ಬೆಂಗಳೂರು:ತೀವ್ರಗತಿಯಲ್ಲಿ ಹೆಚ್ಚುತ್ತಿರುವ ಕರೊನಾ ಸೋಂಕು ಇದೀಗ ಕಳೆದ ವರ್ಷ ಉಂಟು ಮಾಡಿದ ಅವಾಂತರವನ್ನೇ ಸೃಷ್ಟಿಸುವ ಸಾಧ್ಯತೆಗಳು ಗೋಚರಿಸುತ್ತಿವೆ. ಈಗಾಗಲೇ ಬೆಡ್ ಸಿಗುತ್ತಿಲ್ಲ, ಸೋಂಕಿತರ ಶವಸಂಸ್ಕಾರಕ್ಕೂ ಕ್ಯೂ ಎಂಬ ಸುದ್ದಿಗಳು ಕೇಳಿಬಂದಿವೆ.
ಈ ಮಧ್ಯೆ ಸೋಂಕು ಹೆಚ್ಚುತ್ತಿರುವ ಸಂಬಂಧ ರಾಜ್ಯದ ಹೈಕೋರ್ಟ್ ಕೂಡ ಕಳವಳ ವ್ಯಕ್ತಪಡಿಸಿದೆ. ಆರಂಭಿಕ ಹಂತದಲ್ಲಿ ಕಾಣಿಸಿಕೊಂಡ ಕರೊನಾಗಿಂತ ಕರೊನಾ ಎರಡನೇ ಅಲೆ ವೇಗವಾಗಿ ಹರಡುತ್ತಿದ್ದು, ಕೋವಿಡ್-19 ಪಾಸಿಟಿವ್ ದೃಢಪಟ್ಟಿರುವ ಹೈಕೋರ್ಟ್ ಸಿಬ್ಬಂದಿಗೂ ಹಾಸಿಗೆ ಸಿಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದೆ.
ಇದನ್ನೂ ಓದಿ:ರಾಜಧಾನಿಯಲ್ಲಿ ಕೋವಿಡ್ ಶವ ಸಂಸ್ಕಾರಕ್ಕೂ ಕ್ಯೂ! ಚಿತಾಗಾರದ ಮುಂದೆ ಗಂಟೆಗಟ್ಟಲೆ ನಿಂತ ಆಂಬ್ಯುಲೆನ್ಸ್​
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಕ್ಕೆ ಸೂಚನೆ ಕೊಟ್ಟಿರುವ ಸರ್ಕಾರ, ಹಾಸಿಗೆಗಳ ಕೊರತೆ ಬಗ್ಗೆ ಸರ್ಕಾರ ಉತ್ತರಿಸಬೇಕು ಎಂದು ಹೇಳಿದೆ. ಮಾತ್ರವಲ್ಲ ಖಾಸಗಿ ಆಸ್ಪತ್ರೆಗಳ ಶುಲ್ಕದ ಬಗ್ಗೆ, ಆ್ಯಂಬುಲೆನ್ಸ್​​ಗಳ ಲಭ್ಯತೆ ಬಗ್ಗೆ ಹಾಗೂ ಸೋಂಕಿತರ ಅಂತ್ಯಕ್ರಿಯೆಗೆ ಕೈಗೊಂಡ ಕ್ರಮಗಳ ಬಗ್ಗೆಯೂ ವಿವರಣೆ ನೀಡುವಂತೆ ಸೂಚಿಸಿದೆ. ಅಲ್ಲದೆ ಜನರ ತೊಂದರೆಗೆ ಸ್ಪಂದಿಸಲು ಉನ್ನತ ಸಮಿತಿ ರಚಿಸಲು ಸಾಧ್ಯವೇ? ಎಂದು ಕೇಳಿರುವ ಹೈಕೋರ್ಟ್​, ನಾಗರಿಕರು ತಮ್ಮ ಕಷ್ಟ ಹೇಳಿಕೊಳ್ಳಲು ವೇದಿಕೆ ಕಲ್ಪಿಸುವಂತೆ ಹಾಗೂ ಹೆಲ್ಪ್​ಲೈನ್​ಗಳನ್ನು ಮತ್ತೆ ಆರಂಭಿಸಲು ಕ್ರಮಕೈಗೊಳ್ಳಲು ನಿರ್ದೇಶನ ನೀಡಿದೆ.
ದೇಶದಲ್ಲಿ ಸೋಂಕಿನ ಪ್ರಮಾಣ ಈಗಿರುವುದೇ ನಿಖರವಲ್ಲ; ಅಸಲಿ ಸಂಖ್ಯೆ ಅದಕ್ಕಿಂತಲೂ 5-10 ಪಟ್ಟು ಅಧಿಕ ಎನ್ನುತ್ತಿದ್ದಾರೆ ಇವರು…

ಅತ್ಯಾಚಾರಿಗಳಿಂದ ತಪ್ಪಿಸಿಕೊಳ್ಳಲು ಮೂರನೇ ಮಹಡಿಯಿಂದ ಜಿಗಿದ ಯುವತಿ; ಇಲ್ಲಿ ಹೆಣ್ಣಿಗೆ ಹೆಣ್ಣೇ ಶತ್ರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 3 =
Remember me
