
ಬೆಂಗಳೂರು:ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ ಮುನ್ನವೇ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಬಿಜೆಪಿ ಮುಂದಾಗಿದೆ.ಬಿಜೆಪಿ ಅಧ್ಯಕ್ಷರ ನೇಮಕ ತಡವಾದರೂ ಚಿಂತೆಯಿಲ್ಲ. ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿ ಎನ್ನುವ ರಾಜ್ಯ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಒಕ್ಕೊರಲ ಮನವಿಗೆ ಬಿಜೆಪಿ ಹೈಕಮಾಂಡ್ ಓಗೊಟ್ಟಿದೆ.ಪಂಚರಾಜ್ಯಗಳ ಚುನಾವಣೆಯಲ್ಲಿ ಭಾಗಿಯಾಗಿರುವ ರಾಜ್ಯ ಬಿಜೆಪಿಯ ಹಲವು ನಾಯಕರು, ಸಮಯ ಸಿಕ್ಕ ಸಂದರ್ಭದಲ್ಲೆಲ್ಲ ರಾಜ್ಯದ ಪರಿಸ್ಥಿತಿಯನ್ನು ಹೈಕಮಾಂಡ್ ಗಮನಕ್ಕೆ ತರುವ ಪ್ರಯತ್ನ ಮಾಡಿದ್ದಾರೆ. ರಾಜ್ಯದ ಬಿಜೆಪಿಯ ಪ್ರಮುಖ ನಾಯಕರೊಬ್ಬರು ಈ ವಿಷಯದಲ್ಲಿ ಹೈಕಮಾಂಡ್ ಜೊತೆಯಲ್ಲಿ ಜಗಳವನ್ನೆ ಆಡಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ.ರಾಜ್ಯದ ಜನರು ನಮ್ಮನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸಬೇಕಾಗಿರುವುದು ನಮ್ಮ ಜವಾಬ್ದಾರಿ. ಇದೊಂದು ನೆಪವನ್ನಿಟ್ಟುಕೊಂಡು ಕಾಂಗ್ರೆಸ್ ಪ್ರತಿ ಸಂದರ್ಭದಲ್ಲಿಯೂ ಬಿಜೆಪಿ ಕಾಲೆಳೆಯುವ ಕೆಲಸ ಮಾಡುತ್ತಿದೆ. ಕಾರ್ಯಕರ್ತರು ಬೇಸರಗೊಂಡಿದ್ದಾರೆ. ಇನ್ನು ಜನಸಾಮಾನ್ಯರಿಗೂ ಈ ವಿಷಯದಲ್ಲಿ ತೀವ್ರ ಬೇಸರವಿದೆ. ಆದ್ದರಿಂದ ಮೊದಲು ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಿ ಎನ್ನುವ ಒತ್ತಾಯವನ್ನು ಹೈಕಮಾಂಡ್‌ಗೆ ಮಾಡಿದ್ದು, ಇದಕ್ಕೆ ಸೂಕ್ತ ಸ್ಪಂದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.ಕನಿಷ್ಠ ಮೂರಕ್ಕೂ ಹೆಚ್ಚು ಬಾರಿ ಆಯ್ಕೆಯಾಗಿರುವ ಮತ್ತು ಪಕ್ಷಕ್ಕೆ ನಿಷ್ಠರಾಗಿರುವ ಹಾಗೂ ಕ್ರೀಯಾಶೀಲವಾಗಿ ಸಂಘಟನಾತ್ಮಕವಾಗಿ ಕೆಲಸ ಮಾಡುವ ಶಾಸಕರ ಹೆಸರನ್ನು ಪಟ್ಟಿ ಮಾಡಿದ್ದು, ಅದರಲ್ಲಿ ಉದಯೋನ್ಮುಖ ನಾಯಕನಾಗಿ ಬೆಳೆಯಲು ಸಾಧ್ಯವಿರುವವರಿಗೆ ಮಣೆ ಹಾಕಬಹುದು ಎನ್ನುವ ಅಭಿಪ್ರಾಯಗಳು ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ವಿರೋಧ ಪಕ್ಷದ ನಾಯಕನ ಆಯ್ಕೆಯಾದ ಬಳಿಕ ಇನ್ನುಳಿದ ರಾಜಕೀಯ ವಿಚಾರಗಳ ಚರ್ಚೆ ಮಾಡಿ ಮುಂಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಬಿಜೆಪಿ ರಾಜ್ಯ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುವುದು ಎಂದು ಹೈಕಮಾಂಡ್ ಮೂಲಗಳು ತಿಳಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + nine =
Remember me
