ಚಿತ್ರದುರ್ಗ:ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಹಾಗೂ ಅವರ ಸಹಚರರು ಪರಪ್ಪನ ಅಗ್ರಹಾರ ಸೇರಿದ್ದು, ಕೋರ್ಟ್​ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ 18ವರೆಗೆ ವಿಸ್ತರಿಸಿ ಅದೇಶ ಹೊರಡಿಸಿದೆ. ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದು, ನಟನ ಈ ಹೀನ ಕೃತ್ಯದ ಕುರಿತು ನಟ, ಮಾಜಿ ಸಚಿವ ಬಿ.ಸಿ. ಪಾಟೀಲ್​ ಪ್ರತಿಕ್ರಿಯಿಸಿದ್ದು, ನಿಷ್ಪಕ್ಷಪಾತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದು ಆಗ್ರಹಿಸಿದ್ದಾರೆ.
ಚಿತ್ರದುರ್ಗದಲ್ಲಿ ರೇಣುಕಸ್ವಾಮಿ ಕುಟುಂಬಸ್ಥರನ್ನು ಭೇಟಿ ಮಾಡಿ ಮಾತನಾಡಿದ ಬಿ.ಸಿ. ಪಾಟೀಲ್​, ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ನಿಷ್ಪಕ್ಷಪಾತ ತನಿಖೆಯಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ, ಮೃತ ಪತ್ನಿಗೆ ಉದ್ಯೋಗ ಕೊಡಬೇಕು. ಈ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅಂತಹವರಿಗೆ ಶಿಕ್ಷೆಯಾಗಲಿ. ಇಲ್ಲಿ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ.
ಚಿತ್ರದುರ್ಗದ ರೇಣುಕಾಸ್ವಾಮಿ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ, ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ, ಆತ್ಮಸ್ಥೈರ್ಯ ತುಂಬಿ, 50 ಸಾವಿರ ರೂ. ಸಹಾಯ ಧನ ನೀಡಲಾಯಿತು.pic.twitter.com/NefwNJWxoq
ಇದನ್ನೂ ಓದಿ:ಪೊಲೀಸರ ಕೈಯಲ್ಲಿ ಆಗದೇ ಇರುವ ಕೆಲಸವನ್ನು ಕ್ಷಣಾರ್ಧದಲ್ಲೇ ಮಾಡಿ ತೋರಿಸಿದ ಎಮ್ಮೆ; ಅಷ್ಟಕ್ಕೂ ನಡೆದಿದ್ದೇನು?
ಮಾಡ್ರನ್ ಜಗತ್ತಲ್ಲಿ ಟೆಕ್ನಾಲಜಿ ಹೆಚ್ಚಾದ ಮೇಲೆ ಸೈಬರ್ ಕ್ರೈಮ್ ಜಾಸ್ತಿಯಾಗಿದೆ. ಮೃತ ರೇಣುಕಾಸ್ವಾಮಿ ಮೇಲೆ ದೂರು ಕೊಟ್ಟಿದ್ರೆ ವಿಚಾರಣೆ ನಡೆಸಬಹುದಿತ್ತು. ಆದರೆ ಕೊಲೆ ಮಾಡುವ ಹಂತಕ್ಕೆ ಇಳಿದಿರುವುದು ಸರಿಯಲ್ಲ. ನಟ ದರ್ಶನ್ ಪೊಲೀಸರಿಗೆ ಕರೆ ಮಾಡಿ ಹೇಳಿದ್ರೆ ಎಲ್ಲಾ ಸಮಸ್ಯೆ ಬಗೆಹರಿಯುತ್ತಿತ್ತು ಎಂದು ಹೇಳಿದ್ದಾರೆ.
ಇನ್ನು ಈ ಪ್ರಕರಣದ ಬಗ್ಗೆ ತನಿಖೆ ಮಾಡಲು ಪೊಲೀಸರು ಇದ್ದಾರೆ. ನಾವು ಯಾವುದು ಸುಳ್ಳು, ಯಾವುದು ನಿಜ ಅಂತಾ ಹೇಳುವುದಕ್ಕೆ ಆಗುವುದಿಲ್ಲ. ಆದರೆ, ದರ್ಶನ್ ಒಳ್ಳೆಯ ವ್ಯಕ್ತಿ, ಒಳ್ಳೆಯ ನಟ ಆಗಿದ್ದ. ಈಗ ಅವರ ಮೇಲೆ ಕೊಲೆ ಆರೋಪ ಬಂದಿದೆ. ವಿಚಾರಣೆ ನಡೆಯುತ್ತಿದೆ. ತನಿಖೆ ಆದ್ಮೇಲೆ ಸತ್ಯ ಏನೆಂದು ಗೊತ್ತಾಗುತ್ತದೆ ಎಂದು ನಟ, ಮಾಜಿ ಸಚಿವ ಬಿ.ಸಿ. ಪಾಟೀಲ್​ ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 3 =
Remember me
