| ಡಾ.ಎ.ಪಿ ಭಟ್, ಭೌತಶಾಸ್ತ್ರಜ್ಞ, ಉಡುಪಿ
ಸುಮಾರು 19 ತಿಂಗಳಿಗೊಮ್ಮೆ ಸಂಜೆಯ ಪಶ್ಚಿಮ ಆಕಾಶದಲ್ಲಿ ವಿಜೃಂಭಿಸುವ ಶುಕ್ರ ಗ್ರಹ ಮೇ 30ರಂದು 43 ಡಿಗ್ರಿ ಎತ್ತರದಲ್ಲಿ ಹೊಳೆಯಲಿದೆ. ಮೇ 30ರಿಂದ ಜುಲೈ ಅಂತ್ಯದವರೆಗೂ ಹೊಳಪು ಕಾಣಲಿದ್ದು, ಆಗಸ್ಟ್ ಆರಂಭದಲ್ಲಿ ಕಣ್ಮರೆಯಾಗುತ್ತದೆ.
ಪ್ರಸ್ತುತ ಮೇ 30ರಿಂದ ಭೂಮಿಗೆ ಸಮೀಪಿಸುತ್ತಿದ್ದಂತೆ ದಿನದಿಂದ ದಿನಕ್ಕೆ ದಿಗಂತದೆಡೆಗೆ ಕೆಳಗಿಳಿಯುತ್ತಾ ಪ್ರಭೆ ಹೆಚ್ಚಿಸಿಕೊಳ್ಳುತ್ತಾ ಜುಲೈ 7ರಂದು ಅತಿ ಹೆಚ್ಚಿನ ಪ್ರಭೆಯಲ್ಲಿ ಕಂಗೊಳಿಸುತ್ತದೆ. ಶುಕ್ರ ಈಗ ಭೂಮಿಯಿಂದ ಸುಮಾರು 15 ಕೋಟಿ ಕಿ.ಮೀ. ದೂರದಿಂದ ಆ.8ರ ಹೊತ್ತಿಗೆ 4 ಕೋಟಿ ಕಿ.ಮೀ.ವರೆಗೆ ಸಮೀಪಿಸುತ್ತದೆ.
ಹೀಗೆ ಶುಕ್ರ ಗ್ರಹ ಕಾಣಿಸಲು ಪ್ರಮುಖ ಕಾರಣ ಬುಧ ಗ್ರಹದಂತೆ ಸೂರ್ಯ ಭೂಮಿ ದೂರಕ್ಕಿಂತ ಕಡಿಮೆ ದೂರದಲ್ಲಿ ಇರುವುದು. ಸೂರ್ಯನಿಂದ ಬುಧ ಸುಮಾರು 6 ಕೋಟಿ, ಶುಕ್ರ 11 ಕೋಟಿ ಕಿ.ಮೀ.ಯಾದರೆ ಭೂಮಿ 15 ಕೋಟಿ ಕಿ.ಮೀ. ದೂರವಿದೆ. ಹೀಗಾಗಿ ಸೌರವ್ಯೂಹದಲ್ಲಿ ಭೂಮಿಗಿಂತ ಒಳಗಿರುವ ಈ ಎರಡು ಗ್ರಹಗಳು ರಾತ್ರಿ ಇಡೀ ಕಾಣುವುದಿಲ್ಲ. ಕಾಣುವುದೇ ಪಶ್ಚಿಮ ಆಕಾಶದಲ್ಲಿ ಸಾಯಂಕಾಲ ಹಾಗೂ ಪೂರ್ವ ಆಕಾಶದಲ್ಲಿ ಬೆಳಗಿನ ಜಾವ. ಆಕಾಶದಲ್ಲಿ ಸೂರ್ಯಾಸ್ತದ ನಂತರ ಕೆಲ ಗಂಟೆಯವರೆಗೆ, ಹೆಚ್ಚೆಂದರೆ ದಿಗಂತದಿಂದ 47 ಡಿಗ್ರಿ ಎತ್ತರದಲ್ಲಿ ಹಾಗೂ ಬುಧ 27 ಡಿಗ್ರಿ ಎತ್ತರದಲ್ಲಿ ಹಾಗೂ ಕೆಲಸಮಯ ಪೂರ್ವ ಆಕಾಶದಲ್ಲಿ ಸೂರ್ಯೋದಯಕ್ಕಿಂತ ಮೊದಲು ಕಾಣಸಿಗá-ತ್ತಾನೆ.
ಸೂರ್ಯನಿಂದ ಶುಕ್ರ ಸದಾ ಒಂದೇ ದೂರದಲ್ಲಿದ್ದರೂ (ಸುಮಾರು 11 ಕೋಟಿ ಕಿ.ಮೀ), ಭೂಮಿಯಿಂದ ಯಾವಾಗಲೂ ಒಂದೇ ರೀತಿ ಇರುವುದಿಲ್ಲ. 19 ತಿಂಗಳಿಗೊಮ್ಮೆ ಅತೀ ಸಮೀಪ ದೂರ 4 ಕೋಟಿ ಕಿ.ಮೀ., ನಂತರ 2025 ಜನವರಿಯಲ್ಲಿ 26 ಕೋಟಿ ಕಿ.ಮೀ. ದೂರದಲ್ಲಿ ಗೋಚರಿಸá-ತ್ತಾನೆ. ಗ್ರಹಗಳಲ್ಲಿ ಬರೀಗಣ್ಣಿನಿಂದ ನೋಡಲು ಶುಕ್ರನೇ ಚೆಂದ. ಸುಮಾರು ಶೇ.95 ಇಂಗಾಲದ ಆಕ್ಸೈಡ್​ಗಳ ವಾತಾವರಣ, ಸ್ವಲ್ಪ ರಂಜಕದ ಡೈಆಕ್ಸೈಡ್​ಗಳಿಂದ ಅತಿ ಹೆಚ್ಚು ಸೂರ್ಯನ ಬೆಳಕನ್ನು ಪ್ರತಿ ಫಲಿಸುವುದರಿಂದ ಶುಕ್ರ ಫಳ ಫಳ ಹೊಳೆಯá-ತ್ತಾನೆ. ದೂರದರ್ಶಕದಲ್ಲೀಗ ಶುಕ್ರ ಗ್ರಹ ಚೌತಿಯ ಚಂದ್ರನಂತೆ ಕಾಣುತ್ತದೆ. ಜುಲೈ ಕೊನೆಯ ವಾರ ಬಿದಿಗೆ ಚಂದ್ರನಿಗಿಂತ ಕ್ಷೀಣವಾಗಿರá-ತ್ತದೆ. ಆ.8ರಿಂದ 19ರವರೆಗೆ ಸೂರ್ಯನಿಗೆ ನೇರ ಬಂದು ನಿಂತಾಗ ಅಸ್ತವಾಗಲಿದ್ದು, ನಂತರ ಪೂರ್ವ ಆಕಾಶದಲ್ಲಿ ಬೆಳಗಿನ ಜಾವ ಗೋಚರವಾಗಲಿದೆ.
ಪಠ್ಯಪುಸ್ತಕಗಳನ್ನು ಪರಿಷ್ಕರಿಸಿ ಮಕ್ಕಳಿಗೆ ಹೊಸ ಪುಸ್ತಕ ಕೊಡಿ: ಸಿಎಂಗೆ ಸಮಾನ ಮನಸ್ಕರ ಒಕ್ಕೂಟದ ಮನವಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 17 =
Remember me
