ಹಾವೇರಿ:ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಬಿಸಿ ಪಾಟೀಲ್​, ರಾಜ್ಯ ಸರ್ಕಾರ ಬೆಲೆ ಏರಿಕೆ ಮಾಡಿದ್ದರಿಂದ ರಾಜ್ಯದ ಜನತೆಯಲ್ಲಿ ದೊಡ್ಡ ಆಘಾತವಾಗಿದೆ. ನೇರವಾಗಿ ರಾಬರಿ ಮತ್ತು ಡಕಾಯತಿ ಮಾಡಿದಂತೆ ಇದು. ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ. ಸಾರ್ವಜನಿಕರ ಜೇಬಿಗೆ ಸರ್ಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಕೊಟ್ಟರೂ ಜನರು ‘ಕೈ’ ಹಿಡಿಯಲಿಲ್ಲ ಎಂದು ಹತಾಶರಾಗಿದ್ದಾರೆ ಎಂದು ಕಾಂಗ್ರೆಸ್​ ವಿರುದ್ಧ ವ್ಯಂಗ್ಯವಾಡಿದರು.
ಇದನ್ನೂ ಓದಿ:ನಾಯಕನಾಗಿ ನೀನು ಮಾಡಿದ್ದೇನೂ ಇಲ್ಲ! ಬಾಬರ್ ಆಜಂ ನಿವೃತ್ತಿಗೆ ಒತ್ತಾಯಿಸಿದ ಪಾಕ್​ ಮಾಜಿ ಕ್ರಿಕೆಟಿಗ
“187 ಕೋಟಿ ರೂ. ಭ್ರಷ್ಟಾಚಾರ ಮಾಡಿ ಆಂದ್ರಪ್ರದೇಶದ ಚುನಾವಣೆಗೆ ಬಳಸಿದ್ದಾರೆ. ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕೈವಾಡವಿದೆ. ನಾಗೇಂದ್ರ ಅವರ ರಾಜೀನಾಮೆ ಪಡೆದು ಪ್ರಕರಣ ಮುಚ್ಚಿ ಹಾಕುವುದಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಆಡಳಿತ ಯಂತ್ರ ಕುಸಿದು ಬಿದ್ದಿದೆ. ಆಡಳಿತ ನಡೆಸಲು ಮುಖ್ಯಮಂತ್ರಿಗಳು ವಿಫಲರಾಗಿದ್ದಾರೆ. ಮೊದಲು ಸಿಎಂ, ಡಿಸಿಎಂ ತಲೆದಂಡ ಮಾಡಿಕೊಂಡು ಮಂತ್ರಿಗಳ ರಾಜೀನಾಮೆ ಕೇಳುವುದು ಸೂಕ್ತ” ಎಂದಿದ್ದಾರೆ.
ಇನ್ನು ನಟ ದರ್ಶನ್​ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಕೃಷಿ ಸಚಿವನಾಗಿದ್ದಾಗ ದರ್ಶನ್ ಅವರನ್ನು ರಾಯಭಾರಿ ಮಾಡಲಾಗಿತ್ತು. ಅವತ್ತು ದರ್ಶನ್ ಈ ರೀತಿಯ ಕೃತ್ಯದಲ್ಲಿ ಭಾಗಿಯಾಗಿರಲಿಲ್ಲ. ರೇಣುಕಸ್ವಾಮಿ ಹತ್ಯೆಯಾಗಿರುವುದು ಹೇಯ ಕೃತ್ಯ. ಯಾರೂ ಇದನ್ನು ಕ್ಷಮಿಸುವುದಿಲ್ಲ. ಕಾನೂನು ಪ್ರಕಾರ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ” ಎಂದರು.
ಇದನ್ನೂ ಓದಿ:ರಾಜ್ಯಸರ್ಕಾರದಿಂದ 67 ಕೋಟಿ ರೂ. ಪ್ರೋತ್ಸಾಹಧನ ಬಾಕಿ: ಮನ್‌ಮುಲ್ ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಆರೋಪ
“ದರ್ಶನ್​ರನ್ನು ಚಿತ್ರರಂಗದಿಂದ ಬ್ಯಾನ್ ಮಾಡುವುದರಿಂದ ಏನು ಪ್ರಯೋಜನ? ಈಗಾಗಲೇ ಅವರು ಜೈಲಿನಲ್ಲಿದ್ದಾರೆ” ಎಂದು ಹೇಳಿದರು.
ಯಾರ ಪ್ರಭಾವಕ್ಕೂ ಮಣಿಯದೇ ‘ರೀಲ್​ ಹೀರೋ’​ಗೆ ಬಿಸಿ ಮುಟ್ಟಿಸಿದ್ದೇ ಈ ಇಬ್ಬರು ಖಡಕ್ ಅಧಿಕಾರಿಗಳು! ಇವರೇ ನೋಡಿ ‘ರಿಯಲ್’ ಹೀರೋಸ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 2 =
Remember me
