ಶಿವಮೊಗ್ಗ: ಶಿವಮೊಗ್ಗದ ಬೆಕ್ಕಿನ ಕಲ್ಮಠದ ಪ್ರಸಕ್ತ ಸಾಲಿನ ಗುರು ಬಸವಶ್ರೀ ಪ್ರಶಸ್ತಿಗೆ ಪದ್ಮಶ್ರೀ ಇಬ್ರಾಹಿಂ ಸುತಾರ ಮತ್ತು ಅಲ್ಲಮಪ್ರಭು ಪ್ರಶಸ್ತಿಗೆ ಧಾರವಾಡದ ಸಾಹಿತಿ ಡಾ.ಸಂಗಮೇಶ ಸವದತ್ತಿ ಮಠ ಅವರನ್ನು ಆಯ್ಕೆ ಮಾಡಲಾಗಿದೆ.
ಎರಡೂ ಪ್ರಶಸ್ತಿಗಳು ತಲಾ 10 ಸಾವಿರ ರೂ. ನಗದು ಹಾಗೂ ಸ್ಮರಣಿಕೆಯನ್ನೊಳಗೊಂಡಿವೆ. ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಜ. 9ರ ಸಂಜೆ 5ಕ್ಕೆ ಗುರು ಬಸವಶ್ರೀ ಪ್ರಶಸ್ತಿ ಪ್ರದಾನ ಹಾಗೂ 10ರ ಸಂಜೆ 5ಕ್ಕೆ ಅಲ್ಲಮಪ್ರಭು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದರು.
ಮಠದ 14ನೇ ಗುರುಗಳಾಗಿದ್ದ ಶ್ರೀ ಗುರು ಬಸವ ಶಿವಯೋಗಿಗಳ ಸ್ಮರಣಾರ್ಥ ನಡೆಯುವ ಪುಣ್ಯ ಸ್ಮರಣೋತ್ಸವ ಸಂದರ್ಭದಲ್ಲಿ ಗುರು ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ನವಲುಗುಂದ ಗವಿಮಠದ ಶ್ರೀ ಬಸವಲಿಂಗ ಸ್ವಾಮೀಜಿ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ.
ಜ 9ರ ಸಂಜೆ 5ಕ್ಕೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್, ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ಜೆ.ರಾಜಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ನ್ಯಾಯವಾದಿ ಬೆಂಗಳೂರಿನ ಶೋಭಾ ಪಾಟೀಲ್ ಭಾವೈಕ್ಯತೆ ಕುರಿತು ಉಪನ್ಯಾಸ ನೀಡಲಿದ್ದಾರೆ. ಮಧುರ ಕಲಾವೃಂದದವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದು, ಕಲಾವಿದೆ ಸಿ.ಡಿ.ರಕ್ಷಿತಾ ಭಾವೈಕ್ಯ ನೃತ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ತಿಳಿಸಿದರು.
ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷ ಎನ್.ಜೆ.ರಾಜಶೇಖರ್, ಸ್ಮರಣೋತ್ಸವ ಸಮಿತಿ ಎಚ್.ವಿ.ಮಹೇಶ್ವರಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಆರ್.ಪ್ರಕಾಶ್ ಮುಂತಾದವರು ಇದ್ದರು.ಅಲ್ಲಮಪ್ರಭು ಪ್ರಶಸ್ತಿ ಪ್ರದಾನ: ಜ. 10ರ ಸಂಜೆ ನಾಗನೂರು ರುದ್ರಾಕ್ಷಿ ಮಠದ ಶ್ರೀ ಡಾ.ಅಲ್ಲಮಪ್ರಭು ಸ್ವಾಮೀಜಿ ಹಾಗೂ ತೆಗ್ಗಿನಮಠದ ಶ್ರೀ ವರಸದ್ಯೋಜಾತ ಸ್ವಾಮೀಜಿ ಸಮ್ಮುಖದಲ್ಲಿ ಧಾರವಾಡದ ಸಾಹಿತಿ ಡಾ.ಸಂಗಮೇಶ ಸವದತ್ತಮಠದ ಅವರಿಗೆ ಅಲ್ಲಮಪ್ರಭು ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ವಿಧಾನ ಪರಿಷತ್ ಸದಸ್ಯರಾದ ಎಸ್.ರುದ್ರೇಗೌಡ, ಆಯನೂರು ಮಂಜುನಾಥ್, ಕೆಪಿಎಸ್‌ಸಿ ಸದಸ್ಯ ಡಾ.ರಂಗರಾಜ ವನದುರ್ಗ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್ ಉಪಸ್ಥಿತರಿರುತ್ತಾರೆ. ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಬೆಕ್ಕಿನ ಕಲ್ಮಠದ ದಿನದರ್ಶಿಕೆ ಬಿಡಗಡೆ ಮಾಡಲಿದ್ದಾರೆ.
ಬೆಂಗಳೂರು ಎಂಎಂಕೆಆರ್‌ವಿ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥೆ ಎಸ್.ಎನ್.ಶೀಲಾ ಪ್ರಕಾಶ್ ಶರಣರ ವಚನಗಳಲ್ಲಿ ಲೋಕದೃಷ್ಟಿ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ.ವಿವಿಧ ಕ್ಷೇತ್ರಗಳ ಸಾಧಕರಾದ ಪತ್ರ ಬರಹಗಾರ ಶಿವಮೊಗ್ಗದ ತಿಮ್ಮೇಗೌಡ, ವೀರಶೈವ ಮಹಾಸಭಾದ ಜಿಲ್ಲಾಧ್ಯಕ್ಷ ರುದ್ರಮುನಿ ಸಜ್ಜನ್, ಶರಣ್ಯ ಸೇವಾ ಸಂಸ್ಥೆ ಕಾರ್ಯದರ್ಶಿ ಡಿ.ಎಲ್.ಮಂಜುನಾಥ್, ಯುನೈಟೆಡ್ ಸಮಾಜ ಕಲ್ಯಾಣ ಸೇವಾ ಸಂಸ್ಥೆ ಅಧ್ಯಕ್ಷ ಬಾಸೂರು ತಿಪ್ಪೇಸ್ವಾಮಿ ಹಾಗೂ ಸಮಾಜ ಸೇವಕಿ ಜಯಾ ಸುರೇಶ್ ಅವರನ್ನು ಸನ್ಮಾನಿಸಲಾಗುವುದು.ಶಿವ ಭಜನಾ ಸ್ಪರ್ಧೆ:ಜ. 9ರ ಬೆಳಗ್ಗೆ 10ಕ್ಕೆ ಶಿವ ಭಜನಾ ಸ್ಪರ್ಧೆ ಏರ್ಪಡಿಸಲಾಗಿದೆ. ಜಡೆ ಸಂಸ್ಥಾನ ಮಠದ ಶ್ರೀ ಡಾ.ಮಹಾಂತ ಸ್ವಾಮೀಜಿ ಹಾಗೂ ರಾಮದುರ್ಗದ ಶ್ರೀ ಶಾಂತವೀರ ಸ್ವಾಮೀಜಿ ಸಮ್ಮುಖದಲ್ಲಿ ಕವಲೇದುರ್ಗದ ಶ್ರೀ ಡಾ.ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸ್ಪರ್ಧೆ ಉದ್ಘಾಟಿಸಲಿದ್ದಾರೆ. ಅದೇ ದಿನ ಸಂಜೆ 5ಕ್ಕೆ 5 ರಿಂದ 10 ವರ್ಷದ ಮಕ್ಕಳಿಗೆ ಸರ್ವಧರ್ಮ ಮಹಾಪುರುಷರ ವೇಷಭೂಷಣ ಸ್ಪರ್ಧೆ ಏರ್ಪಡಿಸಲಾಗಿದೆ. ಜ 10ರ ಬೆಳಗ್ಗೆ 10ಕ್ಕೆ ವಚನ ಕಂಠಪಾಠ, ವಚನಗಾಯನ, ರಂಗೋಲಿ ಹಾಗೂ ಜನಪದ ಗೀತೆ ಸ್ಪರ್ಧೆ ಏರ್ಪಡಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − fourteen =
Remember me
