ಷಲ್ ಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು. ತೆರಿಗೆ ಪಾವತಿ ಬಾಕಿ ಇರುವ ಹಿನ್ನಲೆಯಲ್ಲಿ ರಾಕ್​ಲೈನ್​​ ಮಾಲ್​ಗೆ ಅಧಿಕಾರಿಗಳು ಬೀಗ  ಹಾಕಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:18 − twelve =
Remember me
