ಬೆಂಗಳೂರು:ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಗಂಡಾಂತರ ಮುಂದುವರಿದಿದೆ. ದಿನಕ್ಕೊಂದು ಅವಘಡ ಸಂಭವಿಸುತ್ತಿದ್ದರೂ ಬಿಬಿಎಂಪಿ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ. ಬಿಬಿಎಂಪಿಗೆ ಬೆಂಗಳೂರಲ್ಲಿ ಇನ್ನೆಷ್ಟು ಬಲಿ ಬೇಕು ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.
ಇದೀಗ ರಸ್ತೆ ಗುಂಡಿಗೆ ಮತ್ತೊಂದು ಅವಘಡ ಸಂಭವಿಸಿದ್ದು, ಬೈಕ್​ ಸವಾರನೊಬ್ಬ ರಸ್ತೆ ಗುಂಡಿಯಿಂದಾಗಿ ಕೆಳಗೆ ಬಿದ್ದು ಕೋಮಾಗೆ ಜಾರಿದ್ದಾರೆ. ಬಿಬಿಎಂಪಿಯ ಘನ ನಿರ್ಲಕ್ಷ್ಯಕ್ಕೆ ಬೈಕ್​​ ಸವಾರ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ.
ಜಾಲಹಳ್ಳಿಯ ಗಂಗಮ್ಮ ರಸ್ತೆಯಲ್ಲಿ ಈ ಘಟನೆ ನಡೆದಿದೆ.‘ 37 ವರ್ಷದ ಸಂದೀಪ್, ವಿದ್ಯಾರಣ್ಯಪುರದ ನಿವಾಸಿ. ಮಂಗಳವಾರ ರಾತ್ರಿ 9.30ರ ಸುಮಾರಿಗೆ ಸ್ನೇಹಿತರ ಜೊತೆ ಕ್ರಿಕೆಟ್ ಆಡಿ ಮನೆಗೆ ತೆರಳುತ್ತಿದ್ದರು. ರಸ್ತೆಯಲ್ಲಿದ್ದ ಯಮಸ್ವರೂಪಿ ಗುಂಡಿ ಕಾಣಿಸದೇ ಗುಂಡಿಗೆ ಬಿದ್ದ ಪರಿಣಾಮ ತಲೆಗೆ ತೀವ್ರ ಗಾಯವಾಗಿದೆ. ಕೂಡಲೇ ಅವರನ್ನು ಹೆಚ್.ಎಮ್.ಟಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಹೆಚ್.ಎಂ.ಟಿ.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ್ದರಿಂದ ಹೆಬ್ಬಾಳದ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಲೆಗೆ ತೀವ್ರವಾಗಿ ಗಾಯವಾಗಿರುವ ಹಿನ್ನೆಲೆಯಲ್ಲಿ ಸಂದೀಪ್‌ಗೆ ಆಪರೇಷನ್ ಮಾಡಲಾಗಿದೆ. ಸದ್ಯ ಸಂದೀಪ್​ ಕೋಮಾದಲ್ಲಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ. ಸಂದೀಪ್​ರ ಸ್ಥಿತಿ ನೋಡಿದ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.(ದಿಗ್ವಿಜಯ ನ್ಯೂಸ್​)
ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಕೊಹ್ಲಿ ಮಾಡಿದ್ದು ನೂರಕ್ಕೆ ನೂರರಷ್ಟು ತಪ್ಪು! ಟೀಮ್​ ಇಂಡಿಯಾ ಮಾಜಿ ಆಟಗಾರನ ಸ್ಫೋಟಕ ಹೇಳಿಕೆ

ಟ್ವಿಟರ್ ಉದ್ಯೋಗಿಗಳ ವಜಾ ಪ್ರಕ್ರಿಯೆ ಶುರು: ಭಾರತದಲ್ಲೂ ಶೇ. 50 ನೌಕರರಿಗೆ ಗೇಟ್​ಪಾಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
