ಬಳ್ಳಾರಿ:ವಿಜಯನಗರ ಜಿಲ್ಲೆ ಅನುಷ್ಠಾನಗೊಂಡ ಮರುದಿನವೇ ಮೂಲ ಸೌಕರ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆನಂದ ಸಿಂಗ್​, ಸಹಕಾರ ಕ್ಷೇತ್ರದಲ್ಲೂ ವಿಜಯ ಪತಾಕೆ ಹಾರಿಸಿದ್ದಾರೆ.
ರಾಜ್ಯದ 31ನೇ ಜಿಲ್ಲೆಯಾಗಿ ‘ವಿಜಯನಗರ’ ಘೋಷಣೆ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಆನಂದ್​ ಸಿಂಗ್​ಗೆ ನಿನ್ನೆ (ಸೋಮವಾರ) ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರುವ ಮೂಲ ಸಂಭ್ರಮಾಚರಿಸಿದ್ದರು. ಇಂದು(ಮಂಗಳವಾರ) ಇದೇ ಮೊದಲ ಬಾರಿಗೆ ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ (ಬಿಡಿಸಿಸಿ)ಬ್ಯಾಂಕ್​ ಗಾದಿಯನ್ನೂ ಅಲಂಕರಿಸುವ ಮೂಲಕ ಕ್ಷೇತ್ರದಲ್ಲಿ ಮತ್ತಷ್ಟು ಹಿಡಿತ ಸಾಧಿಸಿದ್ದಾರೆ.ಇದನ್ನೂ ಓದಿರಿಕಾಂಗ್ರೆಸ್​ನ ಹಿರಿಯ ನಾಯಕ ಮತ್ತು ಅವರ ಪುತ್ರನಿಗೆ ಬೆದರಿಕೆ ಕರೆ!
ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್​ ಅಧ್ಯಕ್ಷರಾಗಿ ಆನಂದ ಸಿಂಗ್​ ಅವಿರೋಧ ಆಯ್ಕೆಯಾದರು. ಜ.2ರಂದು ಅಧ್ಯಕ್ಷ ಸ್ಥಾನಕ್ಕೆ ಟಿ.ಎಂ.ಚಂದ್ರಶೇಖರಯ್ಯ ರಾಜೀನಾಮೆ ನೀಡಿದ್ದರು. ಈ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು.
ಹೊಸಪೇಟೆ ತಹಸೀಲ್ದಾರ್​ ವಿಶ್ವನಾಥ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು. ಸಚಿವ ಆನಂದ ಸಿಂಗ್​ ಮಾತ್ರ ನಾಮಪತ್ರ ಸಲ್ಲಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಟಿ.ಎಂ.ಚಂದ್ರಶೇಖರಯ್ಯ, ಉಪಾಧ್ಯಕ್ಷ ಕೆ.ತಿಪ್ಪೇಸ್ವಾಮಿ ಹಾಗೂ ಇತರರು ಹಾಜರಿದ್ದರು. ಹೊಸಪೇಟೆ ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂದ (ಟಿಎಪಿಸಿಎಂಎಸ್​) ಅಧ್ಯಕ್ಷರಾಗುವ ಮೂಲಕ ಆನಂದ ಸಿಂಗ್​ ಸಹಕಾರ ಕ್ಷೇತ್ರ ಪ್ರವೇಶಿಸಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಬಿಡಿಸಿಸಿ ಬ್ಯಾಂಕ್​ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಮೊದಲ ಅವಧಿಯಲ್ಲೇ ಅಧ್ಯಕ್ಷ ಸ್ಥಾನವೂ ಒಲಿದಿದೆ.
ಅಡಕೆ ರೂಪದಲ್ಲಿ ಮನೆಗೆ ಬಂದ ಜವರಾಯ 1 ವರ್ಷದ ಮಗುವಿನ ಪ್ರಾಣ ಹೊತ್ತೊಯ್ದ!

ತಹಸೀಲ್ದಾರ್​ ಕಚೇರಿ ಬಳಿ ಹಾವಿನ ಜತೆ ಆಟವಾಡುತ್ತಿದ್ದ ವೃದ್ಧ ಕ್ಷಣಾರ್ಧದಲ್ಲೇ ಪ್ರಾಣಬಿಟ್ಟ!

ಸಿಎಂ ಯಡಿಯೂರಪ್ಪರ ಮನೆಗೆ ಸಂತರ ದಂಡು! 40 ಸ್ವಾಮೀಜಿಗಳ ಬೇಡಿಕೆ ಏನು?

ಕಾಂಗ್ರೆಸ್​ನ ಹಿರಿಯ ನಾಯಕ ಮತ್ತು ಅವರ ಪುತ್ರನಿಗೆ ಬೆದರಿಕೆ ಕರೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:15 − 5 =
Remember me
