ಬೆಂಗಳೂರು:ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಕಾಯಕಲ್ಪ ನೀಡುವುದಾಗಿ ಬಿಡಿಎ ನೂತನ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಹೇಳಿದ್ದಾರೆ.
ಗುರುವಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ಭ್ರಷ್ಟ ಅಧಿಕಾರಿಗಳಿಂದ ಸಂಸ್ಥೆಗೆ ಕಪ್ಪು ಚುಕ್ಕೆ ಬಂದಿದೆ. ಇದನ್ನು ತೊಡೆದು ಹಾಕುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನಗೆ ನೀಡಿದ್ದಾರೆ ಎಂದರು. ಈ ನಿಟ್ಟಿನಲ್ಲಿ ಸಂಸ್ಥೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸಿ ಜನಸ್ನೇಹಿಯನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೊರೆ ಹೋಗದೇ ಏನಾದರೂ ಸಮಸ್ಯೆಗಳಿದ್ದರೆ ನೇರವಾಗಿ ತಮ್ಮನ್ನು ಸಂಪರ್ಕಿಸಬಹುದು ಎಂದ ಎಸ್.ಆರ್.ವಿಶ್ವನಾಥ್, ಈಗಾಗಲೇ ಹಣ ನೀಡಿರುವ ಸಾರ್ವಜನಿಕರಿಗೆ ಅರ್ಕಾವತಿ ಮತ್ತು ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಮಾಡುವ ಪ್ರಕ್ರಿಯೆಗೆ ಶೀಘ್ರ ಚಾಲನೆ ನೀಡಲಾಗುವುದು ಎಂದರು.
ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಈ ದಿಸೆಯಲ್ಲಿ ರೈತರ ಮನವೊಲಿಸಿ ಭೂಸ್ವಾಧೀನ ಮಾಡಿಕೊಳ್ಳಲಾಗುವುದು ಎಂದರು.
ನಗರದ ಸಂಚಾರ ದಟ್ಟಣೆ ನಿವಾರಣೆ ಮಾಡುವ ದೃಷ್ಟಿಯಿಂದ ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫರೆಲ್ ರಿಂಗ್ ರಸ್ತೆ ನಿರ್ಮಾಣ ಮಾಡಲು ಬಿಡಿಎ ಬದ್ಧವಾಗಿದೆ. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
ಬಿಡಿಎನಲ್ಲಿ ಜನ ವಿರೋಧಿ ಸಿಬ್ಬಂದಿಯನ್ನು ಸಹಿಸುವುದಿಲ್ಲ. ಮುಂದಿನ ಒಂದು ವರ್ಷದೊಳಗೆ ಸಂಸ್ಥೆಯನ್ನು ಆರ್ಥಿಕವಾಗಿ ಸಬಲವನ್ನಾಗಿ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.
ಭಾರಿ ಕುತೂಹಲ ಮೂಡಿಸಿದೆ ಸಿಎಂ ಬಿಎಸ್​ವೈ ನಡೆ!

ನಿನ್ನ ಹೆಂಡ್ತಿ-ಮಕ್ಕಳನ್ನು ನನಗೇ ಬಿಟ್ಟುಕೊಡು ಎಂದು ಮನೆಗೆ ಬಂದ ಭೂಪ! ಆ ರಾತ್ರಿ ನಡೆದೇ ಹೋಯ್ತು ಘೋರ ಕೃತ್ಯ

ಮಗು ನೋಡಿಕೊಳ್ಳುವ ನೆಪದಲ್ಲಿ ಅತ್ಯಾಚಾರ! ರಕ್ತಸ್ರಾವದಿಂದ ಒದ್ದಾಡುತ್ತಿತ್ತು ಕಂದಮ್ಮ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + ten =
Remember me
